Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಸಂವಿಧಾನ ಜಾಗೃತಿ ಜಾಥಾ ಉದ್ದೇಶವನ್ನು...

ಸಂವಿಧಾನ ಜಾಗೃತಿ ಜಾಥಾ ಉದ್ದೇಶವನ್ನು ಜನರಿಗೆ ತಲುಪಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಆರೋಪ

ಅಲ್ಲಂಪುರ ಗ್ರಾಮದಲ್ಲಿ ಜಾಥಾ ತಡೆದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ29 Jan 2024 12:04 AM IST
share
ಸಂವಿಧಾನ ಜಾಗೃತಿ ಜಾಥಾ ಉದ್ದೇಶವನ್ನು ಜನರಿಗೆ ತಲುಪಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಆರೋಪ

ಚಿಕ್ಕಮಗಳೂರು: ರಾಜ್ಯ ಸರಕಾರ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜ.26ರಿಂದ ರಾಜ್ಯದ ಪ್ರತೀ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ಅದರಂತೆ ಜಿಲ್ಲೆಯಲ್ಲೂ ಜಾಗೃತಿ ಜಾಥಾ ಹಳ್ಳಹಳ್ಳಿಗಳಲ್ಲಿ ಸಂಚರಿಸುತ್ತಿದೆ. ಆದರೆ ಈ ಜಾಥಾ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಟಾಚಾರಕ್ಕೆ ನಡೆಯುತ್ತಿದೆ ಎಂದು ಆರೋಪಿಸಿ ರವಿವಾರ ಅಲ್ಲಂಪುರ ಗ್ರಾಮದಲ್ಲಿ ವಕೀಲ ಅನಿಲ್‍ಕುಮಾರ್ ನೇತೃತ್ವದಲ್ಲಿ ಗ್ರಾಮಸ್ಥರು ಜಾಗೃತಿ ಜಾಥಾದ ರಥ ತಡೆದು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ರವಿವಾರ ಮಧ್ಯಾಹ್ನದ ವೇಳೆ ನಗರ ಸಮೀಪದ ಅಲ್ಲಂಪುರ ಗ್ರಾಮಕ್ಕೆ ಸಂವಿಧಾನ ಜಾಗೃತಿ ರಥ ಆಗಮಿಸಿದ್ದು, ಈ ವೇಳೆ ಜಾಥಾದಲ್ಲಿ ಬೆರಳೆಣಿಕೆಯ ಅಧಿಕಾರಿಗಳನ್ನು ಹೊರತು ಪಡಿಸಿ, ಗ್ರಾಪಂ ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಮಕ್ಕಳು ಸೇರಿದಂತೆ ಯಾರೊಬ್ಬರೂ ಇಲ್ಲದ್ದನ್ನು ಕಂಡ ವಕೀಲ ಅನಿಲ್‍ಕುಮಾರ್ ಹಾಗೂ ಗ್ರಾಮಸ್ಥರು, ಸಂವಿಧಾನ ಜಾಗೃತಿ ಜಾಥಾದ ರಥವನ್ನು ತಡೆದು ಸ್ಥಳದಲ್ಲಿದ್ದ ನೋಡಲ್ ಅಧಿಕಾರಿಗಳಾದ ಭಾಗೀರಥಿ ಹಾಗೂ ಅಭಿಷೇಕ್ ಎಂಬವರನ್ನು ತರಾಟೆಗೆ ಪಡೆದರು. ಈ ಸ್ಥಳದಲ್ಲಿದ್ದ ಅಲ್ಲಂಪುರ ಗ್ರಾಪಂ ಕಾರ್ಯದರ್ಶಿಯನ್ನು ಪ್ರಶ್ನಿಸಿದ ಅವರು, ಜಾಥಾ ಗ್ರಾಮಕ್ಕೆ ಬರುವ ಮಾಹಿತಿ ಇರಲಿಲ್ಲವೇ?, ಜಾಥಾ ಗ್ರಾಮಕ್ಕೆ ಬರುತ್ತಿರುವ ಬಗ್ಗೆ ಗ್ರಾಮಸ್ಥರಿಗೆ ಏಕೆ ಮಾಹಿತಿ ನೀಡಿಲ್ಲ?, ಗ್ರಾಪಂ ಪಿಡಿಒ, ಸದಸ್ಯರು ಏಕೆ ಜಾಥಾದಲ್ಲಿ ಭಾಗವಹಿಲ್ಲ?, ಶಾಲಾ ಮಕ್ಕಳಿಗೆ ಏಕೆ ಮಾಹಿತಿ ನೀಡಿಲ್ಲ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೋಡಲ್ ಅಧಿಕಾರಿ ಭಾಗೀರಥಿ ಮಾತನಾಡಿ, ಜಿಲ್ಲೆಯಲ್ಲಿ ಜಾಥಾ ಸಂಚಾರ ಮಾಡುವ ಕುರಿತು ಹಿರಿಯ ಅಧಿಕಾರಿಗಳು ಸಭೆ ನಡೆಸಿ, ಎಲ್ಲ ಗ್ರಾಪಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅದೇ ರೀತಿ ಅಲ್ಲಂಪುರ ಗ್ರಾಪಂ ಅಧಿಕಾರಿಗಳಿಗೂ ಮಾಹಿತಿ ಹೋಗಿದೆ. ಆದರೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಸಮಜಾಯಿಸಿ ನೀಡಿದರು.

