Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಸಂಘ ಪರಿವಾರ ಕರೆ ನೀಡಿರುವ ಚಿಕ್ಕಮಗಳೂರು...

ಸಂಘ ಪರಿವಾರ ಕರೆ ನೀಡಿರುವ ಚಿಕ್ಕಮಗಳೂರು ಜಿಲ್ಲಾ ಬಂದ್‌ಗೆ ಅನುಮತಿ ನೀಡಿಲ್ಲ : ಡಿಸಿ ಮೀನಾ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ4 May 2025 11:15 PM IST
share
ಸಂಘ ಪರಿವಾರ ಕರೆ ನೀಡಿರುವ ಚಿಕ್ಕಮಗಳೂರು ಜಿಲ್ಲಾ ಬಂದ್‌ಗೆ ಅನುಮತಿ ನೀಡಿಲ್ಲ : ಡಿಸಿ ಮೀನಾ ನಾಗರಾಜ್

ಚಿಕ್ಕಮಗಳೂರು: ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಹಾಗೂ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಮೇ 5ರಂದು ಕರೆ ನೀಡಿದ್ದ ಜಿಲ್ಲಾ ಬಂದ್‌ಗೆ ಯಾವುದೇ ಅನುಮತಿ ನೀಡಿಲ್ಲ. ಈ ವಿಚಾರದಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ರವಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಪರಿವಾರದವರು ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಗೆ ಮುಂಚಿತವಾಗಿ ಮಾಹಿತಿ ನೀಡದೆ, ಅನುಮತಿಯನ್ನೂ ಪಡೆಯದೆ ಸಾಮಾಜಿಕ ಜಾಲತಾಣಗಳಲ್ಲಿ ಬಂದ್‌ಗೆ ಕರೆ ನೀಡಿರುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಬಂದ್ ಕರೆಗೆ ಅವಕಾಶ ನಿರಾಕರಿಸಲಾಗಿದೆ ಎಂದು ತಿಳಿಸಿದರು.

ಬಂದ್-ಪ್ರತಿಭಟನೆ ಸಂಬಂಧ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ, ಅನುಮತಿ ಪಡೆಯಬೇಕಾಗುತ್ತದೆ. ಆದರೆ ಸಂಘಪರಿವಾರದವರು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಸೋಮವಾರ ಬಂದ್‌ಗೆ ಕರೆ ನೀಡಿವೆ. ಕಾನೂನು ಪ್ರಕಾರ ಇದಕ್ಕೆ ಅವಕಾಶ ಇರುವುದಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಆದೇಶಗಳಿರುವ ಬಗ್ಗೆ ಸಂಘಟಕರಿಗೆ ಮನವರಿಕೆ ಮಾಡಿದ್ದೇವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಅಮಟೆ ಮಾತನಾಡಿ, ರವಿವಾರ ಬೆಳಗ್ಗೆಯಿಂದ ವಿಶ್ವಹಿಂದೂ ಪರಿಷತ್, ಬಜರಂಗದಳದ ಸಾಮಾಜಿಕ ಜಾಲತಾಣ ಗ್ರೂಪ್‌ಗಳಲ್ಲಿ ಸೋಮವಾರ ಜಿಲ್ಲಾ ಬಂದ್ ಕರೆ ಕೊಟ್ಟಿರುವುದಾಗಿ ಪೋಸ್ಟ್ ಹಾಕಲಾಗಿದೆ. ಆದರೆ, ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎರಡೂ ಸಂಘಟನೆಗಳ ಮುಖಂಡರ ಸಭೆ ನಡೆಸಿ ದಿಢೀರ್ ಬಂದ್ ಕರೆಗೆ ಅವಕಾಶ ಇಲ್ಲ ಎನ್ನುವುದನ್ನು ಮನವರಿಕೆ ಮಾಡಿದ್ದೇವೆ. ನ್ಯಾಯಾಲಯದ ಆದೇಶಗಳ ಕುರಿತು ಮಾಹಿತಿ ನೀಡಿದ್ದೇವೆ ಎಂದರು.

ಪ್ರತಿಭಟನೆ, ಬಂದ್‌ಗೆ ಸಂಬಂಧಿಸಿದಂತೆ ಯಾವುದೇ ಸಂಘಟನೆಗಳ ಪರವಾಗಿ ಜವಾಬ್ದಾರಿ ತೆಗೆದುಕೊಳ್ಳುವವರು ಮುಂಚಿತವಾಗಿ ಬರವಣಿಗೆಯಲ್ಲಿ ಅನುಮತಿ ಕೇಳಿದರೆ ಕಾನೂನು ಪ್ರಕಾರ ಅವಕಾಶ ನೀಡಲಾಗುವುದು. ಆದರೆ ಇದುವರೆಗೂ ಯಾರೂ ಅನುಮತಿ ಕೋರಿಲ್ಲ, ಅನುಮತಿ ಇಲ್ಲದೇ ಬಂದ್‌ಗೆ ಕರೆ ನೀಡುವಂತಿಲ್ಲ. ಇದನ್ನು ಮೀರಿ ಸೋಮವಾರ ಯಾರಾದರೂ ಬಂದ್, ಪ್ರತಿಭಟನೆಗೆ ಮುಂದಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಕೋರ್ಟ್‌ನ ಆದೇಶ ಪ್ರತಿಗಳನ್ನು ಲಗತ್ತಿಸಿ ಸಂಘಟನೆ ಮುಖಂಡರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

"ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಪಿಯುಸಿ ಪೂರಕ ಪರೀಕ್ಷೆಗಳು ಹಾಗೂ 8 ಕಡೆಗಳಲ್ಲಿ ವಾರದ ಸಂತೆ ನಡೆಯಲಿದೆ. ದಿಢೀರ್ ಬಂದ್‌ಗೆ ಕರೆ ಕೊಟ್ಟರೆ ದೈನಂದಿನ ಚಟುವಟಿಕೆಗೆ ಸಮಸ್ಯೆ ಆಗುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ ಬಂದ್ ಕರೆಗೆ ಅನುಮತಿ ನಿರಾಕರಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ"

ಮೀನಾ ನಾಗರಾಜ್, ಜಿಲ್ಲಾಧಿಕಾರಿ

ಸೋಮವಾರ ಜಿಲ್ಲೆಯಲ್ಲಿ ಯಾವುದೇ ಬಂದ್ ಇರುವುದಿಲ್ಲ. ಈ ವಿಚಾರದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಸಂಘಟನೆಗಳು ಈ ವಿಚಾರದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿವೆ.

ಡಾ.ವಿಕ್ರಮ ಅಮಟೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X