Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಾತ್ಮಾ ಗಾಂಧೀಜಿ ಸತ್ಯವನ್ನು ಅನುಸರಿಸಲು...

ಮಹಾತ್ಮಾ ಗಾಂಧೀಜಿ ಸತ್ಯವನ್ನು ಅನುಸರಿಸಲು ಬಯಸಿದ ಆಧ್ಯಾತ್ಮಿಕ ಸಾಧಕ : ಶ್ರೀಕೃಷ್ಣ ಗಜಾನನ ಕುಲಕರ್ಣಿ

‘ಗಾಂಧಿ ಪಜ್ಜೆದ ಸಾದಿ ಪತ್ತೊಂದು’ ತುಳು ಭಾಷಾಂತರ ಪುಸ್ತಕದ ಬಿಡುಗಡೆ, ವಿಚಾರ ಸಂಕಿರಣ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Oct 2026 7:31 PM IST
share
ಮಹಾತ್ಮಾ ಗಾಂಧೀಜಿ ಸತ್ಯವನ್ನು ಅನುಸರಿಸಲು ಬಯಸಿದ ಆಧ್ಯಾತ್ಮಿಕ ಸಾಧಕ :  ಶ್ರೀಕೃಷ್ಣ ಗಜಾನನ ಕುಲಕರ್ಣಿ

ಮಂಗಳೂರು: ಮಹಾತ್ಮಾ ಗಾಂಧೀಜಿಯವರು ಮೂಲತಃ ಸತ್ಯವನ್ನು ಅನುಸರಿಸಲು ಬಯಸಿದ ಆಧ್ಯಾತ್ಮಿಕ ಸಾಧಕರಾಗಿದ್ದರು ಎಂದು ಮಹಾತ್ಮಾ ಗಾಂಧೀಜಿಯವರ ಮರಿಮಗ ಶ್ರೀಕೃಷ್ಣ ಗಜಾನನ ಕುಲಕರ್ಣಿ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ತುಳು ಅಧ್ಯಯನ ಪೀಠ ಮಂಗಳೂರು ,ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನ ಪುತ್ತೂರು, ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ವಿಶ್ವವಿದ್ಯಾ ನಿಲಯ ಕಾಲೇಜಿನ ರವೀಂದ್ರ ಕಲಾಭ ವನದಲ್ಲಿ ಗುರುವಾರ ನಡೆದ ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟಗಾರ ಕುಂಬ್ರ ಜತ್ತಪ್ಪರೈಯವರ ಜೀವನದ ಬಗೆಗಿನ ಕೃತಿ ‘ಗಾಂಧಿ ಪಜ್ಜೆದ ಸಾದಿ ಪತ್ತೊಂದು’ ತುಳು ಭಾಷಾಂತರ ಪುಸ್ತಕದ ಬಿಡುಗಡೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಗಾಂಧಿ ಮತ್ತು ವಿಶ್ವಶಾಂತಿ’ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ಸನ್ನಿವೇಶಗಳು ಅವರನ್ನು ಸಾಮಾಜಿಕ ಮತ್ತು ರಾಜಕೀಯ ರಂಗಕ್ಕೆ ತಳ್ಳಿದವು. ಗಾಂಧೀಜಿಯವರ ಚಿಂತನೆಗಳು ಉಪನಿಷತ್ತುಗಳು, ವೇದಗಳು ಮತ್ತು ಭಗವದ್ಗೀತೆಯಲ್ಲಿ ಆಳವಾಗಿ ಬೇರೂರಿದ್ದವು. ಗೀತೆ ಅವರ ಆಧ್ಯಾತ್ಮಿಕ ತಾಯಿಯಾಗಿತ್ತು ಎಂದರು.

ಅಹಂಕಾರ ಪ್ರೇರಿತ ಹಾಗೂ ಸ್ವಾರ್ಥದಿಂದ ಕೂಡಿದ ಕಥನಗಳನ್ನು ಎಂದಿಗೂ ಸತ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಗಾಂಧೀಜಿಯವರ ಪ್ರಕಾರ ಸತ್ಯ ಎಂಬುದು ಕೇವಲ ದೈನಂದಿನ ಅಥವಾ ವೈಯಕ್ತಿಕ ಸತ್ಯವಲ್ಲ, ಅದು ಶಾಶ್ವತವಾದ ಅಂತಿಮ ಸತ್ಯ. ಇಡೀ ಜಗತ್ತೇ ನಿಮ್ಮ ವಿರುದ್ಧ ನಿಂತರೂ, ನೀವು ನಿಂತಿರುವುದು ಸತ್ಯದ ಪರವಾಗಿ ಎಂಬ ನಂಬಿಕೆ ನಿಮಗಿದ್ದರೆ, ನೀವು ಆ ಸತ್ಯದ ಪರವಾಗಿ ಮಾತ್ರವೇ ಗಟ್ಟಿಯಾಗಿ ನಿಲ್ಲಬೇಕು ಎಂದು ಅವರು ಹೇಳಿದರು.

