Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು: ಜಿಲ್ಲಾದ್ಯಂತ ಚಾರಣ...

ಚಿಕ್ಕಮಗಳೂರು: ಜಿಲ್ಲಾದ್ಯಂತ ಚಾರಣ ಪ್ರವಾಸೋದ್ಯಮ ಬಂದ್

ವಾರ್ತಾಭಾರತಿವಾರ್ತಾಭಾರತಿ4 Feb 2024 11:27 PM IST
share
ಚಿಕ್ಕಮಗಳೂರು: ಜಿಲ್ಲಾದ್ಯಂತ ಚಾರಣ ಪ್ರವಾಸೋದ್ಯಮ ಬಂದ್

ಚಿಕ್ಕಮಗಳೂರು: ಕಾಫಿನಾಡು ಪ್ರಕೃತಿ ವೈಭವದ ಒಡಲಾಗಿದೆ. ಇಲ್ಲಿ ಧಾರ್ಮಿಕ ಪ್ರವಾಸೋದ್ಯಮ, ಪ್ರಾಕೃತಿಕ ಪ್ರವಾಸೋದ್ಯಮದ ಜತೆಗೆ ಪರಿಸರವನ್ನು ಹತ್ತಿರದಿಂದ ಅನುಭವಿಸಿ ಆನಂದಿಸುವ ಚಾರಣ ಪ್ರವಾಸೋದ್ಯಮವೂ ಇದೆ. ಚಾರಣ ಪ್ರವಾಸೋದ್ಯಮಕ್ಕೆ ಕಡಿವಾಣ ಹಾಕಲು ಸರಕಾರ ಮುಂದಾಗಿದ್ದು, ಆನ್‍ಲೈನ್ ಬುಕ್ಕಿಂಗ್ ವ್ಯವಸ್ಥೆಯಂತಹ ಕಠಿಣ ನಿಯಮಗಳನ್ನು ಹೇರಲು ಸರಕಾರ ಮುಂದಾಗಿರುವುದರಿಂದ ಚಾರಣ ಪ್ರಿಯರು ಇನ್ನು ಮುಂದೆ ಬೇಕಾಬಿಟ್ಟಿ ಬೆಟ್ಟ ಗುಡ್ಡ ಹತ್ತುವಂತಿಲ್ಲ. ಚಾರಣ ಹೊರಡುವವರು ಇನ್ನು ಮುಂದೆ ಆನ್‍ಲೈನ್‍ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳುವುದು ಕಡ್ಡಾಯವಾಗಲಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎತ್ತಿನಭುಜ, ರಾಣಿಝೇರಿ, ಕೆಮ್ಮಣ್ಣಗುಂಡಿ ಸೇರಿದಂತೆ ಅನೇಕ ಟ್ರಕ್ಕಿಂಗ್ ಸ್ಪಾಟ್‍ಗಳಿವೆ. ಟ್ರಕ್ಕಿಂಗ್ ಸ್ಪಾಟ್‍ಗಳಿಗೆ ಜನರು ಮನಸೋ ಇಚ್ಚೆ ಬೇಟಿ ನೀಡುತ್ತಿದ್ದು, ಇದು ಇಲ್ಲಿನ ವನ್ಯಜೀವಿಗಳಿಗೆ ಪ್ರತಿನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಕಾರಣಕ್ಕೆ ಸರಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸರಕಾರ ಮುಂದಾಗಿದ್ದು, ಸದ್ಯ ಜಿಲ್ಲೆಯಲ್ಲಿ ಟ್ರಕ್ಕಿಂಗ್ ಬಂದ್‍ಗೊಳಿಸಲಾಗಿದೆ. ಸರಕಾರ ನಿಯಮಗಳನ್ನು ಜಾರಿಗೊಳಿಸುವರೆಗೂ ಟ್ರಕ್ಕಿಂಗ್ ಪ್ರಿಯರು ಕಾಯಬೇಕಿದೆ.

ಇತ್ತೀಚೆಗೆ ಪಶ್ಚಿಮಘಟ್ಟದ ಕುಮಾರ ಪರ್ವತದಲ್ಲಿ ಚಾರಣ ಹೊರಟ ಜನರ ದೊಡ್ಡ ಗುಂಪು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಎಚ್ಚೆತ್ತುಕೊಂಡಿರುವ ಸರಕಾರ ಈ ನಿಯಮಗಳ ಜಾರಿಗೆ ಮುಂದಾಗಿದೆ. ಆನ್‍ಲೈನ್ ಬುಕ್ಕಿಂಗ್‍ನಿಂದ ನಿರ್ದಿಷ್ಟ ಜನರು ಮಾತ್ರ ಟ್ರಕ್ಕಿಂಗ್‍ಗೆ ಹೋಗಬೇಕು. ಜನದಟ್ಟಣೆ ಕಡಿವಾಣ ಬಿಳಲಿದೆ. ವನ್ಯ ಪ್ರಾಣಿಗಳಿಗೆ ಕಿರಿಕಿರಿಯಾಗದಂತೆ ನಡೆದುಕೊಳ್ಳುವುದರ ಜತೆಗೆ ಪ್ಲಾಸ್ಟಿಕ್ ಸೇರಿದಂತೆ ಮಧ್ಯದ ಬಾಟಲಿಗಳು, ತಿಂಡಿ ತಿನಿಸುಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಬಿಳಲಿದೆ. ಈ ನಿಟ್ಟಿನಲ್ಲಿ ಸರಕಾರ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ.

