Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಪ್ರಧಾನಿ ಮೋದಿಯವರ ʼವಿಕಸಿತ ಭಾರತʼ...

ಪ್ರಧಾನಿ ಮೋದಿಯವರ ʼವಿಕಸಿತ ಭಾರತʼ ಎನ್ನುವ ಸುಳ್ಳಿನ ಪ್ರಚಾರಕ್ಕೆ ಸೋಲಾಗುತ್ತದೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 April 2024 4:00 PM IST
share
ಪ್ರಧಾನಿ ಮೋದಿಯವರ ʼವಿಕಸಿತ ಭಾರತʼ ಎನ್ನುವ ಸುಳ್ಳಿನ ಪ್ರಚಾರಕ್ಕೆ ಸೋಲಾಗುತ್ತದೆ : ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು : ವಾಜಪೇಯಿಯವರ ʼಇಂಡಿಯಾ ಶೈನಿಂಗ್ʼ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ʼವಿಕಸಿತ ಭಾರತʼ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

"ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿಯವರು ಭಾರತೀಯರಿಗೆ ಸರಣಿ ಸುಳ್ಳುಗಳನ್ನು ನಂಬಿಸಿ ವಂಚಿಸಿದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿದರು. ಈಗ ನಂಬಿಕೆ ದ್ರೋಹ ಆಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಎಂದು ದೇಶದ ಯುವಕ/ ಯುವತಿಯರನ್ನು ನಂಬಿಸಿದರು. ವಿದ್ಯಾವಂತರು ಡಬಲ್ ಡಿಗ್ರಿ ಪಡೆದು ಉದ್ಯೋಗ ಕೊಡಿ ಎಂದರೆ ಹೋಗಿ ಪಕೋಡ ಮಾರಾಟ ಮಾರಿ ಎನ್ನುತ್ತಿದ್ದಾರೆ. ಇಂಥಾ ನಂಬಿಕೆ ದ್ರೋಹಗಳು ಪ್ರಧಾನಿ ಕುರ್ಚಿಗೆ ಘನತೆ ತರುತ್ತದೆಯೇ?" ಎಂದು ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ನಂಬಿಸಿ ರೈತರ ಖರ್ಚು ಮೂರು ಪಟ್ಟು ಮಾಡಿದರು. ಇದು ದೇಶದ ಇಡೀ ರೈತ ಕುಲಕ್ಕೆ ಬಗೆದ ನಂಬಿಕೆ ದ್ರೋಹ ಅಲ್ಲವೇ?. ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಬೆಲೆ ಏರಿಕೆ ಸಂಪೂರ್ಣ ತಡೆಯುವುದಾಗಿ ನಂಬಿಸಿದರು. ಈಗ ಎಲ್ಲದರ ಬೆಲೆ ಆಕಾಶ ಮುಟ್ಟಿದೆ. ಇಂಥಾ ನಂಬಿಕೆ ದ್ರೋಹಗಳನ್ನು ಭಾರತೀಯರಿಗೆ ಬಗೆದಿದ್ದಾರಲ್ಲಾ ಇಂಥಾ ವ್ಯಕ್ತಿಯ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಘನತೆ ಬರುತ್ತದೆಯೇ? ಎಂದು ಪ್ರಶ್ನಿಸಿದರು.

ದೇವೇಗೌಡರ ಸುಳ್ಳು ಕೇಳಿ ನನಗೆ ನಾಚಿಕೆ ಆಯಿತು

ಮೋದಿಯವರ ಜತೆ ಪೈಪೋಟಿಗೆ ಬಿದ್ದವರಂತೆ ದೇವೇಗೌಡರು ಹೇಳಿದ ಸುಳ್ಳುಗಳನ್ನು ಕೇಳಿ ನನಗೇ ನಾಚಿಕೆ ಆಯಿತು. ಮೋದಿಯವರು ರಾಜ್ಯದ ಜನತೆಗೆ ಕೊಟ್ಟ ಖಾಲಿ ಚೊಂಬನ್ನು ದೇವೇಗೌಡರು ಅಕ್ಷಯ ಪಾತ್ರೆ ಎಂದು ಸುಳ್ಳು ಹೇಳಿದ್ದಾರೆ. ಚೊಂಬು ಅಕ್ಷಯ ಪಾತ್ರೆ ಆಗಿದ್ದರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೊಡಲು ಏಕೆ ಸಾಧ್ಯವಾಗಲಿಲ್ಲ?. ರೈತರ ಸಾಲ ಏಕೆ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಒಂದೂಕಾಲ ಲಕ್ಷ ರೂ. ಬೇಕೋ- ಖಾಲಿ ಚೊಂಬು ಬೇಕಾ? ಯೋಚಿಸಿ

ರಾಜ್ಯ ಸರ್ಕಾರ ಮಹಿಳೆಯರಿಗೆ ಕೊಡುತ್ತಿರುವ ವಾರ್ಷಿಕ 24 ಸಾವಿರ ರೂಪಾಯಿ ಜತೆಗೆ ರಾಷ್ಟ್ರೀಯ ಕಾಂಗ್ರೆಸ್ ನಿಂದ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುವ ಘೋಷಣೆ ಮಾಡಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಹಿ ಹಾಕಿದ್ದಾರೆ.

ಜತೆಗೆ ಇಡೀ ದೇಶದ ರೈತರ ಸಾಲ ಸಂಪೂರ್ಣ ಮನ್ನಾ, ನಿರುದ್ಯೋಗಿ ಯುವಕರ ಖಾತೆಗೆ ಲಕ್ಷ ರೂ. ಹಾಕುವ ಗ್ಯಾರಂಟಿಯನ್ನೂ ನಾವು ನೀಡಿದ್ದೇವೆ. ಹೀಗಾಗಿ ಖಾಲಿ ಚೊಂಬಿಗೆ ಮತ ಹಾಕಿ ಹಾಳು ಮಾಡಿಕೊ‍ಳ್ಳುತ್ತೀರೋ, ನಿಮ್ಮ ಬದುಕಿಗೆ ಸ್ಪಂದಿಸಿ ನಿಮ್ಮ ಜೇಬಿಗೆ ಶಕ್ತಿ ತುಂಬುವ ಗ್ಯಾರಂಟಿ ಕಾಂಗ್ರೆಸ್ಸಿಗೆ ಮತ ಹಾಕುತ್ತೀರೋ ನಿರ್ಧರಿಸಿ ಎಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X