Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆಸ್ಕರ್‌ಗೆ ಸ್ಪರ್ಧಿಸಲು ಭಾರತದಿಂದ...

ಆಸ್ಕರ್‌ಗೆ ಸ್ಪರ್ಧಿಸಲು ಭಾರತದಿಂದ ಅಧಿಕೃತ ಪ್ರವೇಶ ಪಡೆದ ಮಲಯಾಳಂ ಚಿತ್ರ ‘2018’ ಬಗ್ಗೆ ಇಲ್ಲಿದೆ ಮಾಹಿತಿ…

ವಾರ್ತಾಭಾರತಿವಾರ್ತಾಭಾರತಿ27 Sept 2023 5:35 PM IST
share
ಆಸ್ಕರ್‌ಗೆ ಸ್ಪರ್ಧಿಸಲು ಭಾರತದಿಂದ ಅಧಿಕೃತ ಪ್ರವೇಶ ಪಡೆದ ಮಲಯಾಳಂ ಚಿತ್ರ ‘2018’ ಬಗ್ಗೆ ಇಲ್ಲಿದೆ ಮಾಹಿತಿ…

ಹೊಸದಿಲ್ಲಿ: 2024ರ ಆಸ್ಕರ್‌ ಅಕಾಡೆಮಿ ಪ್ರಶಸ್ತಿಗಳಿಗೆ ಟೊವಿನೊ ಥಾಮಸ್ ಸೇರಿದಂತೆ ಬಹು ತಾರಾಗಣದ ಮಳಯಾಲಂ ಚಿತ್ರ ‘2018’ ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿದೆ.

ಕನ್ನಡ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ ಜ್ಯೂರಿ ತಂಡವು ನಿರ್ಧಾರವನ್ನು ಬುಧವಾರ ಪ್ರಕಟಿಸಿದೆ.

2018 ರಲ್ಲಿ ಕೇರಳಕ್ಕೆ ಅಪ್ಪಳಿಸಿದ ಪ್ರವಾಹದ ಕುರಿತಾದ ಚಿತ್ರವಾದ ‘2018ʼ ವಿಮರ್ಶಾತ್ಮಕವಾಗಿಯೂ, ಬಾಕ್ಸ್‌ ಆಫೀಸಿನಲ್ಲೂ ಅದ್ಭುತ ಗೆಲುವು ಸಾಧಿಸಿತ್ತು.

‘2018’ ಈ ವರ್ಷ ಮೇ ತಿಂಗಳಲ್ಲಿ ಬಿಡುಗಡೆಯಾದ ಈ ಚಿತ್ರ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆಯನ್ನು ಕಂಡ ಮಲಯಾಳಂ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2018ರ ಪ್ರವಾಹಕ್ಕೆ ಸಿಲುಕಿ ಕೇರಳ ನಲುಗಿದ್ದ ಸಂದರ್ಭದಲ್ಲಿ ಪ್ರಕೃತಿಯ ಪ್ರತಿಕೂಲ ದಾಳಿಯ ವಿರುದ್ಧ ಮಾನವೀಯತೆ ವಿಜಯ ಸಾಧಿಸಿದ ಹಿನ್ನೆಲೆಯನ್ನಿಟ್ಟುಕೊಂಡು ‘2018: Everyone is a Hero’ ಚಿತ್ರವನ್ನು ನಿರ್ಮಿಸಲಾಗಿತ್ತು. ಆಂಟನಿ ಜೋಸೆಫ್ ನಿರ್ದೇಶನದ ಈ ಚಿತ್ರದಲ್ಲಿ ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಿ ಸೇನೆ ತೊರೆಯುವ ಯುವಕನ ಪಾತ್ರವನ್ನು ಟೋವಿನೊ ಥಾಮಸ್ ನಿರ್ವಹಿಸಿದ್ದು ಚಿತ್ರದಲ್ಲಿ ಆಸಿಫ್ ಅಲಿ, ಲಾಲ್, ನಾರಾಯಣ್, ಕುಂಚಕೊ ಬೋಬನ್ ಹಾಗೂ ಅಪರ್ಣಾ ಬಾಲಮುರಳಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.

ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ

https://bit.ly/3tfd2Ro ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

ಈ ಚಿತ್ರವನ್ನು ಕಾವ್ಯ ಫಿಲ್ಮ್ಸ್ ಕಂಪನಿ ಹಾಗೂ ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ಲಾಂಛನದಡಿ ವೇಣು ಕುನ್ನಪಿಲ್ಲಿ, ಸಿ.ಕೆ. ಪದ್ಮಕುಮಾರ್ ಹಾಗೂ ಆ್ಯಂಟೊ ಜೋಸೆಫ್ ನಿರ್ಮಿಸಿದ್ದರು. 2018 ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸು ಗಳಿಸಿತ್ತು ಹಾಗೂ ವಿಮರ್ಶಕರು ಹಾಗೂ ಚಿತ್ರಪ್ರೇಮಿಗಳ ಅಪಾರ ಪ್ರಶಂಸೆಗೆ ಪಾತ್ರವಾಗಿತ್ತು.

ಇದಕ್ಕೂ ಮುನ್ನ ಭಾರತದಿಂದ ಚೆಲ್ಲೊ ಶೋ (2022), ಕೂಳಂಗಳ್ (2021), ಜಲ್ಲಿಕಟ್ಟು (2020), ಗಲ್ಲಿ ಬಾಯ್ (2019), ವಿಲೇಜ್ ರಾಕ್ ಸ್ಟಾರ್ಸ್ (2018), ನ್ಯೂಟನ್ (2017), ವಿಸಾರಣೈ (2016) ಚಲನಚಿತ್ರಗಳು ಅಕಾಡೆಮಿ ಪ್ರಶಸ್ತಿಗಳಿಗೆ ಪ್ರವೇಶ ಪಡೆದಿದ್ದವು. ಆದರೆ, ‘ಮದರ್ ಇಂಡಿಯಾ’, ‘ಸಲಾಂ ಬಾಂಬೆ’ ಹಾಗೂ ‘ಲಗಾನ್’ ಚಿತ್ರಗಳು ಮಾತ್ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದವು.

2023ರ ಅಕಾಡೆಮಿ ಪ್ರಶಸ್ತಿಗಳಲ್ಲಿ ಭಾರತವು ಎರಡು ಪ್ರಶಸ್ತಿಗಳನ್ನು ಪಡೆದು ಬೀಗಿತ್ತು. ಮೂಲಗೀತೆಗಾಗಿ ಆರ್‍ಆರ್‍ಆರ್‍ ಚಿತ್ರದ ‘ನಾಟು ನಾಟು’ ಗೀತೆ ಆಯ್ಕೆಯಾದರೆ, ಕಾರ್ತಿಕಿ ಗೋನ್ಸಾಲ್ವೆ ನಿರ್ದೇಶಿಸಿದ್ದ ‘ದಿ ಎಲಿಫೆಂಟ್ ವಿಸ್ಪರ್ಸ್’ ಅತ್ಯುತ್ತಮ ಕಿರು ಸಾಕ್ಷ್ಯಚಿತ್ರ ಪ್ರಶಸ್ತಿಗೆ ಪಾತ್ರವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X