ಜೂ.21ರಿಂದ ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ

ಮಂಗಳೂರು, ಜೂ.18 ದ.ಕ.ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಉತ್ತಮ ಮಳೆಯಾಗಿದ್ದು, ಬಹುತೇಕ ದಿನವಿಡೀ ಮೋಡಕವಿದ ವಾತಾವರಣ ಕಂಡು ಬಂದಿತ್ತು. ಹವಾಮಾನ ಇಲಾಖೆಯು ಜೂ.21ರಿಂದ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಒಂದೆಡೆ ಭಾರಿ ಮಳೆಯ ಮುನ್ಸೂಚನೆಯಿದ್ದರೂ ಕೂಡ ಎಲ್ ನಿನೋ ಆತಂಕ ಮೂಡಿಸಿದೆ. ಎಲ್ ನಿನೋ ತೀವ್ರಗೊ ಳ್ಳುತ್ತಿರುವ ಪರಿಣಾಮ ರಾಜ್ಯದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರು ಅವಧಿಯಲ್ಲಿ ಭಾರಿ ಮಳೆ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿದೆ.
Next Story