ಗಾಂಧೀಜಿಯವರ ಅಹಿಂಸಾ ತತ್ವವನ್ನು ಪ್ರಸ್ತಾಪಿಸಿದ ಅವರು, ಭಗವದ್ಗೀತೆಯಲ್ಲಿ ಉಲ್ಲೇಖಿಸಲಾದ ಅಹಿಂಸೆ, ಸತ್ಯ, ಕ್ರೋಧಮುಕ್ತಿ, ತ್ಯಾಗ ಮತ್ತು ಶಾಂತಿಯ ಮೌಲ್ಯಗಳನ್ನು ಸ್ಮರಿಸಿದರು.

ಬೆಂಗಳೂರು ಇದರ ಕರ್ನಾಟಕ ಗಾಂಧಿ ಸ್ಮಾರಕನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ಕಾರ್ಯಕ್ರಮ ವನ್ನು ಉದ್ಘಾಟಿಸಿ, ದಿಕ್ಚೂಚಿ ಭಾಷಣ ಮಾಡಿ ' ಸೇವೆ ಮತ್ತು ತ್ಯಾಗ, ಸತ್ಯ ಮತ್ತು ಅಹಿಂಸೆಯ ತತ್ವಗಳ ಮೇಲೆ ಭಾರತ ವನ್ನು ಸ್ವಾತಂತ್ರ ಹೋರಾಟಗಾರರು ಕಟ್ಟಿದರು. ಅವರ ಕನಸನ್ನು ನನಸು ಮಾಡಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ನುಡಿದರು. ಮಹಾತ್ಮಾ ಗಾಂಧಿ ತಮ್ಮ ಬದುಕಿನಲ್ಲಿ ಮೂಲಭೂತವಾದಿಗಳ ವಿರುದ್ಧ , ಹಿಂಸೆಪ್ರತಿವಾದಿಗಳ ಮತ್ತು ಕೋಮವಾದಿಗಳ ವಿರುದ್ಧ ಹೋರಾಡಿದರು. ಭಾರತ ಇರುವವರೆಗೆ ಗಾಂಧಿ ಬೇಕು. ಗಾಂಧಿಯನ್ನು ಬಿಟ್ಟು ಭಾರತ ಇಲ್ಲ , ಗಾಂಧಿ ಬಿಟ್ಟು ಭಾರತ ಇಲ್ಲ. ಅವರ ಬದುಕೇ ಅವರ ಸಂದೇಶವಾಗಿದೆ. ಗಾಂಧಿಯನ್ನು ಅಧ್ಯಯನ ಮಾಡಿ, ಅರ್ಥಮಾಡಿಕೊಂಡರೆ ಭಾರತದ ಆತ್ಮವನ್ನು ಅರಿತುಕೊಂಡಂತೆ ಎಂದು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ವಿಶ್ರಾಂತ ಕುಲಪತಿ ಪ್ರೊ.ಬಿ.ಎ. ವಿವೇಕ ರೈ ಪುಸ್ತಕ ಬಿಡುಗಡೆ ಮಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಪಿ.ಎಲ್.ಧರ್ಮ ಅಧ್ಯಕ್ಷತೆ ವಹಿಸಿದ್ದರು.

ಕುಪ್ಪ ದ್ರಾವಿಡಿಯನ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಲ್.ಸಿ. ಮಲ್ಲಯ್ಯ, ಮಂಗಳೂರು ಡಿಐಜಿಪಿ ಆರ್.ಚೇತನ್, ಹಿರಿಯ ಗಾಂಧಿ ಚಿಂತಕ ಪ್ರೊ. ಜಿ. ಶಿವರಾಜ್ ಉಪಸ್ಥಿತರಿದ್ದರು.

ಪುತ್ತೂರಿನ ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನ ಕಜೆಮಾರು ಸಂಸ್ಥಾಪಕ ಕೆ. ಪ್ರಮೋದ್ ಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಸ್ವಾಗತಿಸಿದರು. ಮಂಗಳೂರು ವಿವಿ ಎನ್‌ಎನ್‌ಎಸ್ ಸಂಯೋಜನಾಧಿಕಾರಿ ಡಾ.ಶೇಷಪ್ಪ ಅಮಿನ್ ಕೆ ವಂದಿಸಿದರು. ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯದರ್ಶಿ ವಾರಿಣಿ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X