Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬದ್ರ್ ಕಮಿಟಿಯ ಶ್ರಮ ಹಿರಿಯರ...

ಬದ್ರ್ ಕಮಿಟಿಯ ಶ್ರಮ ಹಿರಿಯರ ವ್ಯಕ್ತಿತ್ವದ ಪ್ರತೀಕ: ಸ್ಪೀಕರ್ ಯು.ಟಿ.‌ ಖಾದರ್

ವಾರ್ತಾಭಾರತಿವಾರ್ತಾಭಾರತಿ8 May 2026 10:06 PM IST
share
ಬದ್ರ್ ಕಮಿಟಿಯ ಶ್ರಮ ಹಿರಿಯರ ವ್ಯಕ್ತಿತ್ವದ ಪ್ರತೀಕ: ಸ್ಪೀಕರ್ ಯು.ಟಿ.‌ ಖಾದರ್
ನಡುಪದವು: ಬದ್ರ್ ಟವರ್ ಕಟ್ಟಡ ಉದ್ಘಾಟನೆ, ಧಾರ್ಮಿಕ ಉಪನ್ಯಾಸ

ಕೊಣಾಜೆ: ಖಿದ್ಮತುಲ್ ಇಸ್ಲಾಮ್ ಬದ್ರ್ ಕಮಿಟಿ ಶಾಂತಿನಗರ ನಡುಪದವು ಇದರ 40 ನೇ ವಾರ್ಷಿಕ ಮತ್ತು ಬದ್ರ್ ಟವರ್ ಕಟ್ಟಡ ಉದ್ಘಾಟನೆ ಹಾಗೂ ಏಕದಿನ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಗುರುವಾರ ನಡುಪದವು ಮಸೀದಿ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಮಕ್ಕಳಿಗೆ ಮೌಲ್ಯ ಯುತ ಶಿಕ್ಷಣ, ಧರ್ಮಗುರುಗಳಿಗೆ ವಸತಿ, ಆರ್ಥಿಕ ಸಮಸ್ಯೆ ನಿವಾರಣೆಗೆ ಕೈಗೊಂಡ ಯೋಜನೆಗಳ ಮೂಲಕ ನಡುಪದವು ಮಸೀದಿ ಇತರ ಜಮಾಅತ್ ಗಳಿಗೆ ಮಾದರಿ, ಬದ್ರ್ ಕಮಿಟಿಯ ಶ್ರಮ ಹಿರಿಯರ ವ್ಯಕ್ತಿತ್ವದ ಪ್ರತೀಕ ಎಂದು ಹೇಳಿದರು.

ಬೆಳ್ತಂಗಡಿ ದಾರುಸ್ಸಲಾಂ ಅಧ್ಯಕ್ಷ ಸಯ್ಯದ್ ಅಬಿದೀನ್ ಜಿಫ್ರಿ ತಂಙಳ್ 'ಬದ್ರ್ ಟವರ್' ಕಟ್ಟಡವನ್ನು ಉದ್ಘಾಟಿಸಿ, ಪ್ರಸ್ತುತ ದಿನಗಳಲ್ಲಿ ಯುದ್ಧದಿಂದಾಗಿ ವಿಶ್ವವೇ ಸಂಕಷ್ಟದಲ್ಲಿದ್ದು ಜನರು ವಿವಿಧ ಸಮಸ್ಯೆಗಳನ್ನು ಎದುರಿಸಿದ್ದಾರೆ, ಯಾವುದೇ ಕಾಲಘಟ್ಟದಲ್ಲೂ ಕಷ್ಟ ಎದುರಾದರೆ ದೇವನ ಮೇಲೆ ವಿಶ್ವಾಸವಿಟ್ಟು ಜೀವನ ಸಾಗಿಸಿದರೆ ಜಯಗಳಿಸಲು ಸಾಧ್ಯ ಎಂದರು.

