Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಕಾಡಾನೆ ದಾಳಿಯಲ್ಲಿ...

ಚಿಕ್ಕಮಗಳೂರು | ಕಾಡಾನೆ ದಾಳಿಯಲ್ಲಿ ಇಬ್ಬರು ಮೃತಪಟ್ಟ ಬೆನ್ನಲ್ಲೇ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ; ಮೊದಲ ದಿನ ಒಂದು ಪುಂಡಾನೆ ಸೆರೆ

ವಾರ್ತಾಭಾರತಿವಾರ್ತಾಭಾರತಿ30 July 2025 12:02 AM IST
share
ಚಿಕ್ಕಮಗಳೂರು | ಕಾಡಾನೆ ದಾಳಿಯಲ್ಲಿ ಇಬ್ಬರು ಮೃತಪಟ್ಟ ಬೆನ್ನಲ್ಲೇ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ; ಮೊದಲ ದಿನ ಒಂದು ಪುಂಡಾನೆ ಸೆರೆ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಕಳೆದ 4 ದಿನಗಳ ಅಂತರದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾದ ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು, ರೈತರ ಆಕ್ರೋಶಕ್ಕೆ ಮಣಿದ ಸರಕಾರ ಕಾಡಾನೆಗಳ ಸೆರೆಗೆ ಆದೇಶಿಸಿದ್ದು, 9 ಆನೆಗಳ ಸಹಾಯದಿಂದ ಪುಂಡಾನೆಗಳ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿ ಮಂಗಳವಾರ ಕಾರ್ಯಾಚರಣೆಗೆ ಇಳಿದಿದ್ದು, ಮೊದಲ ದಿನ ಒಂದು ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಎನ್.ಆರ್.ಪುರ ತಾಲೂಕಿನ ಖಾಂಡ್ಯ ಹೋಬಳಿ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಅನಿತಾ ಎಂಬ ಕಾರ್ಮಿಕ ಮಹಿಳೆಯ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು, ಈ ಘಟನೆಯಿಂದ ಆಕ್ರೋಶಗೊಂಡ ರೈತರು, ಸಂಘ ಸಂಸ್ಥೆಗಳ ಮುಖಂಡರು ಬಾಳೆಹೊನ್ನೂರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿ ಕಾಡಾನೆ ನಿಯಂತ್ರಣಕ್ಕೆ ಆಗ್ರಹಿಸಿದ್ದರು. ಈ ಘಟನೆ ಬೆನ್ನಲ್ಲೇ ಕಳೆದ ರವಿವಾರ ರಾತ್ರಿ ಬಾಳೆಹೊನ್ನೂರು ಸಮೀಪದ ಅಂಡವಾನೆ ಗ್ರಾಮದಲ್ಲಿ ಸುಬ್ರಾಯಗೌಡ ಎಂಬ ರೈತನ ಮೇಲೆ ದಾಳಿ ಮಾಡಿದ ಪುಂಡಾನೆ ತುಳಿದು ಕೊಂದು ಹಾಕಿತ್ತು.

4 ದಿನಗಳ ಅಂತದಲ್ಲಿ ಇಬ್ಬರು ಮೃತಪಟ್ಟ ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು, ರಾಜಕೀಯ ಪಕ್ಷಗಳ ಮುಖಂಡರು, ರೈತರು ಬಾಳೆಹೊನ್ನೂರು, ಖಾಂಡ್ಯ ಹೋಬಳಿ ಬಂದ್‍ಗೆ ಸೋಮವಾರ ಕರೆ ನೀಡಿ ಬಾಳೆಹೊನ್ನೂರು ಪಟ್ಟಣದಲ್ಲಿರುವ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಮಣಿದ ರಾಜ್ಯ ಸರಕಾರದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪುಂಡಾನೆಗಳ ಸೆರೆಗೆ ಆದೇಶಿಸಿದ್ದರು.

ಈ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಸಕ್ರೇಬೈಲು ಆನೆ ಶಿಬಿರದಿಂದ 9 ಆನೆಗಳು ಬಾಳೆಹೊನ್ನೂರು ಪಟ್ಟಣಕ್ಕೆ ಬಂದಿದ್ದು, ಮಂಗಳವಾರ ಪುಂಡಾನೆಗಳ ಸರೆಗೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದರು. ಮಂಗಳವಾರ ಸಂಜೆ ವೇಳೆ ಬಾಳೆಹೊನ್ನೂರು ಸಮೀಪದ ಧಟ್ಟ ಅರಣ್ಯದಲ್ಲಿ ಪುಂಡಾನೆಯೊಂದು ಅರಣ್ಯ ಇಲಾಖೆ ಅಧಿಕಾರಿಗಳ ಕಣ್ಣಿಗೆ ಬಿದ್ದಿದ್ದು, ಈ ವೇಳೆ ಅರಿವಳಿಕೆ ತಜ್ಞ ವೈದ್ಯರು ಕಾಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿದ್ದಾರೆ. ನಂತರ ಆನೆಯನ್ನು ಕುಮ್ಕಿ ಆನೆಗಳ ಸಹಾಯದಿಂದ ಸೆರೆ ಹಿಡಿಯಲಾಯಿತು.

Tags

Wild elephantChikkamagaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X