ಶೃಂಗೇರಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ದರ್ಶನ್ (22) ಎಂದು ಗುರುತಿಸಲಾಗಿದೆ.
ನಾಲ್ವರು ಸ್ನಾನಕ್ಕೆಂದು ತುಂಗಾ ನದಿಗೆ ಇಳಿದಿದ್ದರು. ಈ ವೇಳೆ ನದಿಯ ಆಳದ ಬಗ್ಗೆ ಅರಿವಿಲ್ಲದ ಕಾರಣ ದರ್ಶನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಳಿದ ಮೂವರು ದಡಕ್ಕೆ ವಾಪಸ್ ಬಂದಿದ್ದಾರೆ.
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಪ್ರಕರಣ ನಡೆದಿದೆ.
Next Story




