Mudigere | ಚಾರ್ಮಾಡಿ ಘಾಟಿಯ ಬಿದ್ರುತಳ ಭಾಗದಲ್ಲಿ ಅರಣ್ಯ ಅಗ್ನಿ ಅವಘಡ

ಮೂಡಿಗೆರೆ : ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ಬಿದ್ರುತಳ ಭಾಗದಲ್ಲಿ ರವಿವಾರ ರಾತ್ರಿ ಅರಣ್ಯ ಅಗ್ನಿ ಅವಘಡ ಸಂಭವಿಸಿದೆ.
ರಸ್ತೆಯಿಂದ ಸುಮಾರು ಒಂದುರಿಂದ ಎರಡು ಕಿಲೋಮೀಟರ್ ದೂರದ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಅರಣ್ಯದಲ್ಲಿ ಹೊತ್ತಿಕೊಂಡ ಅಗ್ನಿಯ ಜ್ವಾಲೆಗಳು ದೂರದಿಂದಲೇ ಕಾಣಿಸಿಕೊಂಡಿದ್ದು, ಇದರಿಂದಾಗಿ ಪ್ರದೇಶದಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಂಕಿ ಉಂಟಾಗಲು ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳಿಗೆ ಹಾನಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಗ್ನಿ ನಂದಿಸುವ ಸಲುವಾಗಿ ಅಗ್ನಿಶಾಮಕ ದಳವನ್ನು ಕರೆಸಿ ತುರ್ತು ಕಾರ್ಯಾಚರಣೆ ಕೈಗೊಳ್ಳಲಾಗಿದೆ.
Next Story





