Chitradurga | ಭೀಕರ ರಸ್ತೆ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು

ಚಿತ್ರದುರ್ಗ : ನಿಂತಿದ್ದ ಲಾರಿಗೆ ಗೂಡ್ಸ್ ಟೆಂಪೋವೊಂದು ಢಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಗೂಡ್ಸ್ ಟೆಂಪೋದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.
ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Next Story




