ಚಿಕ್ಕಮಗಳೂರು: ತಾಯಿಯ ಹತ್ಯೆಗೈದ ಪುತ್ರಿಯ ಬಂಧನ

ಆರೋಪಿ ಸುಧಾ
ಚಿಕ್ಕಮಗಳೂರು: ಮಹಿಳೆಯೊಬ್ಬರನ್ನು ಆಕೆಯ ಪುತ್ರಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಕುಸುಮಾ(62) ಹತ್ಯೆಯಾದ ಮಹಿಳೆ. ಸುಧಾ(35) ಹತ್ಯೆ ಮಾಡಿದ ಆರೋಪಿ ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಮೂಲತಃ ಬೇರೆ ಊರಿನಿಂದ ಕೂಲಿ ಕೆಲಸಕ್ಕೆಂದು ಬಂದು ಬಂಡಿಮಠದಲ್ಲಿ ಈ ಕುಟುಂಬ ನೆಲೆಸಿತ್ತು.
ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿಯನ್ನು ತಲೆದಿಂಬು ಬಳಸಿ ಸುಧಾ ಹತ್ಯೆ ಮಾಡಿದ್ದಾಳೆ. ನಂತರ ಮೃತದೇಹದ ಬಗ್ಗೆ ಯಾವುದೇ ಅನುಮಾನ ಬಾರದಂತೆ ಸಹಜ ಸಾವು ಎಂದು ಬಿಂಬಿಸಲು ಮುಂದಾಗಿದ್ದಾಳೆ. ಆದರೆ ಪೊಲೀಸರು ನಡೆಸಿದ ತನಿಖೆಯಲ್ಲಿ ಇದು ಸಹಜ ಸಾವಲ್ಲ, ಕೊಲೆ ಎಂಬುದು ಸಾಬೀತಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ.
Next Story





