Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಕೇಂದ್ರ ಸಚಿವ ವಿ.ಸೋಮಣ್ಣ ಕಚೇರಿ ಕಟ್ಟಡ...

ಕೇಂದ್ರ ಸಚಿವ ವಿ.ಸೋಮಣ್ಣ ಕಚೇರಿ ಕಟ್ಟಡ ಹಿಂಪಡೆದ ಸರಕಾರ

ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಎನ್‍ಡಿಎ ಶಾಸಕರ ತೀವ್ರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ16 Aug 2024 11:13 PM IST
share
ಕೇಂದ್ರ ಸಚಿವ ವಿ.ಸೋಮಣ್ಣ ಕಚೇರಿ ಕಟ್ಟಡ ಹಿಂಪಡೆದ ಸರಕಾರ

ತುಮಕೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ಉಪಯೋಗಕ್ಕೆ ನಗರದ ರೈಲ್ವೆ ನಿಲ್ದಾಣ ಎದುರಿನ ಪರಿವೀಕ್ಷಣಾ ಕಟ್ಟಡವನ್ನು ನೀಡಿ,ಅನುಮೋದನೆ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಈಗ ಅನುಮೋದನೆಯನ್ನು ಹಿಂಪಡೆದಿರುವ ಕ್ರಮವನ್ನು ಜಿಲ್ಲೆಯ ಎನ್.ಡಿ.ಎ ಮೈತ್ರಿ ಶಾಸಕರು ತೀವ್ರವಾಗಿ ಖಂಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಎನ್.ಡಿ.ಎ ಮೈತ್ರಿಕೂಟದ ಶಾಸಕರಾದ ಜಿ.ಬಿ.ಜೋತಿಗಣೇಶ್, ಬಿ.ಸುರೇಶಗೌಡ, ಸಿ.ಬಿ.ಸುರೇಶಬಾಬು ಅವರು, ರಾಜ್ಯ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದರು. ಅಲ್ಲದೆ, ಯಾವುದೇ ಕಾರಣಕ್ಕೂ ಸಚಿವ ವಿ.ಸೋಮಣ್ಣ ಅವರ ಕಚೇರಿಗೆ ನೀಡಿರುವ ಕಟ್ಟಡವನ್ನು ವಾಪಸ್ ನೀಡುವುದಿಲ್ಲ ಎಂದು ಹೇಳಿದರು.

ತುಮಕೂರು ನಗರ ಕ್ಷೇತ್ರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ನಗರದ ಪರಿವೀಕ್ಷಣಾ ಕಟ್ಟಡವನ್ನು ದುರಸ್ತಿಗೊಳಿಸಿ ತುಮಕೂರು ಲೋಕಸಭಾ ಸದಸ್ಯರೂ ಆದ ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ಆರಂಭಿಸಲು ಅನುಮತಿ ನೀಡಿ ರಾಜ್ಯ ಸರಕಾರ ಈ ತಿಂಗಳ 3ರಂದು ಅನುಮೋದನೆ ನೀಡಿತ್ತು. ಅಂದಿನಿಂದಲೇ ಸಚಿವರ ಕಚೇರಿ ಕೆಲಸಕಾರ್ಯಗಳು ಇಲ್ಲಿ ಪ್ರಾರಂಭವಾಗಿವೆ.ಆದರೆ, ಇಂದು ಶುಕ್ರವಾರ ರಾಜ್ಯ ಸರಕಾರ ಸಚಿವರ ಕಚೇರಿಗೆ ನೀಡಿದ್ದ ಕಟ್ಟಡದ ಅನುಮೋದನೆಯನ್ನು ಹಿಂಪಡೆದಿರುವುದು ಖಂಡನೀಯ ಎಂದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಚಿಕ್ಕನಾಯಕನಹಳ್ಳಿ ಕ್ಷೇತ್ರ ಶಾಸಕ ಸಿ.ಬಿ.ಸುರೇಶ್‍ಬಾಬು ಮಾತನಾಡಿ, ಕೇಂದ್ರ ಸಚಿವರ ಕಚೇರಿಗೆಂದು ಕೊಟ್ಟ ಕಟ್ಟಡವನ್ನು ವಾಪಸ್ ಪಡೆಯಲು ರಾಜ್ಯ ಸರಕಾರ ಹೊರಟಿದೆ. ಒಮ್ಮೆ ಕೊಟ್ಟು ಮತ್ತೆ ವಾಪಸ್ ಪಡೆಯುವುದನ್ನು ಕಾಂಗ್ರೆಸ್ ಸರಕಾರ ದಂಧೆ ಮಾಡಿಕೊಂಡಂತಿದೆ ಎಂದು ಟೀಕಿಸಿದರು.

ತಮಮಕೂರು ಗ್ರಾಮಾಂತರ ಶಾಸಕ ಸುರೇಶ್‍ಗೌಡ ಮಾತನಾಡಿ, ಕೇಂದ್ರ ಸಚಿವ ವಿ.ಸೋಮಣ್ಣನವರ ಅಭಿವೃದ್ಧಿ ಕಾರ್ಯ, ಅವರ ಜನಪರ ಕೆಲಸಗಳ ವೇಗಕ್ಕೆ ಕಾಂಗ್ರೆಸ್ ನಾಯಕರಿಗೆ ನಡುಕು ಉಂಟಾಗಿದೆ. ಸೋಮಣ್ಣನವರ ವೇಗ ತಡೆಯಲು ಕಚೇರಿ ಹಿಂಪಡೆಯುವ ಕುತಂತ್ರ ಮಾಡುತ್ತಿದ್ದಾರೆ, ದಮ್ ಇದ್ದರೆ ಕಚೇರಿಯನ್ನು ಹಿಂಪಡೆಯಲಿ ನೋಡೋಣ, ನಾವು ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X