ಖ್ಯಾತ ತಮಿಳು ನಟ ವಿಜಯ್ ಆ್ಯಂಟನಿ ಪುತ್ರಿ ಆತ್ಮಹತ್ಯೆ

ವಿಜಯ್ ಆ್ಯಂಟನಿ (Photo: NDTV)
ಚೆನ್ನೈ: ತಮಿಳು ಸಂಗೀತ ನಿರ್ದೇಶಕ, ನಟ ವಿಜಯ್ ಆ್ಯಂಟನಿ ಅವರ ಪುತ್ರಿ ಮೀರಾ ಮಂಗಳವಾರ ಮುಂಜಾನೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚೆನ್ನೈನ ಖಾಸಗಿ ಶಾಲೆಯೊಂದರಲ್ಲಿ 12ನೇ ತರಗತಿ ಓದುತ್ತಿದ್ದ ಮೀರಾಗೆ 16 ವರ್ಷ.
ವರದಿಗಳ ಪ್ರಕಾರ, ಮೀರಾ ಖಿನ್ನತೆಯಿಂದ ಬಳಲುತ್ತಿದ್ದರು, ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆಕೆಯ ತಂದೆ ಮಗಳ ಕೋಣೆಯಲ್ಲಿ ನೋಡಿದಾಗ ಆಕೆಯ ದುಪ್ಪಟ್ಟಾ ಬಳಸಿ ಫ್ಯಾನ್ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.
ಮನೆಯ ಕೆಲಸಗಾರರ ಸಹಾಯದಿಂದ ಆಕೆಯನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ದರಾದರೂ ಆಕೆಯ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ.
ಆಳ್ವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story





