ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣ: ಡಿ.ಎನ್.ಜೀವರಾಜ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು

ಡಿ.ಎನ್.ಜೀವರಾಜ್
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಎನ್.ಜೀವರಾಜ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಲಾಗಿದೆ.
ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳ್ಳಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಜೀವರಾಜ್ ವಿರುದ್ಧ 2023ರ ಮತ ಎಣಿಕೆ ಸಂಬಂಧ ಅಕ್ರಮ -ಕ್ರಿಮಿನಲ್-ವಂಚನೆ-ಅಪರಾಧ ಪ್ರಕರಣ ದಾಖಲಿಸಿದ್ದರು.
ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸಿದೆ ಆದೇಶ ಹೊರಡಿಸಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಜೀವರಾಜ್ 201 ಮತಗಳ ಅಂತರದಿಂದ ಸೋತಿದ್ದರು. ಮತ ಎಣಿಕೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ತಿರಸ್ಕೃತ 279 ಮತಗಳ ಪರಿಶೀಲನೆ ಹಾಗೂ ಅಂಚೆ ಮತ ಮರು ಎಣಿಕೆಗೆ ಸೂಚಿಸಿತ್ತು.
ಮೇ.2 ರಂದು ನಡೆದಿದ್ದ ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್ 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೋಳ್ಳಿ ಜೀವರಾಜ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿದ್ದರು. ಪ್ರಕರಣದವನ್ನು ರದ್ದುಪಡಿಸುವಂತೆ ಕೋರಿ ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು






