CHIKKAMAGALURU | ಮುಳ್ಳಯ್ಯನಗಿರಿಯಲ್ಲಿ ಶಾಲಾ ಮಕ್ಕಳಿದ್ದ ಜೀಪ್ ಪಲ್ಟಿ: ಆರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಮುಳ್ಳಯ್ಯನಗಿರಿಗೆ ಪ್ರವಾಸ ಬಂದಿದ್ದ ಶಾಲಾ ಮಕ್ಕಳಿದ್ದ ಜೀಪ್ ಪಲ್ಟಿಯಾಗಿ ಆರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಕೇರಳ ಮೂಲದ ಶಾಲೆಯೊಂದರ ವಿದ್ಯಾರ್ಥಿಗಳು ಟ್ರಾವೆಲ್ ಏಜೆನ್ಸಿ ಮೂಲಕ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದರು. ಮುಳ್ಳಯ್ಯನಗಿರಿಗೆ ದೊಡ್ಡ ಬಸ್ಗಳ ಪ್ರವೇಶ ಕಠಿಣವಾಗಿರುವುದರಿಂದ, ಬಸ್ ನಿಲ್ಲಿಸಿ ವಿದ್ಯಾರ್ಥಿಗಳನ್ನು ಜೀಪ್ ಮೂಲಕ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಕಾರಣ ನಿಯಂತ್ರಣ ತಪ್ಪಿದ ಜೀಪ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಇದರಿಂದ ಆರು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕ ಪರಾರಿ: ಅಪಘಾತ ಸಂಭವಿಸುತ್ತಿದ್ದಂತೆಯೇ ಗಾಬರಿಗೊಂಡ ಜೀಪ್ ಚಾಲಕ ಜೀಪನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಸ್ಥಳೀಯರು ಗಾಯಾಳು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





