ಜ. 20-21: ದ.ಕ.ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಪಂ, ಸವಣೂರು ಗ್ರಾಪಂ ಹಾಗೂ ಸವಣೂರು ಯುವಕ ಮಂಡಲ (ರಿ)ದ ಸಹಯೋಗದಲ್ಲಿ 2023-24ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಜ.20 ಹಾಗೂ 21ರಂದು ಸವಣೂರಿನ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜ.20ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ. ಯುವ ಜನರು ದ.ಕ.ಜಿಲ್ಲೆಯವರಾಗಿರಬೇಕು ಹಾಗೂ 15 ರಿಂದ 35 ವರ್ಷ ಪ್ರಾಯದೊಳಗಿರಬೇಕು. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ವೈ. ನಾಯಕ್, ದೂ.ಸಂ:0824-2451264/ ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಮೊ.ಸಂ: 8971631945 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





