Chitradurga | ಭೀಕರ ರಸ್ತೆ ಅಪಘಾತ: ಮೂವರು ಪೊಲೀಸ್ ಅಧಿಕಾರಿಗಳು ಮೃತ್ಯು; ಇಬ್ಬರು ಗಂಭೀರ

ಚಿತ್ರದುರ್ಗ, ಮಾ.15: ಕಾರು ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ರಿಸರ್ವ್ ಸಬ್ ಇನ್ ಸ್ಪೆಕ್ಟರ್ (RSI) ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ರವಿವಾರ ಬೆಳಗ್ಗೆ 7:30ರ ಸುಮಾರಿಗೆ ಸಂಭವಿಸಿದೆ.
ಮಂಜುನಾಥ್, ಅಂಬರೀಷ್, ಸಚಿನ್ ಮೃತಪಟ್ಟ ರಿಸರ್ವ್ ಸಬ್ ಇನ್ ಸ್ಪೆಕ್ಟರ್ ಗಳಾಗಿದ್ದಾರೆ. ಕಾರಿನಲ್ಲಿದ್ದ ಪಿಎಸ್ಸೈ ಈಶ್ವರ್ ಹಾಗೂ ಆರ್ ಎಸ್ಸೈ ಮಹಾಂತೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಈ ಬಗ್ಗೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story







