Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಒಪಿಡಿಗೆ...

ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಒಪಿಡಿಗೆ 70 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ: ಡಾ.ಶಿವಪ್ರಕಾಶ್

ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಕಾರುಣ್ಯ ಪಾಕಶಾಲೆ, ಕಾರ್ಯಾಲಯದ ಉದ್ಘಾಟನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ15 May 2025 8:48 PM IST
share
ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಒಪಿಡಿಗೆ 70 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ: ಡಾ.ಶಿವಪ್ರಕಾಶ್

ಮಂಗಳೂರು: ಮಂಗಳೂರಿನ ಜಿಲ್ಲಾ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಹೊರರೋಗಿಗಳ ವಿಭಾಗಕ್ಕೆ (ಒಪಿಡಿ ಬ್ಲಾಕ್ ) 70 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸ ಲಾಗಿದೆ ಎಂದು ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷರಾದ ಡಾ.ಶಿವಪ್ರಕಾಶ್.ಡಿ.ಎಸ್ ತಿಳಿಸಿದ್ದಾರೆ.

ನಗರದ ಜೆಪ್ಪು ಎಂ.ಆರ್.ಭಟ್ ಲೇನ್‌ನಲ್ಲಿ ಗುರುವಾರ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಇದರ ಕಾರುಣ್ಯ ಪಾಕಶಾಲೆ ಮತ್ತು ಎಂ.ಫ್ರೆಂಡ್ಸ್ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸ್ಪೀಕರ್ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಅವರು ವೆನ್‌ಲಾಕ್ ಆಸ್ಪತ್ರೆಯ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಐದು ಅಂತಸ್ತಿನ ಹೊಸ ಒಪಿಡಿ ಬ್ಲಾಕ್‌ನಲ್ಲಿ ಮೂರು ಮೂರರಲ್ಲಿ ಒಪಿಡಿ ಮತ್ತು ಎರಡರಲ್ಲಿ ವಾರ್ಡ್‌ಗೆ ಬಳಕೆಯಾಗಲಿದೆ. ಇದು ನಿರ್ಮಾಣಗೊಂಡಲ್ಲಿ ಇಂತಹ ಅತ್ಯಾಧುನಿಕ ಒಪಿಡಿ ಸೌಲಭ್ಯವಿರುವ ದೇಶದಲ್ಲೇ ನಂ. 1 ಆಸ್ಪತ್ರೆ ಎನಿಸಿಕೊಳ್ಳಲಿದೆ ಎಂದು ಹೇಳಿದರು.

26 ಕೋಟಿ ರೂ. ವೆಚ್ಚದಲ್ಲಿ ಸಿಸಿಬಿ ಬ್ಲಾಕ್ ನಿರ್ಮಿಸಲಾಗುತ್ತಿದೆ. ಅಡ್ಮಿನ್ ಬ್ಲಾಕ್ ಹಳೆಯದಾಗಿದ್ದು. ಇದನ್ನು ನವೀಕರಣಮಾಡಲಾಗುವುದು ಎಂದು ಹೇಳಿದರು.

ದ.ಕ. ಜಿಲ್ಲೆಯ ಜನರು ಸ್ವಚ್ಛತೆಗೆ ಆದ್ಯತೆ ನೀಡುವವರು. ಹಿಂದೆ ಹೊರ ಜಿಲ್ಲೆಯವರು ವೆನ್ಲಾಕ್ ಆಸ್ಪತ್ರೆಯ ಪ್ರಯೋಜನ ಹೆಚ್ಚು ಪಡೆಯುತ್ತಿದ್ದರು. ಆದರೆ ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸ ಹೊಸ ಬಿಲ್ಡಿಂಗ್‌ಗಳು ತಲೆ ಎತ್ತತೊಡಗಿದ ಬಳಿಕ ಸ್ಥಳೀಯರು ಕೂಡಾ ಇಲ್ಲಿನ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು.

170 ವರ್ಷ ಆಚರಣೆಯ ಸಂಭ್ರಮದಲ್ಲಿರುವ ವೆನ್‌ಲಾಕ್ ಆಸ್ಪತ್ರೆಯ ಹಳೆಯ ಕಟ್ಟಡಗಳ ಮೇಲೆ ಬೆಳೆದಿದ್ದ ಗಿಡ ಗಂಟಿಗಳನ್ನು ತೆಗೆದು ಸ್ವಚ್ಛಗೊಳಿಸಿ, ಕಟ್ಟಡಗಳಿಗೆ ಬಣ್ಣ ಬಳಿಯುವ ಕಾರ್ಯ ನಡೆದಿದೆ ಎಂದು ಹೇಳಿದರು.

