Mudigere | ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ

ಮೂಡಿಗೆರೆ: ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿರುವುದು ವರದಿಯಾಗಿದೆ.
ನಟೇಶ್ ಪೂಜಾರಿ ಎಂಬವರ ಪುತ್ರಿ ಸೌಜನ್ಯಾ ಪೂಜಾರಿ (22) ಮೃತಪಟ್ಟ ಯುವತಿ.
ನಟೇಶ್ ಪೂಜಾರಿ ಶನಿವಾರ ಬೆಳಗ್ಗೆ ತರಕಾರಿ ತಂದುಕೊಟ್ಟು ಸಾಂಬಾರು ಮಾಡುವಂತೆ ಮಗಳಿಗೆ ತಿಳಿಸಿ ಹೊರ ಹೋಗಿದ್ದರು. ಅಪರಾಹ್ನ 2 ಗಂಟೆಗೆ ನಟೇಶ್ ಮನೆಗೆ ವಾಪಸ್ ಬಂದಾಗ ಸಾಂಬಾರು ಮಾಡಿಲ್ಲವೆಂಬ ಕಾರಣಕ್ಕೆ ಸೌಜನ್ಯಾರಿಗೆ ಬೈದಿದ್ದಾರೆ. ಬಳಿಕ ಅವರು ಪಕ್ಕದ ಮನೆಯಿಂದ ಸಾಂಬಾರ್ ತರಲು ತೆರಳಿದ್ದಾರೆ. ಈ ಸಮಯದಲ್ಲಿ ಸೌಜನ್ಯ ಮನೆ ಬಾಗಿಲು ಹಾಕಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.




