Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿಯಲ್ಲಿ ‘ಕನಕ ಸಾಂಸ್ಕೃತಿಕ...

ಮಂಗಳೂರು ವಿವಿಯಲ್ಲಿ ‘ಕನಕ ಸಾಂಸ್ಕೃತಿಕ ನಿಘಂಟು’ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ25 Nov 2026 2:14 PM IST
share
ಮಂಗಳೂರು ವಿವಿಯಲ್ಲಿ ‘ಕನಕ ಸಾಂಸ್ಕೃತಿಕ ನಿಘಂಟು’ ಲೋಕಾರ್ಪಣೆ

ಕೊಣಾಜೆ: ಮಂಗಳೂರು ವಿವಿಯ ಕನಕದಾಸ ಸಂಶೋಧನಾ ಕೇಂದ್ರದ ಮೂಲಕ "ಕನಕ ಸಾಂಸ್ಕೃತಿಕ ನಿಘಂಟು" ರಚನೆಯಾಗಿರುವುದು ಅತ್ಯಂತ ಮಹತ್ವದ ಕಾರ್ಯವಾಗಿದೆ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಅವರು‌ ಹೇಳಿದರು.

ಅವರು ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ವಿವೇಕ್ ರೈ ವೇದಿಕೆಯಲ್ಲಿ ಮಂಗಳವಾರ ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ ಮತ್ತು ಕನಕದಾಸ ಸಂಶೋಧನಾ ಕೇಂದ್ರದ ವತಿಯಿಂದ ‘ಕನಕ ಸಾಂಸ್ಕೃತಿಕ ನಿಘಂಟು' ಕೃತಿ ಲೋಕಾರ್ಪಣೆಗೊಳಿಸಿ ಕನಕ ಜಯಂತಿ ಪ್ರಯುಕ್ತ ಕನಕ ಕೀರ್ತನ ಗಂಗೋತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದಲ್ಲಿ ಮೊತ್ತಮೊದಲ ಬಾರಿಗೆ ಇಂತಹ ಸಾಂಸ್ಕೃತಿಕ ನಿಘಂಟು ಹೊರಬರುತ್ತಿರುವುದು ಶ್ಲಾಘನೀಯ. ವಿದ್ವಾಂಸರಿಗೆ, ವಿದ್ಯಾರ್ಥಿಗಳಿಗೆ ಕನಕದಾಸರನ್ನು ಅರ್ಥ ಮಾಡಿಕೊಳ್ಳಲು ಇದೊಂದು ದಾರಿಯಾಗಿದೆ. ಕನಕರ ಕಾವ್ಯ, ಕೀರ್ತನೆಗಳಲ್ಲಿರುವ ಅನೇಕ ಸ್ವಾರಸ್ಯಕರ ಪದಗಳನ್ನು ಅರ್ಥಮಾಡಿಕೊಳ್ಳಲು ಇದು ಸಹಕಾರಿ. ಬಹುಶಿಸ್ತೀಯ ತಿಳುವಳಿಕೆಯ ಮೂಲಕ ಈ ಕೃತಿ ಹೊರಬಂದಿದೆ.‌ ಇದರೊಂದಿಗೆ ವಚನ, ಜೈನ, ದಾಸ ಸಾಹಿತ್ಯದ ಸಾಂಸ್ಕೃತಿಕ ನಿಘಂಟು ಪ್ರಕಟಣೆಯ ಅಗತ್ಯ ಇದೆ ಎಂದು ಅವರು ಹೇಳಿದರು.

ದಾಸ ಸಾಹಿತ್ಯಕ್ಕೆ ಪ್ರವೇಶಿಕೆಯಾಗಿ ಕನಕ ಸಾಂಸ್ಕೃತಿಕ ನಿಘಂಟು ನೆರವಾಗಲಿದೆ. ಆದರೆ ಕಮರ್ಷಿಯಲ್ ಕಾಲಘಟ್ಟದಲ್ಲಿ ನಾವಿದ್ದು, ದಿಢೀರ್ ಪ್ರಚಾರ, ಪ್ರಸಿದ್ಧಿ ಬಯಸುವವರು ಅಸಂಖ್ಯ. ಇದಕ್ಕಾಗಿ ವಿದ್ವಾಂಸರ ಒಡನಾಟ, ನಿರಂತರ ಅಧ್ಯಯನದಿಂದ ವಿದ್ವತ್ ನ ಮೂಲಕ ಇಂತಹ ಕೆಲಸಗಳು ಸಾಧ್ಯವಾಗಬೇಕು. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ನಿಘಂಟುಗಳ ಪ್ರಕಟಣೆಯ ಅಗತ್ಯ ಮತ್ತು ಅನಿವಾರ್ಯ ಇದೆ ಎಂದು ಒತ್ತಾಯಿಸಿದರು.

