Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಆನೆಗಳನ್ನು ಓಡಿಸುತ್ತಿಲ್ಲ,...

ಆನೆಗಳನ್ನು ಓಡಿಸುತ್ತಿಲ್ಲ, ಸ್ವಾಭಾವಿಕವಾಗಿ ಅರಣ್ಯ ಸೇರಲು ಸಹಕರಿಸುತ್ತಿದ್ದೇವೆ: ಮನೋಜ್ ರಾಜನ್

ವಾರ್ತಾಭಾರತಿವಾರ್ತಾಭಾರತಿಕೆ.ಎಲ್.ಶಿವು/ವಾರ್ತಾಭಾರತಿಕೆ.ಎಲ್.ಶಿವು/ವಾರ್ತಾಭಾರತಿ24 Nov 2026 2:27 PM IST
share
ಆನೆಗಳನ್ನು ಓಡಿಸುತ್ತಿಲ್ಲ, ಸ್ವಾಭಾವಿಕವಾಗಿ ಅರಣ್ಯ ಸೇರಲು ಸಹಕರಿಸುತ್ತಿದ್ದೇವೆ: ಮನೋಜ್ ರಾಜನ್

ಚಿಕ್ಕಮಗಳೂರು: ಆನೆಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿಲ್ಲ. ಅವುಗಳ ಸ್ವಾಭಾವಿಕ ನಡಿಗೆಗೆ ಪೂರಕ ವಾತಾವರಣ ಕಲ್ಪಿಸಲಾಗುತ್ತಿದೆ. ಅವುಗಳ ಚಲನೆಯ ದಿಕ್ಕು ಬದಲಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ನಿರ್ಧರಿಸಲಾಗಿದೆ ಎಂದು ಎಪಿಸಿಸಿಎಫ್ ಮನೋಜ್ ರಾಜನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಎರಡು ಗುಂಪುಗಳಾಗಿ ಚದುರಿಹೋಗಿದ್ದ ಕಾಡಾನೆಗಳ ಹಿಂಡು ಮಂಗಳವಾರ ಬೆಳಗಿನ ಜಾವ ಒಂದಾಗಿ ಸೇರಿದೆ. ಬೆಳಗಿನ ಜಾವ 4 ಗಂಟೆಯ ವೇಳೆಗೆ ಒಟ್ಟು 39 ಆನೆಗಳು ಭವಾನಿ ಎಂಬುವರಿಗೆ ಸೇರಿದ 80 ಎಕರೆ ವಿಸ್ತೀರ್ಣದ ತೋಟದ ಸಮೀಪ ಕಾಣಿಸಿಕೊಂಡಿವೆ.

ನಿನ್ನೆವರೆಗೆ ಕೆಳಭಾಗದಲ್ಲಿ ಸಂಚರಿಸುತ್ತಿದ್ದ ಆನೆಗಳು ಮಂಗಳವಾರ ಮೇಲ್ಭಾಗಕ್ಕೆ ಬಂದಿವೆ. ಅವು ಸ್ವಾಭಾವಿಕವಾಗಿ ತತ್ಕೊಳ ಮೀಸಲು ಅರಣ್ಯ ಪ್ರದೇಶದತ್ತ ಸಾಗುವ ನಿರೀಕ್ಷೆಯಿದೆ. ಆನೆಗಳು ಅರಣ್ಯ ಪ್ರದೇಶ ಪ್ರವೇಶಿಸಿದರೆ ಸೋಲಾರ್ ಬೇಲಿಯಿರುವುದರಿಂದ ಮಾನವ-ಆನೆ ಸಂಘರ್ಷದ ಸಾಧ್ಯತೆ ಕಡಿಮೆಯಾಗಲಿದೆ ಎಂದರು.

ಆನೆಗಳ ಚಲನವಲನದ ಮೇಲೆ ನಿಗಾ ಇರಿಸಲಾಗಿದ್ದು, ಅಗತ್ಯ ಕ್ರಮಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಿಡಿಒ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. 250ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಭದ್ರಾ ಅಭಯಾರಣ್ಯವು 1,000 ಚದರ ಕಿ.ಮೀ. ವ್ಯಾಪ್ತಿಯ ವಿಶಾಲ ಅರಣ್ಯ ಪ್ರದೇಶವಾಗಿದೆ. ಒಂದು ಚದರ ಕಿ.ಮೀ.ಗೆ ಒಂದು ಆನೆ ಇರಬಹುದಾದ ಸಾಮರ್ಥ್ಯವಿರುವುದರಿಂದ 38 ಆನೆಗಳು ಭದ್ರಾ ಅಭಯಾರಣ್ಯಕ್ಕೆ ದೊಡ್ಡ ಹೊರೆಯಾಗುವುದಿಲ್ಲ. ಆನೆಗಳು ಹುಲಿಗಳಂತೆ ತಮ್ಮ ವ್ಯಾಪ್ತಿಗಾಗಿ ಪರಸ್ಪರ ಕಾದಾಡುವುದು ತೀರಾ ವಿರಳ ಎಂದು ಅವರು ಹೇಳಿದರು.

ಆನೆಗಳ ಮೂಲದ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಅವು ನೂರಾರು ಕಿ.ಮೀ. ದೂರ ಸಂಚರಿಸುತ್ತವೆ. ಆಹಾರ ಮತ್ತು ವಾಸಕ್ಕೆ ಸೂಕ್ತ ಸ್ಥಳ ದೊರೆತರೆ ಯಾವುದೇ ಅರಣ್ಯ ಪ್ರದೇಶದಲ್ಲೂ ಹೊಂದಿಕೊಳ್ಳುತ್ತವೆ. ತತ್ಕೊಳದ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅವು ಒಂದು ವಾರದಿಂದ 15 ದಿನಗಳವರೆಗೆ ಇರಬಹುದು. ಭದ್ರಾ ಅಭಯಾರಣ್ಯ ಸಮೀಪದಲ್ಲಿರುವುದರಿಂದ ಆನೆಗಳನ್ನು ಅಲ್ಲಿಗೆ ಕಳುಹಿಸಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, 38 ಆನೆಗಳ ಪೈಕಿ 15 ಆನೆಗಳು ಸ್ವಾಭಾವಿಕವಾಗಿ ಹಾಸನ-ಬೇಲೂರು ಭಾಗದತ್ತ ಸಾಗಿವೆ ಎಂದು ಮನೋಜ್ ರಾಜನ್ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
ಕೆ.ಎಲ್.ಶಿವು/ವಾರ್ತಾಭಾರತಿ
ಕೆ.ಎಲ್.ಶಿವು/ವಾರ್ತಾಭಾರತಿ

ಶಿವ ಕೆ.ಎಲ್ ಇವರು ಕಳೆದ 15 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಕೋಣೇಬೈಲು ಗ್ರಾಮದವರಾದ ಇವರು ಹಲವು ದಿನ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ಕಳೆದ 10 ವರ್ಷಗಳಿಂದ ವಾರ್ತಾಭಾರತಿ ದಿನ ಪತ್ರಿಕೆಯ ಚಿಕ್ಕಮಗಳೂರು ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರವಾಸಿ ತಾಣಗಳು ಮತ್ತು ಜನರ ಸಮಸ್ಯೆಗಳ ಬಗ್ಗೆ ವಿಶೇಷ ಲೇಖನಗಳನ್ನು ಬರೆಯುವುದು ಇವರ ಹವ್ಯಾಸವಾಗಿದೆ.

Next Story
X