Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿತ್ರದುರ್ಗ
  4. ಚಿತ್ರದುರ್ಗ | ಭೀಕರ ರಸ್ತೆ ಅಪಘಾತ:...

ಚಿತ್ರದುರ್ಗ | ಭೀಕರ ರಸ್ತೆ ಅಪಘಾತ: ವಿಜಯಪುರದಿಂದ ಪ್ರವಾಸ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ13 Aug 2023 4:09 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚಿತ್ರದುರ್ಗ | ಭೀಕರ ರಸ್ತೆ ಅಪಘಾತ: ವಿಜಯಪುರದಿಂದ ಪ್ರವಾಸ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ಮೃತ್ಯು

ಚಿತ್ರದುರ್ಗ, ಆ.13: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರವಿವಾರ ಮುಂಜಾನೆ 3:30ರ ಸುಮಾರಿಗೆ ಸಂಭವಿಸಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ನಿವಾಸಿಗಳಾದ ಸಂಗನ ಬಸಪ್ಪ(36), ಅವರ ಪತ್ನಿ ರೇಖಾ(29 ), ಪುತ್ರ ಅಗಸ್ತ್ಯ (8 ವರ್ಷ) ಹಾಗೂ ಸಂಬಂಧಿ ಭೀಮಾಶಂಕರ್ (26) ಮೃತಪಟ್ಟವರು.

ಸಂಗನ ಬಸಪ್ಪ ದಂಪತಿಯ ಮಕ್ಕಳಾದ 6 ವರ್ಷದ ಅನ್ವಿತಾ ಹಾಗೂ 4 ವರ್ಷದ ಆದರ್ಶ ಹಾಗೂ ಸುಮಾರು 26 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಾರಂತ್ಯದ ಹಿನ್ನೆಲೆಯಲ್ಲಿ ಸಂಗನ ಬಸಪ್ಪ ಕುಟುಂಬ ಸಮೇತ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಶನಿವಾರ ರಾತ್ರಿ 11 ಗಂಟೆಗೆ ಮನೆಯಿಂದ ಕಾರಿನಲ್ಲಿ ಹೊರಟಿತ್ತು. ಇಂದು ಮುಂಜಾವ 3:30ರ ಸುಮಾರಿಗೆ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಲ್ಲಿ ಚಲಿಸುತ್ತಿದ್ದ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ರಾತ್ರಿಯಿಡೀ ಕಾರು ಚಲಾಯಿಸಿದ್ದರಿಂದ ನಿದ್ದೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X