ನಟಿ-ರೂಪದರ್ಶಿ ಪೂನಂ ಪಾಂಡೆ ನಿಧನ; ವರದಿ
ಪೂನಂ ಪಾಂಡೆ (Photo: PTI)
ಮುಂಬೈ: ರೂಪದರ್ಶಿ ಹಾಗೂ ನಟಿ ಪೂನಮ್ ಪಾಂಡೆ ಗರ್ಭಕಂಠದ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಈ ಸುದ್ದಿಯನ್ನು ಅವರ ಅಧಿಕೃತ ಇನ್ಸ್ಟಾಗ್ರಾಮ್ ಪೇಜ್ ಮೂಲಕ ಅವರ ಮ್ಯಾನೇಜರ್ ದೃಢಪಡಿಸಿದ್ದಾರೆ ಎಂದು indiatoday.in ವರದಿ ಮಾಡಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಪೂನಮ್ ಪಾಂಡೆ ಮ್ಯಾನೇಜರ್, “ಇಂದು ನಮ್ಮ ಪಾಲಿಗೆ ಅತ್ಯಂತ ಕಠಿಣ ದಿನ. ನಮ್ಮ ಮೆಚ್ಚಿನ ಪೂನಮ್ ಪಾಂಡೆ ಗರ್ಭಕಂಠ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಲು ತೀವ್ರ ಖೇದವಾಗುತ್ತಿದೆ.” ಎಂದು ಹೇಳಿದ್ದಾರೆ.
2013ರಲ್ಲಿ ಬಿಡುಗಡೆಯಾಗಿದ್ದ ‘ನಶಾ’ ಸಿನಿಮಾದ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಿದ್ದ ಪೂನಮ್ ಪಾಂಡೆ, ಕೊನೆಯ ಬಾರಿಗೆ ‘ಲಾಕ್ ಅಪ್’ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು.
Next Story