Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲಿಂಗಾಯತ ಪರಿಪೂರ್ಣ ಧರ್ಮ: ಡಾ. ಬಸವಲಿಂಗ...

ಲಿಂಗಾಯತ ಪರಿಪೂರ್ಣ ಧರ್ಮ: ಡಾ. ಬಸವಲಿಂಗ ಪಟ್ಟದೇವರು

ವಾರ್ತಾಭಾರತಿವಾರ್ತಾಭಾರತಿ19 Sept 2025 6:24 PM IST
share
ಲಿಂಗಾಯತ ಪರಿಪೂರ್ಣ ಧರ್ಮ: ಡಾ. ಬಸವಲಿಂಗ ಪಟ್ಟದೇವರು

ಮಂಗಳೂರು: ಲಿಂಗಾಯತ ಎಂದರೆ ಜಾತಿ ಅಲ್ಲ, ಇದು ಪರಿಪೂರ್ಣ ಧರ್ಮ. ಜಾತಿ ಬೇರೆ ಧರ್ಮ ಬೇರೆ, ಜಾತಿ ಹುಟ್ಟಿನಿಂದ ಬರುವುದಾಗಿದ್ದು, ಧರ್ಮ ಸಂಸ್ಕಾರದಿಂದ ಬರುತ್ತದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಡಾ. ಬಸವಲಿಂಗಪಟ್ಟದೇವರು ಅಭಿಪ್ರಾಯಿಸಿದ್ದಾರೆ.

ದ.ಕ. ಜಿಲ್ಲಾ ಸಹಮತ ವೇದಿಕೆಯು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಭಾಗವಾಗಿ ನಡೆದ ವಿದ್ಯಾರ್ಥಿಗಳ ಜೊತೆಗಿನ ವಚನ ಸಂವಾದದಲ್ಲಿ ಅವರು ಮಾತನಾಡಿದರು.

ಬಸವಣ್ಣ ಸರ್ವಧರ್ಮ ಸಮನ್ವಯ ಬೋಧಿಸಿದವರು, ಮತ್ತೆ ಲಿಂಗಾಯತ ಧರ್ಮ ಅಂತ ಯಾಕೆ ಬೇಕಿತ್ತು ಎಂಬ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಈ ಮೇಲಿನ ಪ್ರತಿಕ್ರಿಯೆ ನೀಡಿದ ಅವರು, ಜಾತಿ ಕತ್ತಲೆಯಂತೆ, ಧರ್ಮ ಜ್ಯೋತಿಯಂತೆ ಎಂದರು.

ಜಾತ್ಯತೀತ ಸಮಾಜ ನಿರ್ಮಾಣ ಆಗಬೇಕು ಎನ್ನುವಾಗ ಜಾತಿ ಸಮೀಕ್ಷೆ ಯಾಕೆ ಬೇಕು ಎಂದು ವಿದ್ಯಾರ್ಥಿನಿಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹುಲಸೂರು ಮಠದ ಶಿವಾನಂದ ಸ್ವಾಮೀಜಿ, ಕೆಲವರ ಉಳಿವಿಗಾಗಿ ಜಾತಿ ವ್ಯವಸ್ಥೆ ಇಂದಿಗೂ ಉಳಿದಿದೆ. ಯುವ ಮನಸ್ಸುಗಳು ಸಿದ್ಧವಾದರೆ, ಭವಿಷ್ಯದ ಭಾರತವನ್ನು ಜಾತ್ಯತೀತ ಮಾಡಲು ಸಾಧ್ಯ ವಿದೆ. ಇಂತಹ ಪ್ರಶ್ನೆಗಳು ಸಂಸತ್‌ನಲ್ಲಿ, ವಿಧಾನ ಸೌಧದಲ್ಲಿ ಚರ್ಚೆಯಾಗಬೇಕು ಎಂದು ಹೇಳಿದರು.

10ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ವಚನ ಸಂವಾದದಲ್ಲಿ ಭಾಗವಹಿಸಿದ್ದರು.

ನವಿಲುಗುಂದ ಮಠದ ಬಸವಲಿಂಗ ಸ್ವಾಮೀಜಿ, ಹಂದಿಗುಂದದ ಶಿವಾನಂದ ಸ್ವಾಮೀಜಿ, ಬೆಳಗಾವಿಯ ಶಿವಬಸವ ದೇವರು, ಕಲಬುರಗಿಯ ವೀರಸಿದ್ಧ ದೇವರು, ಮಮ್ಮಿಗಟ್ಟಿಯ ಬಸವಾನಂದ ದೇವರು, ರಾಯಚೂರಿನ ವೀರಭದ್ರ ಸ್ವಾಮೀಜಿ, ಬಸವಕಲ್ಯಾಣದ ಬಸವರಾಜ ದೇವರು, ಗಡಿಂಗ್ಲೇಸದ ಮಹಂತ ಸಿದ್ದೇಶ್ವರ ಸ್ವಾಮೀಜಿ, ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಉಪಸ್ಥಿತರಿದ್ದರು.

ಬೆಳಗಾವಿ ಸೇಗುಣಸಿಯ ಮಹಾಂತ ಪ್ರಭು ಸ್ವಾಮೀಜಿ ದಿಕ್ಸೂಚಿ ಮಾತನಾಡಿ, ಸಂವಾದ ನಿರ್ವಹಿಸಿದರು. ಸಹಮತ ವೇದಿಕೆ ಅಧ್ಯಕ್ಷ ಪ್ರೊ. ಕೆ.ಎಸ್.ಜಯಪ್ಪ ಸ್ವಾಗತಿಸಿದರು. ಬಸವ ಸಂಸ್ಕೃತಿ ಅಭಿಯಾನದ ಜಿಲ್ಲಾ ಸಂಚಾಲಕ ಉಮರ್ ಯು.ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರೊ. ಮೀನಾಕ್ಷಿ ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.

‘ಇಸ್ಲಾಂ ಧರ್ಮಕ್ಕೆ ಮುಹಮ್ಮದ್ ಪೈಗಂಬರ್ ಗುರು, ಕುರಾನ್ ಧರ್ಮ ಗ್ರಂಥ. ಕ್ರೈಸತರಿಗೆ ಯೇಸುಕ್ರಿಸ್ತ ಧರ್ಮಗುರು ಬೈಬಲ್ ಧರ್ಮಗ್ರಂಥ. ಹಾಗೆಯೇ ಲಿಂಗಾಯತರಿಗೆ ಬಸವಣ್ಣ ಧರ್ಮಗುರುಗಳಾದರೆ ವಚನ ಸಾಹಿತ್ಯವೇ ಧರ್ಮ ಗ್ರಂಥ. ಇವೆರಡರ ಪ್ರಕಾರ ನಡೆದುಕೊಳ್ಳುವವರು ಲಿಂಗಾಯತರು’ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದೇವರು ಅಭಿಪ್ರಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X