Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ:...

ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ

ವಾರ್ತಾಭಾರತಿವಾರ್ತಾಭಾರತಿ21 Jan 2024 10:41 PM IST
share
ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ

ಮಂಗಳೂರು, ಜ.21: ಸಂವಿಧಾನದ 75ನೇ ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ತಿಳಿಸಿದ್ದಾರೆ.

ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ರವಿವಾರ ಸಂಜೆ ಡಾ. ಬಿ.ಆರ್.ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನ ಜಾಥಾ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ಶೋಷಿತರಿಗೆ, ಅವಕಾಶ ವಂಚಿತರಿಗೆ ಅಂಬೇಡ್ಕರ್ ಅವರು ಪ್ರೇರಣಾ ಶಕ್ತಿಯಾಗಿದ್ದಾರೆ. ವೈಚಾರಿಕ ಆಲೋಚನೆಗಳ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕು. ಭಾರತವು ಬಹುತ್ವದ ರಾಷ್ಟ್ರವಾಗಿದ್ದು, ವೈವಿಧ್ಯತೆಯಲ್ಲಿ ಏಕತೆ ಇರುವ ನೆಲವಾಗಿದೆ. ಸಂವಿಧಾನವನ್ನು ನಾವು ರಕ್ಷಿಸಿದರೆ, ನಮ್ಮನ್ನು ಸಂವಿಧಾನವು ರಕ್ಷಿಸಲಿದೆ. ಪ್ರಜಾಪ್ರಭುತ್ವದ ಕತ್ತು ಹಿಚುಕುವ ಪ್ರಯತ್ನಗಳ ವಿರುದ್ಧ ನಾವು ಜಾಗೃತರಾಗಬೇಕಿದೆ. ಆದರೆ, ಇಂದು ಸಂವಿಧಾನವು ಅಪಾಯದತ್ತ ಸಾಗುತ್ತಿದೆ ಎಂದು ಸಚಿವರು ಹೇಳಿದರು.

ಅಂಬೇಡ್ಕರ್ ನಮ್ಮ ಪ್ರೇರಣಾ ಶಕ್ತಿಯಾಗಿದ್ದು, ಅವರನ್ನು ಪೂಜಿಸುವುದಷ್ಟೇ ಅಲ್ಲ, ಅವರ ಚಿಂತನೆಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಹೇಳಿದ ಅವರು, ಧಾರ್ಮಿಕ ವಿಚಾರಗಳು ವೈಯಕ್ತಿಕವಾಗಿದ್ದು, ಸರಕಾರದ ಆಯ್ಕೆಯಾಗಿರುವುದಿಲ್ಲ, ಸೌಹಾರ್ದತೆಯನ್ನು ಕಾಪಾಡುವುದು ನಮ್ಮ ಆಶಯವಾಗಿದ್ದು, ಭಂವಿಧಾನ ಪೀಠಿಕೆಯನ್ನು ಈ ಕಾರಣಕ್ಕಾಗಿಯೇ ಶಾಲೆಗಳಲ್ಲಿ ಓದಲು ಹೇಳಿದ್ದು, ಅದರ ಅರ್ಥವನ್ನೂ ಗ್ರಹಿಸುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ, ಇಂದು ಅಂಬೇಡ್ಕರ್ ಭವನ ಸಹಿತ ಸರಕಾರಿ ಕಟ್ಟಡಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಗಳು ಇಲ್ಲದ ಕಾರಣ ಸಮಸ್ಯೆಗಳು ಉಂಟಾಗುತ್ತಿದ್ದು, ಎಲ್ಲ ಸರಕಾರಿ ಕಚೇರಿಗಳು ಒಂದೇ ಸೂರಿನಲ್ಲಿ ನಿರ್ಮಾಣವಾಗುವಂಥ ವ್ಯವಸ್ಥೆ ಕಲ್ಪಿಸಿದರೆ, ಪಾರ್ಕಿಂಗ್ ವ್ಯವಸ್ಥೆಗೂ ಸರಿಯಾದ ಯೋಜನೆ ರೂಪಿಸಿದರೆ ಅನುಕೂಲವಾಗುತ್ತದೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ಮಾತನಾಡಿ, ತಾನು ಮಂತ್ರಿಯಾಗಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಡಾ. ಎಚ್.ಸಿ. ಮಹದೇವಪ್ಪ ಅವರು ಬಂಟ್ವಾಳ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ಒದಗಿಸಿರುವುದನ್ನು ನೆನಪಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಪೇಟ, ಶಾಲು ಸಹಿತ ಸನ್ಮಾನ ಮಾಡಲು ಇಲಾಖೆ ಸಿದ್ಧತೆ ನಡೆಸಿತ್ತು. ಸಚಿವರ ಸನ್ಮಾನದ ಬಳಿಕ ಶಾಸಕ ರಾಜೇಶ್ ನಾಯ್ಕ ಅವರಿಗೆ ಸನ್ಮಾನ ನಡೆಯಲಿತ್ತು. ಆದರೆ ಶಾಸಕ ರಾಜೇಶ್ ನಾಯ್ಕ್ ಸನ್ಮಾನ ಸ್ವೀಕರಿಸದೆ ಅವರು ಮಾಜಿ ಸಚಿವ ರಮಾನಾಥ ರೈ ಅವರಿಗೆ ಪೇಟ ತೊಡಿಸಿ ಸನ್ಮಾನಿಸಿದರು. ಈ ನಡೆಯನ್ನು ಸಚಿವ ಎಚ್.ಸಿ. ಮಹದೇವಪ್ಪ ಶ್ಲಾಘಿಸಿದರು

ಮಾಜಿ ವಿನಯಕುಮಾರ್ ಸೊರಕೆ, ದ.ಕ. ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್, ಸಮಾಜಿ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ ಬಿ, ಅಧಿಕಾರಿಗಳಾದ ಭಾರತಿ, ಮಂಜುಳಾ, ಶಿಕ್ಷಣಾಧಿಕಾರಿ ಮಂಜುನಾಥನ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನೀತ ಕುಮಾರಿ ವಂದಿಸಿದರು.

ಶಿಕ್ಷಣ ಇಲಾಖೆಯ ಸುಜಾತಾ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು. ಇದಕ್ಕೂ ಮುನ್ನ ವಿವಿಧ ದಲಿತಪರ ಸಂಘಟನೆ ಗಳಿಂದ ಪೊಳಲಿ ದ್ವಾರದಿಂದ ಅಂಬೇಡ್ಕರ್ ಭವನದವರೆಗೆ ಜಾಥಾ ನಡೆಯಿತು. ತಾಲೂಕಿನ ನಾನಾ ಸಂಘಟನೆಗಳ ಮುಖಂಡರು, ಸದಸ್ಯರು, ಪುರಸಭೆ, ಗ್ರಾಪಂ, ಸದಸ್ಯರು, ಮಾಜಿ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X