Chitradurga | ಮರಕ್ಕೆ ಬೊಲೆರೊ ವಾಹನ ಢಿಕ್ಕಿ; ನಾಲ್ವರು ಕಾರ್ಮಿಕರು ಮೃತ್ಯು

ಚಿತ್ರದುರ್ಗ : ಮರಕ್ಕೆ ಬೊಲೆರೊ ವಾಹನ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿರುವುದು ವರದಿಯಾಗಿದೆ.
ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಮೃತರು. ಇನ್ನುಳಿದ ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
Next Story





