Mudigere | ಬಾಲಕಿಗೆ ಲೈಂಗಿಕ ದೌರ್ಜನ್ಯ; ಐವರು ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ | Photo Credit : magnific
ಮೂಡಿಗೆರೆ : ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 5 ಮಂದಿಯ ವಿರುದ್ಧ ಗೋಣಿಬೀಡು ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಕುಶಾ (27), ನಿತೇಶ್ (31), ಸಚಿನ್ (28), ಚಂದ್ರಶೇಖರ್ (31) ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿ ಸುರೇಶ (52) ನ್ಯಾಯಾಲಯದೆದುರು ಶರಣಾಗಿದ್ದಾನೆ.
ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಲೈಂಗಿಕ ದೌರ್ಜನ್ಯ ನಡೆಸಿ ಜೈಲು ಸೇರಿರುವ ಯುವಕರು, ಬಾಲಕಿಯ ಫೋಟೊವನ್ನು ಮೊಬೈಲ್ನಲ್ಲಿ ತೆಗೆದು ಬ್ಲಾಕ್ ಮೇಲ್ ಮಾಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಬಾಲಕಿ ಗೋಣಿಬೀಡು ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ
Next Story




