Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮೂಡಿಗೆರೆ ಶಾಸಕಿಯನ್ನು ಪಕ್ಷದಿಂದ...

ಮೂಡಿಗೆರೆ ಶಾಸಕಿಯನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಕೆ.ಮುಹಮ್ಮದ್

ವಾರ್ತಾಭಾರತಿವಾರ್ತಾಭಾರತಿ31 Jan 2026 10:26 PM IST
share
ಮೂಡಿಗೆರೆ ಶಾಸಕಿಯನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಕೆ.ಮುಹಮ್ಮದ್
ಚಿಕ್ಕಮಗಳೂರು ಜಿಲ್ಲಾ ಮುಸ್ಲಿಮ್ ಒಕ್ಕೂಟದ ಸಭೆ

ಚಿಕ್ಕಮಗಳೂರು : ಜಿಲ್ಲೆಯಲ್ಲಿರುವ ಮುಸ್ಲಿಮ್ ಸಮುದಾಯ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸೂಕ್ತ ಸ್ಪಂದನ ಸಿಗುತ್ತಿಲ್ಲ ಎಂಬ ನೋವು ಸಮಾಜದಲ್ಲಿದೆ. ಆದ್ದರಿಂದ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾ ಮುಸ್ಲಿಮ್ ಒಕ್ಕೂಟ ರಚನೆಗೊಂಡಿದೆ ಎಂದು ಜಿಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ತಿಳಿಸಿದ್ದಾರೆ.

ನಗರದ ಜಿ.ಕೆ.ಪ್ಯಾಲೇಸ್ ಸಭಾಭವನದಲ್ಲಿ ಶನಿವಾರ ನಡೆದ ಚಿಕ್ಕಮಗಳೂರು ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪ್ರಥಮ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.

ಮೂಡಿಗೆರೆಯಲ್ಲಿ ನಮ್ಮ ಮತಗಳನ್ನು ಪಡೆದು ಶಾಸಕಿಯಾದ ನಯನಾ ಮೋಟಮ್ಮ ಅವರು ಕೋಮುವಾದಿಯೊಬ್ಬ ಭಾಗವಹಿಸಿದ್ದ ಸಭೆಯಲ್ಲಿ ಮಾತನಾಡಿ, ಆ ವ್ಯಕ್ತಿಯನ್ನು ಕೊಂಡಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದ ಬಗ್ಗೆ ಬೇಸತ್ತ ಮೂಡಿಗೆರೆಯ ನಮ್ಮ ಮುಖಂಡರು ಸಭೆ ಸೇರಿ ಶಾಸಕಿಯನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಅವರು, ನನ್ನನ್ನು ಬ್ಲ್ಯಾಕ್‌ಮೇಲ್ ಮಾಡುತ್ತೀರಾ ಎಂದು ಪ್ರಶ್ನಿಸಿ, ಮುಖಂಡರ ಕರೆಗೆ ಸ್ಪಂದಿಸಲಿಲ್ಲ ಎಂದು ಆರೋಪಿಸಿದರು.

ಈ ಶಾಸಕಿಯ ಬಗ್ಗೆ ಅವರ ಪಕ್ಷದ ಹಿರಿಯ ನಾಯಕರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇಂತಹವರನ್ನು ಪಕ್ಷವು ಉಚ್ಛಾಟನೆ ಮಾಡಬೇಕಿತ್ತು. ಇಂತಹ ಭಾಷಣ ಮಾಡಿದ ಶಾಸಕಿಯನ್ನು ಬೆಂಬಲಿಸಿ ಪಕ್ಷದ ಪ್ರಧಾನ ಕಾರ್ಯದರ್ಶಿಯೊಬ್ಬರು ಶಾಸಕಿಗೆ ಪತ್ರ ಬರೆದಿದ್ದಾರೆ. ಅಂತಹವರಿಗೆ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸ್ಥಾನ ಸಿಕ್ಕಿದೆ. ನಮ್ಮ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ, ಎಂ.ಎಲ್.ಮೂರ್ತಿ ಅಂತಹವರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗಿದೆ. ನಮ್ಮ ಸಮುದಾಯದ ಬೆಂಬಲಕ್ಕೆ ನಿಂತಿದ್ದ ಮೂರ್ತಿಯವರ ಬೆಂಬಲಕ್ಕೆ ಇಡೀ ಸಮಾಜ ನಿಲ್ಲಬೇಕಿದೆ. ಮುಂಬರುವ ತಾಲೂಕು, ಜಿಪಂ ಚುನಾವಣೆಯ ಸಂದರ್ಭದಲ್ಲಿ ಈ ರೀತಿ ನಮ್ಮ ಸಮಾಜದ ಬಗ್ಗೆ ಅಸಡ್ಡೆ ತೋರಿದರೆ ನಾವು ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಸ್ಲಿಮ್ ಸಮಾಜಕ್ಕೆ ಮಂಜೂರಾದ ಅನುದಾನ ಪೂರ್ಣ ಪ್ರಮಾಣದಲ್ಲಿ ಸರಕಾರ ಬಿಡುಗಡೆಗೊಳಿಸಲಿಲ್ಲ. ಮುಸ್ಲಿಮ್ ಸಮಾಜಕ್ಕೆ ಇದ್ದ ಶೇ.4ರಷ್ಟು ಮೀಸಲಾತಿ ಈ ಹಿಂದಿನ ಸರಕಾರ ರದ್ದುಗೊಳಿಸಿತ್ತು. ಅದನ್ನು ಪುನಃ ಜಾರಿಗೊಳಿಸಲು ಈಗಿನ ಸರಕಾರ ಮುಂದಾಗಲಿಲ್ಲ, ನಮ್ಮ ಸಮುದಾಯದ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಕೆ.ಮುಹಮ್ಮದ್ ಎಚ್ಚರಿಕೆ ನೀಡಿದರು.

