Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಚುನಾವಣೆ...

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಚುನಾವಣೆ | ಕಾನೂನು ತಜ್ಞರ ಸಲಹೆ ಪಡೆದು ಮರು ಮತ ಎಣಿಕೆಗೆ ಮನವಿ : ಬಿಜೆಪಿ ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ

ವಾರ್ತಾಭಾರತಿವಾರ್ತಾಭಾರತಿ8 May 2026 12:47 AM IST
share
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಚುನಾವಣೆ | ಕಾನೂನು ತಜ್ಞರ ಸಲಹೆ ಪಡೆದು ಮರು ಮತ ಎಣಿಕೆಗೆ ಮನವಿ : ಬಿಜೆಪಿ ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ

ಚಿಕ್ಕಮಗಳೂರು, ಮೇ 7: ಕಾನೂನು ತಜ್ಞರ ಸಲಹೆ ಪಡೆದು 2023ರ ಮೂಡಿಗೆರೆ ಕ್ಷೇತ್ರದ ವಿಧಾನಸಭೆ ಚುನಾವಣೆಯ ಮರು ಮತ ಎಣಿಕೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ಬಿಜೆಪಿ ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು 722 ಮತಗಳಿಂದ ಪರಾಜಿತಗೊಂಡಿದ್ದು, ಈ ವೇಳೆ ಮತ ಎಣಿಕೆಯಲ್ಲಿ ಲೋಪ ಆಗಿದೆ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿ ಕೇಳಿ ಬಂದಿತ್ತು. ಅಂದು ಮರು ಮತ ಎಣಿಕೆಗೆ ಮನವಿ ಮಾಡಬೇಕೆಂದು ಕಾರ್ಯಕರ್ತರು, ಮುಖಂಡರು ಒತ್ತಾಯಿಸಿದ್ದರು. ಸದ್ಯ ಶೃಂಗೇರಿ ಕ್ಷೇತ್ರ ಚುನಾವಣೆಯಲ್ಲಿ ಅಂಚೆ ಮತಗಳ ಎಣಿಕೆಯಿಂದ ಬಿಜೆಪಿಗೆ ಅನ್ಯಾಯವಾಗಿರುವ ಸದ್ಯ ರುಜುವಾತಾಗಿದೆ. ಈ ಹಿನ್ನೆಲೆಯಲ್ಲಿ ಮರು ಮತ ಎಣಿಕೆಗೆ ಮನವಿ ಮಾಡುವುದಾಗಿ ತಿಳಿಸಿದರು.

2023ರ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಬಹುಮತಕ್ಕಾಗಿ ವೋಟ್ ಟ್ಯಾಂಪರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಕಳೆದ ವಿಧಾನಸಭೆ ಚುನಾವಣೆಯ ಮತ ಎಣಿಕೆ ವೇಳೆ ಅಂಚೆ ಮತ ಎಣಿಕೆಯಲ್ಲಿ ಲೋಪ ಆಗಿರುವುದನ್ನು ಮನಗಂಡು ಮರು ಮತ ಎಣಿಕೆಗೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯದ ಆದೇಶದಂತೆ ಮರು ಮತ ಎಣಿಕೆ ನಡೆದಿದ್ದು, ಸದ್ಯ ಜೀವರಾಜ್ ಶಾಸಕರಾಗಿ ಆಯ್ಕೆಯಾಗಿರುವುದನ್ನು ಚುನಾವಣಾ ಆಯೋಗ ದೃಢಪಡಿಸಿದೆ ಎಂದರು.

ಕಳೆದ ಚುನಾವಣೆಯಲ್ಲಿ ತಾನು ಬಿಜೆಪಿ ಅಭ್ಯರ್ಥಿಯಾಗಿ ಮೂಡಿಗೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಮತ ಎಣಿಕೆ ವೇಳೆ ನಾನು 722 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿಯಿಂದ ಪರಾಜಿತಗೊಂಡಿದ್ದೆ. ಅತ್ಯಲ್ಪ ಮತಗಳ ಅಂತರದಿಂದ ಸೋತ ಹಿನ್ನೆಲೆಯಲ್ಲಿ ಮತ ಎಣಿಕೆಯಲ್ಲಿ ಲೋಪ ಆಗಿರುವ ಬಗ್ಗೆ ಮುಖಂಡರು, ಕಾರ್ಯಕರ್ತರು ಶಂಕೆ ವ್ಯಕ್ತಪಡಿಸಿ ಮರು ಮತ ಎಣಿಕೆಗೆ ಮನವಿ ಸಲ್ಲಿಸುವಂತೆ ಒತ್ತಾಯಿಸಿದ್ದರು. ಆದರೆ, ಅಂದು ನಾನು ಮರು ಮತ ಎಣಿಕೆಗೆ ಆಗ್ರಹಿಸಿರಲಿಲ್ಲ. ಸದ್ಯ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಜೀವರಾಜ್‌ಗೆ ಅನ್ಯಾಯವಾಗಿರುವುದು ದೃಢಪಟ್ಟಿದ್ದು, ಮೂಡಿಗೆರೆ ಕ್ಷೇತ್ರದಲ್ಲಿ ನನಗೂ ಅನ್ಯಾಯವಾಗಿರುವ ಶಂಕೆ ಈಗ ದಟ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ನಡೆ ಬಗ್ಗೆ ಚಿಂತಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X