ಕೊಪ್ಪ: ಪ್ರವಾಸಿ ಬಸ್ ಪಲ್ಟಿ; ಮೂವರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ ಪಲ್ಟಿಯಾಗಿ ಮೂವರು ಗಾಯಗೊಂಡಿರುವ ಘಟನೆ ಕೊಪ್ಪ ತಾಲೂಕಿನ ಸೀಗೋಡು ಬಳಿ ಶನಿವಾರ ನಡೆದಿದೆ. ನಿದ್ದೆಗಣ್ಣಿನಿಂದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ, ಘಾಟಿ ರಸ್ತೆಯಲ್ಲಿ ಬಸ್ ಪಲ್ಟಿಯಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 17 ಮಂದಿ ಆಗುಂಬೆ ಕಡೆಗೆ ಪ್ರಯಾಣಿಸುತ್ತಿದ್ದರು. ಬಸ್ಸಿನ ಚಾಲಕನ ಸೇರಿ 17 ಜನರಿದ್ದರು. ಈ ಅಪಘಾತದಲ್ಲಿ ಕಾರ್ತಿಕ್, ಮಧು ಮತ್ತು ಚೈತ್ರ ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story