ಮುಖಂಡ ಸಿ.ಎನ್.ಅಕ್ಮಲ್ ಮಾತನಾಡಿ, ಕುರ್‌ಆನ್ ಬಗ್ಗೆ ಗೊತ್ತಿಲ್ಲದಿರುವವರು ಅದರ ಬಗ್ಗೆ ಮಾತನಾಡುತ್ತಾರೆ. ಕುರ್‌ಆನ್ ಅಂದರೆ ಶಾಂತಿ. ಮುಸ್ಲಿಮ್ ಸಮುದಾಯ ಜಿಲ್ಲೆಯ ಪ್ರತಿ ಕ್ಷೇತ್ರದಲ್ಲೂ ಶಾಸಕರಾಗಲು ಸಾಮರ್ಥ್ಯ ಹೊಂದಿರುವ ಒಬ್ಬರಾನ್ನದರೂ ಬೆಳೆಸಬೇಕು. ಅದಕ್ಕೆ ಸಮುದಾಯದಲ್ಲಿ ಒಗ್ಗಟ್ಟಿರಬೇಕು ಎಂದು ಕಿವಿಮಾತು ಹೇಳಿದರು.

ಪ್ರತಿ ತಾಲೂಕಿನಲ್ಲೂ ನಮ್ಮ ಸಮುದಾಯದ ಸಂಖ್ಯಾ ಬಲವಿದೆ. ಆದರೂ ನಮಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ. ಸಿಕ್ಕಿದರೆ ನಮ್ಮವರು ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರಾಗುತ್ತಿದ್ದರು. ನಮ್ಮಲ್ಲಿ ಒಗ್ಗಟ್ಟಿಲ್ಲ. 60 ಸಾವಿರ ಸಂಖ್ಯೆ ಇರುವ ಜನಾಂಗಕ್ಕೆ 80 ಶಾಸಕರು ಇರುತ್ತಾರೆ. ಆದರೆ, 1 ಕೋಟಿ ಜನಸಂಖ್ಯೆ ಹೊಂದಿರುವ ಮುಸ್ಲಿಮ್ ಸಮುದಾಯಕ್ಕೆ ಕೇವಲ 15 ಶಾಸಕರು ಮಾತ್ರ. ಇದು ನ್ಯಾಯವೇ ಎಂದು ಸಿ.ಎನ್ ಅಕ್ಮಲ್ ಪ್ರಶ್ನಿಸಿದರು.

ಮುಖಂಡ ಕಿರುಗುಂದ ಅಬ್ಬಾಸ್, ಮೂಡಿಗೆರೆಯ ಸಿ.ಕೆ.ಇಬ್ರಾಹೀಂ, ಕೊಪ್ಪದ ಇಜಾಝ್ ಅಹ್ಮದ್ ಝಾಕಿರ್‌ಹೊರಟಿ, ಅತೀಕ್ ಕೈಸರ್ ಇಬ್ರಾಹೀಂ ಮತ್ತಿತರರು ಮಾತನಾಡಿದರು.

ಸಭೆಯಲ್ಲಿ ನಗರಸಭೆ ಮಾಜಿ ಸದಸ್ಯ ನೂರ್ ಮಹಮ್ಮದ್ ಹಾಗೂ ಇತರರು ಉಪಸ್ಥಿತರಿದ್ದರು.





Tags

Chikkamagalur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X