ನಡುಪದವು ಅಲ್‌-ಉಮರ್ ಜುಮಾ ಮಸೀದಿಯ ಖತೀಬ್ ಜುನೈದ್ ಸಅದಿ ಅಲ್ ಅಫ್ಳಲಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಧಾರ್ಮಿಕ ಗುರು ನಿಝಾಮುದ್ದೀನ್ ಅಝ್ಹರಿ ಕುಮ್ಮನಂ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಪೊಯ್ಯತ್ತಬೈಲ್ ಕೇಂದ್ರ ಜುಮಾ ಮಸೀದಿಯ ಮುದರ್ರಿಸ್ ಅಬ್ದುಲ್ ಜಬ್ಬಾರ್ ಸಖಾಫಿ ಧಾರ್ಮಿಕ ಪ್ರವಚನ ಉದ್ಘಾಟಿಸಿದರು.

ಮಂಜೇಶ್ವರ ಶಾಸಕ ಕೆಎಂ ಅಶ್ರಫ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಸೀದಿಯ ಮಾಜಿ ಅಧ್ಯಕ್ಷ ಅಬ್ದುಲ್ ನಾಸೀರ್ ಕೆಕೆ ಅವರು ಅಶಯದ ಮಾತುಗಳನ್ನಾಡುತ್ತಾ, ಮದ್ರಸದ ಗುರುಗಳು ಆರ್ಥಿಕವಾಗಿ ಬಹಳ ಹಿಂದುಳಿದಿದ್ದಾರೆ. ರಾಜ್ಯದ ಎಲ್ಲಾ ಮದ್ರಸದ ಗುರುಗಳಿಗೆ ಸರ್ಕಾರದ ವತಿಯಿಂದ ಅನುದಾನ ಒದಗುವಂತೆ ಸಹಾಯ ಮಾಡಬೇಕೆಂದು ಯು.ಟಿ.ಖಾದರ್ ಅವರಲ್ಲಿ ವಿನಂತಿಸಿದರು.

ಕಾರ್ಯಕ್ರಮದಲ್ಲಿ ಬಾಳೆಪುಣಿ ಗ್ರಾಪಂ ಮಾಜಿ ಉಪಾಧ್ಯಕ್ಷ ಸಿ.ಎಂ.ಶರೀಫ್ ಪಟ್ಟೋರಿ, ಮದ್ರಸಾ ಅಧ್ಯಾಪಕರಾದ ಮುಹಮ್ಮದ್ ಹನೀಫ್ ಫೈಝಿ, ಹೈದರ್ ಲತೀಫಿ, ರಶೀದ್ ಇರ್ಫಾನಿ, ಸಯ್ಯದ್ ಬದ್ರುದ್ದೀನ್ ಹೈದ್ರೋಸ್ ತಂಙಳ್, ಉಸ್ಮಾನ್ ಉಸ್ತಾದ್, ಕುಂಞಿ ಹಾಜಿ, ಉಮ್ಮರ್ ಸಅದಿ ಉಸ್ತಾದ್, ಎಂ.ಪಿ.ಮಹಮ್ಮದ್, ಕೆಎಂಎಸ್ ಮಹಮ್ಮದ್ ಶಾಫಿ, ಟಿ.ಆರ್.ಅಬ್ದುಲ್ ಖಾದರ್, ಡಾ.ಇಸ್ಮಾಯಿಲ್, ಖಿದ್ಮತುಲ್ ಇಸ್ಲಾಂ ಬದ್ರ್ ಕಮಿಟಿ ಅಧ್ಯಕ್ಷ ನಝೀರ್ ಕೆ.ಎಂ., ಖಾದರ್ ಪಟ್ಟೋರಿ, ಕೊಣಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ಮೊದಲಾದವರು ಉಪಸ್ಥಿತರಿದ್ದರು.

ಮಸೀದಿಯ ಮಾಜಿ ಅಧ್ಯಕ್ಷ ಇಬ್ರಾಹಿಂ ನಡುಪದವು ಸ್ವಾಗತಿಸಿದರು. ಅಧ್ಯಕ್ಷ ಎನ್.ಎಸ್.ಅಬ್ದುಲ್ ನಾಸಿರ್ ನಡುಪದವು ಪ್ರಾಸ್ತಾವಿಕವಾಗಿ ಮಾತನಾಡಿದರು. ‌ಬದ್ರ್ ಕಮಿಟಿ ಕಾರ್ಯದರ್ಶಿ ಉಮರ್ ಸ ಅದಿ ವಂದಿಸಿದರು. ನಿಝಾಮ್ ಅನ್ಸಾರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X