Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು| ಬಾಬಾಬುಡನ್ ದರ್ಗಾದಲ್ಲಿ...

ಚಿಕ್ಕಮಗಳೂರು| ಬಾಬಾಬುಡನ್ ದರ್ಗಾದಲ್ಲಿ ವಿಜೃಂಭಣೆಯಿಂದ ನಡೆದ ಗ್ಯಾರವಿ ಹಬ್ಬ

ವಾರ್ತಾಭಾರತಿವಾರ್ತಾಭಾರತಿ10 Jan 2024 11:07 PM IST
share

ಚಿಕ್ಕಮಗಳೂರು: ಹಿಂದೂ-ಮುಸಲ್ಮಾನರ ಭಾವೈಕ್ಯ ಕೇಂದ್ರವಾಗಿರುವ ಬಾಬಾಬುಡನ್ ದರ್ಗಾದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಸಂಕೇತವಾಗಿ ಮುಸ್ಲಿಂ ಸಮುದಾಯದ ಮುಖಂಡರು ಇತ್ತೀಚೆಗೆ ಗ್ಯಾರವಿ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದರು.

ಕರ್ನಾಟಕ ರಾಜ್ಯ ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ಯಾರವಿ ಹಬ್ಬದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ಹೊರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಹಬ್ಬ ಆಚರಣೆಯಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.

ಹಿಂದೂ-ಮುಸಲ್ಮಾನರ ಭಾವೈಕ್ಯತೆಯ ಕೇಂದ್ರವಾಗಿರುವ ಬಾಬಾಬುಡನ್ ದರ್ಗಾದಲ್ಲಿ ಹಿಂದೂ-ಮುಸಲ್ಮಾನರ ಧಾರ್ಮಿಕ ಆಚರಣೆಗೆ ಮುಕ್ತ ಅವಕಾಶ ಕಲ್ಪಿಸಬೇಕು, ಎಲ್ಲರೂ ಒಂದಾಗಿ ಬಾಳಬೇಕೆಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಪ್ರಪಂಚದ ಮಾನವ ಕುಲಕ್ಕೂ, ಸಕಲ ಜೀವ ರಾಶಿಗಳಿಗೂ ಒಳಿತಾಗಬೇಕೆಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮುಜುರಾಯಿ ಇಲಾಖೆಯಿಂದ ರಚಿಸಿರುವ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿ, ಸರ್ವಧರ್ಮೀಯರಿಗೂ ಒಂದೇ ರೀತಿಯ ಮುಕ್ತವಾದ ಪೂಜೆಗೆ ಅವಕಾಶ ಮಾಡಿಕೊಡಬೇಕೆಂದು. ಈ ವೇಳೆ ಕರ್ನಾಟಕ ರಾಜ್ಯ ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ಜಿಲ್ಲಾಧ್ಯಕ್ಷ ಜಂಷೀದ್‍ಖಾನ್ ಈ ವೇಳೆ ಸರಕಾರವನ್ನು ಆಗ್ರಹಿಸಿದರು.

ಹಬ್ಬದ ವೇಳೆ ಚಿಕ್ಕಮಗಳೂರು ನಗರದ ಫಕೀರರಿಂದ ಪ್ರಾರ್ಥನೆ ಸಲ್ಲಿಸಲಾಯಿತು. ವಿವಿಧ ಮಸೀದಿಗಳ ಗುರುಗಳು ಸೇರಿದಂತೆ ಬಳ್ಳಾರಿಯಿಂದ ಆಗಮಿಸಿದ್ದ ಮುಫ್ತಿ ಸೌಫಿ ಮೌಲಾನ ಇರ್ಷಾದ್ ಗುರುಗಳ ಸಮ್ಮುಖದಲ್ಲಿ ಗಿರಿಯಲ್ಲಿರುವ ಗುಹೆಯೊಳಗೆ ಹೂವುಗಳನ್ನು ಸಮರ್ಪಿಸಿ, ಎಲ್ಲೆಡೆ ಶಾಂತಿ, ಸೌಹಾರ್ಧತೆ ನೆಲೆಸಲಿ ಎಂದು ಪ್ರಾರ್ಥನೆ ಮಾಡಲಾಯಿತು.

ಗಿರಿ ಪ್ರದೇಶದಲ್ಲಿರುವ ಕೆಲವು ಕಾಫಿ ಬೆಳೆಗಾರರು ತಾವುಗಳು ತಂದಿದ್ದ ಕಾಫಿ ಬೀಜಗಳನ್ನು ಜಮಾಲ್ ಶಾ ಮಕ್ರುಬಿ, ಕಮಾಲ್ ಶಾ ಮಕ್ರುಬಿ ಗುರುವಿಗೆ ಸಮರ್ಪಿಸಿದರು. ಬಾಬಾಬುಡನ್ ವಂಶಸ್ಥರಾದ ಸೈಯದ್ ಫಕ್ರುದ್ದೀನ್ ಶಾಖಾದ್ರಿ ಹಾಗೂ ಬಳ್ಳಾರಿಯ ಸೂಫಿ ಗುರುಗಳಾದ ಶಮೀರ್ ಶೇಠ್ ಖಲಂದರ್, ಜಸ್ತೀ ಸಾಬ್ರಿ ಮತ್ತು ಚಿಕ್ಕಮಗಳೂರು ನಗರದ ಮುಖಂಡ ಮಹಮ್ಮದ್ ಮತ್ತಿತರರು ಗ್ಯಾರವಿ ಹಬ್ಬ ಆಚರಣೆಯಲ್ಲಿ ಭಾಗವಹಿಸಿದ್ದರು.

ರಾಜ್ಯ ಹಜರತ್ ಟಿಪ್ಪೂ ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ಕಾರ್ಯಕರ್ತತಾದ ಸಜೀಲ್ ಅಹಮ್ಮದ್, ಸೈಯದ್ ಹಬೀದ್ ರಿಜ್ವಾನ್, ಆಸಿಫ್, ಅಬ್ದುಲ್ ರೆಹಮಾನ್, ತನ್ವೀರ್ ಮತ್ತು ರಾಘವೇಂದ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X