ಮಲೆನಾಡು ಭಾಗದಲ್ಲಿ ವಾರಾಂತ್ಯ ಬಂದರೇ ಪ್ರವಾಸಿತಾಣಗಳು ಜನಜಂಗುಳಿಯಿಂದ ತುಂಬಿರುವುದು ಸಾಮಾನ್ಯವಾಗಿ ಬಿಟ್ಟಿದೆ. ಬೆಂಗಳೂರು ಸೇರಿದಂತೆ ಮಹಾನಗರಗಳ ದಿನನಿತ್ಯದ ಜಂಜಾಟದಿಂದ ರಿಲ್ಯಾಕ್ಸ್ ಮಾಡಲು ಇಲ್ಲಿಗೆ ಬರುತ್ತಾರೆ. ವಾರಾಂತ್ಯದ ದಿನಗಳಲ್ಲಿ ಮಲೆನಾಡಿನ ಯಾವುದೇ ಕಾಡಿನ ರಸ್ತೆಗಳನ್ನು ನೋಡಿದರೂ ವಾಹನಗಳ ಸಾಲು, ಕರ್ಕಶ ಶಬ್ಧ, ಪ್ಲಾಸ್ಟಿಕ್ ಗಳಿಂದಾಗಿ ಕಾಡಿನ ವನ್ಯಜೀವಿಗಳಿಗೆ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ.

ಪ್ರವಾಸಿಗರು ಜವಬ್ದಾರಿಯಿಂದ ನಡೆದುಕೊಳ್ಳದೆ ಬೇಕಾಬಿಟ್ಟಿಯಾಗಿ ನಡೆದುಕೊಳ್ಳುತ್ತಿರುವುದರಿಂದ ವನ್ಯಜೀವಿಗಳಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ಪೋಟೋ ಕ್ಲಿಕ್ಕಿಸಿಕೊಳ್ಳುವ ಹುಂಬತನದಿಂದ ಅವಘಡಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಒಂದಿಷ್ಟು ನಿಯಮಗಳನ್ನು ರೂಪಿಸಬೇಕೆಂಬ ಕೂಗು ಜಿಲ್ಲೆಯಲ್ಲಿ ಪರಿಸರ ಪ್ರೇಮಿಗಳಿಂದ ಕೇಳಿ ಬಂದಿದೆ.

ಜಿಲ್ಲೆಯಲ್ಲಿ ಅನೇಕ ಪ್ರವಾಸಿತಾಣಗಳ ಜತೆಗೆ ಚಾರಣ ಕೇಂದ್ರಗಳಿವೆ. ಸರಕಾರ ಚಾರಣ ಪ್ರದೇಶದಲ್ಲಿ ಚಾರಣಕ್ಕೆ ತೆರಳಲು ಕೆಲವು ನಿಯಮಗಳನ್ನು ರೂಪಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಚಾರಣ ಕೇಂದ್ರಗಳನ್ನು ಬಂದ್ ಮಾಡಲಾಗಿದೆ. ಚಾರಣ ತೆರಳುವವರು ಆನ್‍ಲೈನ್‍ನಲ್ಲಿ ಬುಕ್ ಮಾಡಬೇಕು. ನಿರ್ದಿಷ್ಟ ಸಂಖ್ಯೆಯ ಜನರು ಚಾರಣಕ್ಕೆ ತೆರಳಲು ಅವಕಾಶ ನೀಡಲಾಗುತ್ತದೆ. ಚಾರಣ ತೆರಳಿದಾಗ ಅಲ್ಲಿ ಹೇಗೆ ನಡೆದುಕೊಳ್ಳಬೇಕೆಂಬ ನಿಯಮಗಳನ್ನು ರೂಪಿಸಲಾಗುತ್ತದೆ. ಸರಕಾರ ನಿಯಮಗಳನ್ನು ರೂಪಿಸುತ್ತಿದ್ದು, ಅಲ್ಲಿಯವರೆಗೂ ಚಾರಣಕ್ಕೆ ಜಿಲ್ಲಾದ್ಯಂತ ಅವಕಾಶ ಇರುವುದಿಲ್ಲ.

ರಮೇಶ್‍ಬಾಬು, ಡಿಎಫ್‍ಒ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X