'72 ಹೂರೇನ್' ಸಿನಿಮಾ ನಿರ್ಮಾಪಕರ ವಿರುದ್ಧ ದೂರು ದಾಖಲು

ಮುಂಬೈ: ಸಮುದಾಯವೊಂದರ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಲಾಗಿದೆ ಹಾಗೂ ದೇಶವನ್ನು ವಿಭಜಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತರೊಬ್ಬರು '72 ಹೂರೇನ್' ಸಿನಿಮಾ ನಿರ್ಮಾಪಕರ ವಿರುದ್ಧ ದೂರು ನೀಡಿದ್ದಾರೆ ಎಂದು ಬುಧವಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರ ಪ್ರಕಾರ, ಮುಂಬೈ ಉಪನಗರದ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತರು ಚಿತ್ರದ ಪ್ರದರ್ಶನವನ್ನು ನಿಷೇಧಿಸುವಂತೆ ಭಾರತೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೂ ಪ್ರತ್ಯೇಕ ದೂರು ಸಲ್ಲಿಸಿದ್ದಾರೆ ಎಂದು ಅವರ ವಕೀಲರಾದ ಅಲಿ ಕಾಶಿಫ್ ಖಾನ್ ತಿಳಿಸಿದ್ದಾರೆ.
ಸಂಜಯ್ ಪೂರಣ್ ಸಿಂಗ್ ಚೌಹಾನ್ ನಿರ್ದೇಶಿಸಿರುವ ಈ ಚಿತ್ರವು ಜುಲೈ 7ರಂದು ತೆರೆ ಕಾಣಲು ಸಜ್ಜಾಗಿದೆ.
ದೂರನ್ನು ಸ್ವೀಕರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರಾದರೂ, ಈವರೆಗೆ ಈ ಸಂಬಂಧ ಯಾವುದೇ ಪ್ರಾಥಮಿಕ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳಲಾಗಿಲ್ಲ ಎಂದು ಹೇಳಲಾಗಿದೆ.
Next Story





