Mudigere : ಐವರು ಅಕ್ರಮ ಬಾಂಗ್ಲಾ ಪ್ರಜೆಗಳು ವಶಕ್ಕೆ

ಸಾಂದರ್ಭಿಕ ಚಿತ್ರ | PC : AI
ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ಕಾಫಿ ತೋಟಗಳಲ್ಲಿ ನೆಲೆಸಿದ್ದ ಐವರು ಅಕ್ರಮ ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಜಹಾಂಗೀರ್, ಫೈಸುದ್ದಿನ್, ನುಮನ್ ಬಶೀರ್, ಮುಹಮ್ಮದ್ ಹುಮೈನ್ ಹಾಗೂ ಮುಹಮ್ಮದ್ ಹಸೀಬುಲ್ ಎಂಬವರನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ. ಪ್ರಸಕ್ತ ಇವರನ್ನು ಚಿಕ್ಕಮಗಳೂರಿನ ಡಿ.ಆರ್. ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ.
ವಶಕ್ಕೆ ಪಡೆದಿರುವ ಐವರಿಂದ ಬಾಂಗ್ಲಾದೇಶದ ಅಧಿಕೃತ ಗುರುತಿನ ಚೀಟಿಗಳು ಪತ್ತೆಯಾಗಿವೆ. ಇವರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರಿಗೆ ಅಧಿಕೃತ ಪತ್ರ ಬರೆದಿದ್ದಾರೆ
Next Story




