ನ.27ರಂದು 'ದಿ ನ್ಯೂಸ್ ಹಬ್ ಡಾಟ್ ಇನ್' ಲೋಕಾರ್ಪಣೆ

ಸಾಂದರ್ಭಿಕ ಚಿತ್ರ
ಬಂಟ್ವಾಳ, ನ.25: 'ದಿ ನ್ಯೂಸ್ ಹಬ್ ಡಾಟ್ ಇನ್ ವೆಬ್ ಸೈಟ್ ಲೋಕಾರ್ಪಣಾ ಕಾರ್ಯಕ್ರಮ ನ. 27ರಂದು ಬೆಳಗ್ಗೆ 10 ಗಂಟೆಗೆ ಬಿ.ಸಿ.ರೋಡ್ ಸಮೀಪದ ಕೈಕಂಬ ಸುಲ್ತಾನ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ.
ಇರ್ಷಾದ್ ದಾರಿಮಿ ಅಲ್ ಜಝರಿ ಮಿತ್ತಬೈಲ್ ದುಅ ನೆರವೇರಿಸಲಿದ್ದು, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ವೆಬ್ ಸೈಟ್ ಲೋಕಾರ್ಪಣೆಗೊಳಿಸಲಿದ್ದಾರೆ.
ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ನಗರ ಠಾಣೆಯ ನಿರೀಕ್ಷಕ ಅನಂತ ಪದ್ಮನಾಭ, ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮುನೀಶ್ ಅಲಿ, ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ, ಸುಲ್ತಾನ್ ಕಾಂಪ್ಲೆಕ್ಸ್ ಕೈಕಂಬ ಇದರ ಮಾಲಕ ಹಾಜಿ ಅಬ್ದುರ್ರಹ್ಮಾನ್ ಸುಲ್ತಾನ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