ಎಂ.ಫ್ರೆಂಡ್ಸ್ ವೆನ್‌ಲಾಕ್ ಆಸ್ಪತ್ರೆಯ ರೋಗಿಗಳಿಗೆ ಆಹಾರ ತಯಾರಿಸಿಕೊಡುವ ಉದ್ದೇಶಕ್ಕಾಗಿ ಸುಸಜ್ಜಿತ ಪಾಕ ಶಾಲೆಯನ್ನು ನಿರ್ಮಿಸಿರುವುದು ಶ್ಲಾಘನೀಯ. ಪಾಕಶಾಲೆ ಇದೊಂದು ಉತ್ತಮ ಪರಿಕಲ್ಪನೆಯಾ ಗಿದೆ. ಸಂಸ್ಥೆಯ ಸೇವಾಕಾರ್ಯಗಳು ಇನ್ನಷ್ಟು ಮುಂದುವರಿಯಲಿ ಎಂದು ಶ್ಲಾಘಿಸಿದರು.

ಮುಖ್ಯ ಅತಿಥಿ ಲಯನ್ಸ್ ಜಿಲ್ಲೆ 317 ಡಿ ಇದರ ಪೂರ್ವ ಗವರ್ನರ್ ವಸಂತ ಕುಮಾರ್ ಶೆಟ್ಟಿ ಮಾತನಾಡಿ ಎಂಟು ವರ್ಷಗಳಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಅನ್ನಕೊಡುವ ಕೆಲಸ ನಿಜಕ್ಕೂ ಅಪೂರ್ವ. ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಎಂ.ಫ್ರೆಂಡ್ಸ್‌ನ ಟ್ರಸ್ಟಿ ಹಾಗೂ ವೈಟ್ ಸ್ಟೋನ್ ಗ್ರೂಪ್‌ನ ಆಡಳಿತ ನಿರ್ದೇಶಕ ಮುಹಮ್ಮದ್ ಶರೀಫ್ ಬೋಳಾರ ಅವರು ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ನೂತನ ಕಾರ್ಯಾಲಯ ಮತ್ತು ಕಾರುಣ್ಯ ಪಾಕಶಾಲೆಯ ಉದ್ಘಾಟನೆ ನೆರವೇರಿಸಿದರು.

ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಕಾರ್ಯಾಧ್ಯಕ್ಷ ಸುಜಾಹ್ ಮಹಮ್ಮದ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭ ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ ಎಂ.ಫ್ರೆಂಡ್ಸ್‌ನ ಸದಸ್ಯರ 6 ಮಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.

ವೇದಿಕೆಯಲ್ಲಿ ಕೋಶಾಧಿಕಾರಿ ಝುಬೈರ್ ಬುಳೇರಿಕಟ್ಟೆ , ಉಪಾಧ್ಯಕ್ಷರಾದ ವಿ.ಎಚ್.ಅಶ್ರಫ್ ವಿಟ್ಲ, ಅಬೂಬಕರ್ ಪುತ್ತು ಉಪ್ಪಿನಂಗಡಿ, ಡಾ.ಮುಬಶ್ಶೀರ್, ಜೊತೆ ಕಾರ್ಯದರ್ಶಿಗಳಾದ ಶೇಖ್ ಇಸಾಖ್, ಅನ್ವರ್ ಹುಸೈನ್ ಗೂಡಿನಬಳಿ, ಟ್ರಸ್ಟಿಗಳಾದ ಮುಹಮ್ಮದ್ ಶರೀಫ್ ಮೂಡಬಿದ್ರೆ , ಕಲಂದರ್ ಪರ್ತಿ‌ ಪ್ಪಾಡಿ, ಸಿಎಚ್ ಗಫೂರ್ ಮೂಡಬಿದ್ರೆ, ಮುಸ್ತಫಾ ಗೋಳ್ತಮಜಲು, ಅನ್ಸಾರ್ ಬೆಳ್ಳಾರೆ, ಆಶಿಕ್ ಕುಕ್ಕಾಜೆ, ಹಸೈನಾರ್ ಹಾಜಿ ಗುರುವಾಯನಕೆರೆ, ಹಂಝ ಆನಿಯಾ ದರ್ಬಾರ್, ಹಮೀದ್ ಅತ್ತೂರು, ವಕೀಲರಾದ ಶಾಕೀರ್ ಪುತ್ತೂರು, ಉಬೈದ್ ವಿಟ್ಲ ಉಪಸ್ಥಿತರಿದ್ದರು.

ಕಾರುಣ್ಯ ಯೋಜನೆಯ ಮುಖ್ಯಸ್ಥ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಸ್ವಾಗತಿಸಿದರು. ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಆರಿಫ್ ಪಡುಬಿದ್ರಿ ವಂದಿಸಿದರು. ಸ್ಥಾಪಕಾಧ್ಯಕ್ಷ ರಶೀದ್‌ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.



















share
ವಾರ್ತಾಭಾರತಿ
ವಾರ್ತಾಭಾರತಿ
Next Story
X