Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮೋದಿ ಸರಕಾರದ ಆಡಳಿತದಿಂದ ಕಂಗೆಟ್ಟಿದ್ದ...

ಮೋದಿ ಸರಕಾರದ ಆಡಳಿತದಿಂದ ಕಂಗೆಟ್ಟಿದ್ದ ಜನರಿಗೆ ʼಗ್ಯಾರಂಟಿʼಗಳು ಆರ್ಥಿಕ ಶಕ್ತಿ ನೀಡಿದೆ : ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ16 April 2024 6:40 PM IST
share
ಮೋದಿ ಸರಕಾರದ ಆಡಳಿತದಿಂದ ಕಂಗೆಟ್ಟಿದ್ದ ಜನರಿಗೆ ʼಗ್ಯಾರಂಟಿʼಗಳು ಆರ್ಥಿಕ ಶಕ್ತಿ ನೀಡಿದೆ : ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು : ದೇಶದ ಭವಿಷ್ಯವನ್ನು ಸದೃಢಗೊಳಿಸುವ ಹಾಗೂ ಯುವಪೀಳಿಗೆಯನ್ನು ಜಾತ್ಯತೀತವಾಗಿ ಮುಂಚೂಣಿಗೆ ತರುವುದೇ ಕಾಂಗ್ರೆಸ್ ಪಕ್ಷದ ಮೂಲಧ್ಯೇಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ನಗರದ ನಿರಂತರ ಸಮುದಾಯ ಭವನದಲ್ಲಿ ಆರಂಭಿಸಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ವಾರ್ ರೂಮ್‍ಗೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಅವರು, "ಯುವಕರನ್ನು ಉದ್ಯೋಗವಂತರನ್ನಾಗಿ ಮಾಡುತ್ತೇವೆಂದು ಕೇಂದ್ರ ಸರಕಾರ ಸುಳ್ಳನೇ ಹೇಳಿಕೊಂಡು ರಾಜಕಾರಣ ಮಾಡುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರಕಾರದ ಆಡಳಿತದಿಂದಾಗಿ ಜನಸಾಮಾನ್ಯರು ಬೆಲೆಏರಿಕೆಯಂತಹ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹೀಗೆ ಸಂಕಷ್ಟದಲ್ಲಿರುವ ಜನರಿಗೆ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ವರದಾನವಾಗಿವೆ" ಎಂದರು.

ರಾಜ್ಯದಲ್ಲಿ ಸುಮಾರು 1.65 ಕೋಟಿ ಮನೆಗಳಿಗೆ ಉಚಿತ ವಿದ್ಯುತ್, ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಮೂಲಕ ಆರ್ಥಿಕ ಶಕ್ತಿಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಉಚಿತ ಅಕ್ಕಿ ವಿತರಣೆಯಲ್ಲೂ ಮಾತನ್ನು ತಪ್ಪದೇ ಪ್ರಾಮಾಣಿಕವಾಗಿ ನಡೆದುಕೊಂಡಿರುವುದು ರಾಜ್ಯದ ಕಾಂಗ್ರೆಸ್ ಸರಕಾರ, ಬಡವರ ಪಾಲಿನ ಅಕ್ಕಿಯನ್ನು ನೀಡದೇ ನಾಟಕವಾಡುತ್ತಿರುವುದು ಕೇಂದ್ರ ಸರಕಾರ ಎಂಬುದನ್ನು ಜನರು ಅರಿಯಬೇಕಿದೆ. ಕಾಂಗ್ರೆಸ್ ಪಕ್ಷ ಹಿಂದೆಯೂ ಜನಪರ ಆಡಳಿತ ನೀಡಿದೆ, ಈಗಲೂ ನೀಡುತ್ತಿದೆ, ಮುಂದೆಯೂ ನೀಡುತ್ತದೆ. ದೇಶದ ಜನರ ಕಷ್ಟ ಪರಿಹಾರ ಹಾಗೂ ಸರ್ವತೋಮುಖ ಏಳಿಗೆಗೆ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್, ಮುಖಂಡರಾದ ಹರೀಶ್, ನಯಾಝ್, ಶ್ರೀಕಾಂತ್, ಪ್ರದೀಪ್, ಅನ್ಸರ್ ಆಲಿ, ಕೆ.ಭರತ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X