Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಐಟಿ ತನಿಖೆಗೆ ಬೆಂಬಲ: 24ರಂದು...

ಎಸ್ಐಟಿ ತನಿಖೆಗೆ ಬೆಂಬಲ: 24ರಂದು ಸೌಜನ್ಯಾ ಹೋರಾಟ ಸಮಿತಿಯಿಂದ 'ಉಜಿರೆ ಚಲೋ'

ವಾರ್ತಾಭಾರತಿವಾರ್ತಾಭಾರತಿ14 Aug 2025 1:15 PM IST
share
ಎಸ್ಐಟಿ ತನಿಖೆಗೆ ಬೆಂಬಲ: 24ರಂದು ಸೌಜನ್ಯಾ ಹೋರಾಟ ಸಮಿತಿಯಿಂದ ಉಜಿರೆ ಚಲೋ

ಮಂಗಳೂರು, ಆ.14: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಶಿಕ್ಷಕಿ ವೇದವಲ್ಲಿ, ವಿದ್ಯಾರ್ಥಿನಿ ಪದ್ಮಲತಾ ಆನೆ ಮಾವುತ ಹಾಗೂ ಆತನ ಪತ್ನಿ ಮತ್ತು ಸೌಜನ್ಯಾ ಕೊಲೆ ಪ್ರಕರಣಗಳ ಕುರಿತು ಎಸ್ಐಟಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಆ.24ರಂದು ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮ ಆಯೋಜಿಸಲಾಗಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಮಿತಿಯ ಕೆ.ದಿನೇಶ್ ಗಾಣಿಗ, ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿದ್ದ ಸಂತೋಷ್ ರಾವ್ ನಿರಪರಾಧಿ ಎಂದು ಹೇಳಿರುವ ನ್ಯಾಯಾಲಯದ ಆದೇಶದಲ್ಲಿ, ತನಿಖೆಯ ಮೊದಲ ಹಂತದಲ್ಲಿ ಅಧಿಕಾರಿಗಳಿಂದ ತಪ್ಪು ಮಾಡಿದ್ದಾರೆ. ಈ ಬಗ್ಗೆ ಅಕ್ವಿಟಲ್ ಸಮಿತಿ ರಚಿಸಿ ತನಿಖೆ ಮಾಡಿ ಎಂದು ಆದೇಶಿಸಲಾಗಿದೆ. ಆದರೆ ಆ ತನಿಖೆ ಆಗಿಲ್ಲ. ಈ ಬಗ್ಗೆ ನಾವು ಈಗಾಗಲೇ ಎಸ್ಐಟಿ ಮುಖ್ಯಸ್ಥರನ್ನು ಭೇಟಿ ಮಾಡಿ ತನಿಖೆಗೆ ಒತ್ತಾಯಿಸಿದ್ದೇವೆ ಎಂದರು.

1973ರಲ್ಲಿ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ಪದ್ಮಲತಾ ಅತ್ಯಾಚಾರ ಹಾಗೂ ಕೊಲೆಯಾಗಿತ್ತು. 1986ರಲ್ಲಿ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಡೆಯುವ ಶಾಲೆಯ ಶಿಕ್ಷಕಿ ವೇದವಲ್ಲಿ ಅವರನ್ನು ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿತ್ತು. ಇವೆರಡೂ ಪ್ರಕರಣಗಳಲ್ಲಿ ಆರೋಪಿ ಪತ್ತೆಯಾಗಿಲ್ಲ. 2012ರಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ಆನೆ ಮಾವುತ ನಾರಾಯಣ ಮತ್ತು ಯಮುನಾರ ಕೊಲೆ ನಡೆದಿತ್ತು. ಈ ಪ್ರಕರಣದ ಆರೋಪಿಯೂ ಸಿಕ್ಕಿಲ್ಲ. ಇದಲ್ಲದೆ ಉಜಿರೆಯಲ್ಲಿ 2002ರಿಂದ 2012ರವರೆಗೆ 452 ಅಸಹಜ ಸಾವು ಪ್ರಕರಣಗಳು ನಡೆದಿವೆ. ಇದರಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಹೇಳಿರುವ ಮೃತದೇಹಗಳಿಗೂ ಪೊಲೀಸ್ ಇಲಾಖೆ ನೀಡಿರುವ ಯುಡಿಆರ್ ಗೂ ವ್ಯತ್ಯಾಸ ಕಂಡುಬಂದಿದೆ. ಹಾಗಾಗಿ ಈ ಬಗ್ಗೆ ಎಸ್ಐಟಿ ಮೂಲಕ ತನಿಖೆ ಆಗಬೇಕಾಗಿದೆ ಎಂದು ಅವರು ಹೇಳಿದರು.

ಸೌಜನ್ಯಾ ಹೋರಾಟಗಾರರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿಲ್ಲ. ಹಾಗಿದ್ದರೂ ಹೋರಾಟಗಾರರ ಮೇಲೆ ದೂರು ನೀಡಲಾಗುತ್ತಿದೆ. ಹಿಂದೂ ಧರ್ಮ ಹಾಳಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ತಪ್ಪು ಆದಾಗ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ನ್ಯಾಯಪರ ಹೋರಾಟಕ್ಕೆ ಸಂಬಂಧಿಸಿ ನಮ್ಮ ವಿರುದ್ಧ ಮುಸ್ಲಿಮರ ಹೋರಾಟ, ಕಮ್ಯುನಿಸ್ಟರು ಇದ್ದಾರೆ ಎಂದು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ. ನಾವು ಇಂತಹವರೇ ಅಪರಾಧಿಗಳು ಎಂದು ಹೇಳಿಲ್ಲ. ಅಪರಾಧಿಗಳನ್ನು ಪತ್ತೆ ಹಚ್ಚಿ ಎಂದು ಕೇಳುತ್ತಿರುವುದು ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆದಿತ್ಯ, ಯೋಗೇಂದ್ರ ಪುತ್ರನ್, ಸಚಿನ್ ಶ್ರೀಯಾನ್ ಉಪಸ್ಥಿತರಿದ್ದರು.

ಕ್ಷೇತ್ರದ ಹೆಸರು ಹಾಳಾಗುತ್ತಿದೆ, ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಹೇಳುತ್ತಿದ್ದಾರೆ. ಕ್ಷೇತ್ರದ ಪರವಾದ ಶಾಸಕರ ಹೋರಾಟಕ್ಕೆ ಅಭಿನಂದನೆ. ಆದರೆ ಈವರೆಗೆ ಸೌಜನ್ಯಾ, ವೇದವಲ್ಲಿ, ಪದ್ಮಲತಾ ಕೊಲೆ ಪ್ರಕರಣಗಳ ಬಗ್ಗೆ ಮಾತನಾಡದ ಶಾಸಕರು ಈಗ ಯಾಕೆ ಹೋರಾಟ ನಡೆಸುತ್ತಿದ್ದಾರೆ. ಯಾರನ್ನು ಉಳಿಸುವ ಸಲುವಾಗಿ ಅವರ ಹೋರಾಟ ಎಂಬುದು ಜನಸಾಮಾನ್ಯರಿಗೆ ತಿಳಿದಿದೆ ಎಂದು ದಿನೇಶ್ ಗಾಣಿಗ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X