ಈ ವೇಳೆ ಮಾತನಾಡಿದ ವಕೀಲ ಅನಿಲ್‍ಕುಮಾರ್, ರಾಜ್ಯ ಸರಕಾರ ಸಂವಿಧಾನದ ಮಹತ್ವವನ್ನು ರಾಜ್ಯದ ಪ್ರತೀ ನಾಗರಿಕನಿಗೂ ತಿಳಿಸುವ ಉದ್ದೇಶದಿಂದ ಪ್ರತೀ ಜಿಲ್ಲೆಗೆ 25 ಲಕ್ಷ ರೂ. ಹಣ ಮಂಜೂರು ಮಾಡಿದೆ. ಈ ಹಣ ಬಳಸಿಕೊಂಡು ಸಂವಿಧಾನದ ಮಹತ್ವವನ್ನು ಸಾರಬೇಕೆಂದು ಆದೇಶ ಹೊರಡಿಸಿದೆ. ಈ ಸಂಬಂಧ ಜಿಲ್ಲಾಡಳಿತ ಹಲವು ಬಾರಿ ಪೂರ್ವಭಾವಿ ಸಭೆಗಳನ್ನು ನಡೆಸಿ, ಸಂವಿಧಾನ ಜಾಗೃತಿ ರಥ ಸಂಚರಿಸುವ ಮಾರ್ಗ, ಗ್ರಾಮಗಳು, ಕೈಗೊಳ್ಳಬೇಕಾದ ಕಾರ್ಯಕ್ರಮಗಳು, ಗ್ರಾಪಂ ವ್ಯಾಪ್ತಿಗೆ ಜಾಗೃತಿ ರಥ ಆಗಮಿಸಿದ ವೇಳೆ ಸ್ಥಳೀಯ ಗ್ರಾಪಂ ಅಧಿಕಾರಿಗಳು ನಿರ್ವಹಿಸಬೇಕಾದ ಕ್ರಮಗಳ ಬಗ್ಗೆ ಸಂಬಂಧಿಸಿದ ಇಲಾಖಾಧಿಕಾರಿಗಳು ಸಂಪೂರ್ಣ ಮಾಹಿತಿಯನ್ನೂ ನೀಡಿದೆ. ಅಲ್ಲದೇ ಸಂವಿಧಾನ ಜಾಗೃತಿ ರಥ ಸಂಚರಿಸುವ ಗ್ರಾಮ ಪಂಚಾಂತ್ ಅಧಿಕಾರಿಗಳಿಗೂ ಮಾಹಿತಿಯನ್ನು ನೀಡಲಾಗಿದೆ. ಜ.26ರಂದು ಚಿಕ್ಕಮಗಳೂರು ನಗರದಲ್ಲಿ ಜಾಥಾ ಉಸ್ತುವಾರಿ ಸಚಿವರು ಚಾಲನೆ ನೀಡಿದ್ದಾರೆ. ಸದ್ಯ ಈ ಜಾಥಾ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಂಚಾರ ಮಾಡುತ್ತಿದ್ದು, ಜಾಥಾವನ್ನು ಕಟಾಚಾರಕ್ಕೆ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಜಾಗೃತಿ ಜಾಥಾ ಯಾವುದೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚಾರ ಮಾಡುವ ವೇಳೆ ಸ್ಥಳೀಯ ಗ್ರಾಪಂ ಅಧಿಕಾರಿಗಳು ಸ್ಥಳದಲ್ಲಿರಬೇಕು, ಗ್ರಾಪಂ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು, ಶಾಲಾ ಮಕ್ಕಳು ಸಮ್ಮಖದಲ್ಲಿ ಜಾಥಾದ ಆಶಯಗಳನ್ನು ವಿವರಿಸಬೇಕು. ಸರಕಾರದ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂಬ ನಿಯಮವನ್ನು ಸರಕಾರ ರೂಪಿಸಿದೆ. ಆದರೆ ಸಂವಿಧಾನ ಜಾಗೃತಿ ಜಾಥಾದಲ್ಲಿ ಈ ನಿಯಮಗಳನ್ನು ಪಾಲಿಸುತ್ತಿಲ್ಲ. ಸರಕಾರದ ಉದ್ದೇಶ ಜನರಿಗೆ ತಲುಪುತ್ತಿಲ್ಲ. ಗ್ರಾಮಗಳಿಗೆ ಜಾಥಾ ತಲುಪಿದ ವೇಳೆ ರಥಕ್ಕೆ ಪೂಜೆ ಮಾಡಿ ಕಳುಹಿಸುತ್ತಾ ಕಟಾಚಾರದಿಂದ ಜಾಥಾ ನಡೆಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X