ಕೊಪ್ಪ| ಪ್ರಜ್ಞಾಹೀನ ಸ್ಥಿತಿಯಲ್ಲಿ ಶಿಕ್ಷಕಿ ಪತ್ತೆ

ಕಿಡಿಗೇಡಿಗಳಿಂದ ಹಲ್ಲೆ ಶಂಕೆ
ಕೊಪ್ಪ: ಕೊಪ್ಪ ತಾಲೂಕಿನ ಕೊಗ್ರೆ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಂಗಳವಾರ ಸಂಜೆ ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಅಪೂರ್ವ(42) ಪ್ರಜ್ಞಾಹೀನರಾಗಿ ಬಿದ್ದಿದ್ದರು. ತಕ್ಷಣವೇ ಅವರನ್ನು ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ.
ಯಾರೋ ಕಿಡಿಗೇಡಿಗಳು ಶಿಕ್ಷಕಿಗೆ ಹಲ್ಲೆ ನಡೆಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಡಿವೈಎಸ್ಪಿ ಬಾಲಾಜಿ ಸಿಂಗ್, ಜಯಪುರ ಇನ್ ಸ್ಪೆಕ್ಟರ್ ಅಂಬರೀಶ್ ತಂಡ ತನಿಖೆ ಆರಂಭಿಸಿದೆ.
ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ.
ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





