Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನ್ನ ವಿರುದ್ಧ ಷಡ್ಯಂತ್ರ...

ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ: ಸಿ ಟಿ ರವಿ ಆರೋಪ

"ನನಗಾಗುವ ತೊಂದರೆಗೆ ಕಾಂಗ್ರೆಸ್ ಸರ್ಕಾರವೇ ಹೊಣೆ"

ವಾರ್ತಾಭಾರತಿವಾರ್ತಾಭಾರತಿ20 Dec 2024 9:01 AM IST
share
ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ: ಸಿ ಟಿ ರವಿ ಆರೋಪ

ಬೆಂಗಳೂರು: 'ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದ್ದು, ನನಗಾಗುವ ಎಲ್ಲ ತೊಂದರೆಗೆ ಪೊಲೀಸ್ ಇಲಾಖೆ ಮತ್ತು ಕಾಂಗ್ರೆಸ್ ಸರ್ಕಾರವೇ ಹೊಣೆ' ಎಂದು ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ Xನಲ್ಲಿ ವಿಡಿಯೊ ಸಹಿತ ಪೋಸ್ಟ್ ಹಂಚಿಕೊಂಡಿರುವ ಅವರು, 'ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ನನ್ನನ್ನು ಕೂರಿಸಿಕೊಂಡು ಸುತ್ತಾಡಿಸುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.

'ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್‌ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೆಸ್ ಸರ್ಕಾರವೇ ಕಾರಣ' ಎಂದು ಹೇಳಿದ್ದಾರೆ.

'ನನ್ನನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದು ಯಾಕೆ? ನನ್ನನ್ನು ಕೊಲೆ ಮಾಡುವುದೇ ನಿಮ್ಮ ಉದ್ದೇಶ. ಇಲ್ಲಂದ್ರೆ ಯಾಕೆ ಸುತ್ತಾಡಿಸಿಕೊಂಡು ಬಂದಿದ್ದೀರಾ' ಎಂದು ಅವರು ಪ್ರಶ್ನಿಸಿದ್ದಾರೆ.

ಪೊಲೀಸರು ನನ್ನನ್ನು ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಖಾನಾಪುರ ಠಾಣೆಗೆ ಕರೆತಂದರು. ನನ್ನ ಮೇಲೆ ಯಾವ ಪ್ರಕರಣ ದಾಖಲಾಗಿದೆ ಎಂದೂ ಅವರು ಹೇಳಲಿಲ್ಲ. ಶೂನ್ಯ ಎಫ್‌ಐಆರ್‌ ದಾಖಲಿಸುವಂತೆ ನಾನು ಕೊಟ್ಟ ದೂರನ್ನೂ ದಾಖಲಿಸುತ್ತಿಲ್ಲ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದ್ದಾರೆ. ಎಫ್‌ಐಆರ್‌ನಲ್ಲಿ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ 3 ಗಂಟೆ ಕಳೆದಿದೆ. ನನ್ನನ್ನು ಅಪರಾಧಿಯಂತೆ ನಡೆಸಿಕೊಳ್ಳಲಾಗುತ್ತಿದೆ. ನನಗೆ ಏನು ಬೇಕು ಅಂತಲೂ ಕೇಳಿಲ್ಲ. ನನ್ನನ್ನು ಪೊಲೀಸ್ ಠಾಣೆಗೆ ಏಕೆ ಕರೆತಂದಿದ್ದಾರೆ ಎಂದೂ ಹೇಳಿಲ್ಲ. ನನ್ನ ಜೀವಕ್ಕೆ ಅಪಾಯವಿದ್ದು, ಏನಾದರೂ ಸಂಭವಿಸಿದರೆ ಪೊಲೀಸರು ಹಾಗೂ ಡಿಕೆ ಶಿವಕುಮಾರ್, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ತಂಡವೇ ನೇರ ಹೊಣೆಯಾಗುತ್ತೆ ಎಂದು ಹೇಳಿದ್ದಾರೆ.

ಮಗದೊಂದು ಪೋಸ್ಟ್‌ನಲ್ಲಿ ತಲೆಗೆ ಆದ ಗಾಯದ ಚಿತ್ರವನ್ನು ಹಂಚಿರುವ ಸಿ.ಟಿ. ರವಿ, 'ಕರ್ನಾಟಕದಲ್ಲಿ ಯಾರೂ ಕೂಡ ಸುರಕ್ಷಿತರಲ್ಲ' ಎಂದು ಹೇಳಿದ್ದಾರೆ. ಆದರೆ, ಅವರಿಗೆ ಯಾವ ರೀತಿ ಪೆಟ್ಟುಬಿದ್ದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಲ್ಲೇಖಿಸಿ ಮಾನಹಾನಿ ಪದಬಳಕೆ ಆರೋಪದಡಿ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಯೇ ಇಲ್ಲಿನ ಹಿರೇಬಾಗೇವಾಡಿ ಠಾಣಾ ಪೊಲೀಸರು ಬಂಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X