Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. "ದೇಗುಲ ಒಡೆದಾಗ ಎಷ್ಟು ನೋವಾಗುತ್ತೋ...

"ದೇಗುಲ ಒಡೆದಾಗ ಎಷ್ಟು ನೋವಾಗುತ್ತೋ ಅಷ್ಟೇ ನೋವು, ಸಂಕಟ ಆಗಿದೆ": ವಿಷ್ಣುವರ್ಧನ್‌ ಸಮಾಧಿ ತೆರವಿಗೆ ನಟ ಕಿಚ್ಚ ಸುದೀಪ್‌ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ9 Aug 2025 10:53 PM IST
share
ದೇಗುಲ ಒಡೆದಾಗ ಎಷ್ಟು ನೋವಾಗುತ್ತೋ ಅಷ್ಟೇ ನೋವು, ಸಂಕಟ ಆಗಿದೆ: ವಿಷ್ಣುವರ್ಧನ್‌ ಸಮಾಧಿ ತೆರವಿಗೆ ನಟ ಕಿಚ್ಚ ಸುದೀಪ್‌ ಅಸಮಾಧಾನ
"ವಿಷ್ಣುವರ್ಧನ್ ಸಮಾಧಿ ಸ್ಥಳವನ್ನು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗುತ್ತೇನೆ"

ಬೆಂಗಳೂರು: ನಟ ಡಾ.ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗುತ್ತೇನೆ ಎಂದು ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ‌.

ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಸಾಹಸ ಸಿಂಹ ವಿಷ್ಣುವರ್ಧನ್ ಎಂದರೆ, ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಅವರ ಸ್ಮಾರಕವನ್ನು ಹೊಡೆದು ಹಾಕಿರುವುದು, ನಾವು ವರ್ಷಾನುಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನು ಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಹೈ ಕೋರ್ಟ್ ಆದೇಶ ಎಂದು ಹೇಳುತ್ತಾರೆ. ಸರಕಾರಗಳ ಮುಖಾಂತರ, ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನು ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣ ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲ ಎಂದು ಉಲ್ಲೇಖಿಸಿದ್ದಾರೆ‌.

ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುದುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆ. ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನವೊಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೇನೆ. ಸರಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರಕಾರಕ್ಕೂ ಮನವಿ ಮಾಡಲು ತಯಾರಿದ್ದೇನೆ ಎಂದು ಹೇಳಿದ್ದಾರೆ.

ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ನಟ ಕಿಚ್ಚನಾಗಿ ಅಲ್ಲ. ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು. ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್ ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು ಎಂದು ಆಗ್ರಹಿಸಿದ್ದಾರೆ.

ವಿಷ್ಣುವರ್ಧನ್ ಅವರಂತಹ ಒಬ್ಬ ಮೇರು ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X