ಕೃತಿಯ ಪ್ರಧಾನ ಸಂಪಾದಕರಾದ ಕನ್ನಡದ ಹಿರಿಯ ವಿದ್ವಾಂಸರಾದ ಪ್ರೊ. ಎ. ವಿ. ನಾವಡ ಅವರು ಮಾತನಾಡಿ, ಇವತ್ತು ಬಿಡುಗಡೆಗೊಂಡಿರುವ ಕನಕ ಸಾಂಸ್ಕೃತಿಕ ನಿಘಂಟುವಿನ ಜೊತೆಗೆ ಪುರಂದರದಾಸರ ಸಾಂಸ್ಕೃತಿಕ ನಿಘಂಟು, ದ.ಕ.ಜಿಲ್ಲೆಯ ರತ್ನಾಕರ ವರ್ಣಿಯ ಕಾವ್ಯ ಭರತೇಶ ವೈಭವದ ಸಾಂಸ್ಕೃತಿಕ ನಿಘಂಟಿನ ಕೆಲಸಗಳು ಸೇರಿದಂತೆ ಇತಿಹಾಸದ ಸಾಂಸ್ಕೃತಿಕ, ಸಾಮಾಜಿಕ ನಿಘಂಟುಗಳು ಹೊರಬರಬೇಕಿದೆ. ಇದರಲ್ಲಿ ವಿವಿಯ ಅಧ್ಯಾಪಕರ ಜೊತೆಗೆ ವಿದ್ಯಾರ್ಥಿಗಳೂ ತೊಡಗಿಸಿಕೊಳ್ಳಬೇಕು.

ಪಾರ್ಧನದ ಮೂಲಕ ತುಳುವಿನ ಐತಿಹಾಸಿಕ ವೈಶಿಷ್ಟ್ಯತೆಯನ್ನು ಅರ್ಥ ಮಾಡಿಕೊಳ್ಲಲು ಸಾಧ್ಯ. ತುಳು ಪಾರ್ಧನದ ನಿಘಂಟು ರಚನೆಯ ಕಾರ್ಯವೂ ಅತ್ಯಂತ ಮಹತ್ವಪೂರ್ಣವಾದುದು ಎಂದು ಹೇಳಿದರು.

ಕುಲಸಚಿವರಾದ ಸಂತೋಷ್ ಬಿ ಜಗಲಸಾರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಮ್ಮ ಜೀವನದಲ್ಲಿ ಹಿಂದಿನ ಇತಿಹಾಸವನ್ನು ಅರಿತು‌ ಸಾಗಿದರೆ ಭವಿಷ್ಯದಲ್ಲಿ ಯಶಸ್ಸಿನತ್ತ ಮುನ್ನಡೆಯಲು ಸಾಧ್ಯ. ಇಂತಹ ಸಾಂಸ್ಕೃತಿಕ ನಿಘಂಟಿನ ಮೂಲಕ ಅಂದಿನ ಕಾಲದ ಸಾಂಸ್ಕೃತಿಕ ಜಗತ್ತು, ಸಾಮಾಜಿಕ ಸಂಗತಿ, ರಾಜಕೀಯ ಸಂಗತಿಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ. ಭಕ್ತಿ ಮಾರ್ಗದಲ್ಲಿ ನಡೆದ ಕನಕದಾಸರ ವೈಚಾರಿಕತೆ, ಸಮಾನತೆಯ ಆಶಯಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಇದರಿಂದ ಸಮಾಜಮುಖಿಯಾಗಿ ನಮ್ಮ ಆಲೋಚನೆಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಡಾ ಎ.ವಿ.ನಾವಡ ಸೇರಿದಂತೆ ನಿಘಂಟಿನ ‌ಸಂಪಾದಕರಾದ ಡಾ.ಅನಿಲಕುಮಾರ್ ಬೊಮ್ಮಘಟ್ಟ ಹಾಗೂ ಡಾ.ರಾಧಾಕೃಷ್ಣ ಬೆಳ್ಳೂರು ಅವರನ್ನು ಸನ್ಮಾನಿಸಲಾಯಿತು.

ಕಲಾನಿಕಾಯದ ಡೀನ್ ಪ್ರೊ.ಸೋಮಣ್ಣ ಹೊಂಗಳ್ಳಿ‌ ಅವರು ಉಪಸ್ಥಿತರಿದ್ದರು.

ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ಧನಂಜಯ ಕುಂಬ್ಳೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ಡಾ.ಆನಂದ ಅವರು ವಂದಿಸಿದರು. ಉಪನ್ಯಾಸಕರಾದ ಡಾ.ಯಶುಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಕನಕಗಂಗೋತ್ರಿ ಗಾಯನದ ಏಳು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಒಟ್ಟು 117 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X