Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ದಲ್ಲಿ 2,38,352...

ದ.ಕ.ದಲ್ಲಿ 2,38,352 ‘ಗೃಹಲಕ್ಷ್ಮಿ’ಯರಿಗೆ 47,67,04,000 ರೂ. ಪಾವತಿ

ವಾರ್ತಾಭಾರತಿವಾರ್ತಾಭಾರತಿ30 Aug 2023 4:46 PM IST
share
ದ.ಕ.ದಲ್ಲಿ 2,38,352 ‘ಗೃಹಲಕ್ಷ್ಮಿ’ಯರಿಗೆ 47,67,04,000 ರೂ. ಪಾವತಿ

ಮಂಗಳೂರು, ಆ. 30: ದ.ಕ. ಜಿಲ್ಲಾ ಮಟ್ಟದ ‘ಗೃಹಲಕ್ಷ್ಮಿ’ ಯೋಜನೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ಚಾಲನೆ ನೀಡಲಾಯಿತು.

ದ.ಕ. ಜಿಲ್ಲೆಯಲ್ಲಿ ಈವರೆಗೆ 3,15,726 ಮಂದಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದು, ಬುಧವಾರ 2,38,352 ಫಲಾನುಭವಿಗಳಿಗೆ 47,67,04,000 ರೂ. ಪಾವತಿಯಾಗಿದೆ. ಉಳಿದ 77374 ಫಲಾನುಭವಿಗಳ ಮಾಹಿತಿ ಸೇವಾಸಿಂಧುವಿನಲ್ಲಿ ಅಪ್ಲೋಡ್ ಆಗಬೇಕಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ʼʼರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಗ್ಯಾರಂಟಿ ಯೋಜನೆಗಳಿಂದ ದೈನಂದಿನ ಜನಜೀವನ ಉತ್ಕೃಷ್ಟವಾಗಲಿದೆ ʼʼ ಎಂದು ಅಭಿಪ್ರಾಯಿಸಿದರು.

ʼʼಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಸರಕಾರ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆವ ಸರಕಾರ ಎಂಬುದನ್ನು ಸಾಬೀತುಪಡಿಸಿದೆ. ಗ್ಯಾರಂಟಿ ಯೋಜನೆಗಳು ಜಾರಿಯಿಂದ ಸರಕಾರಕ್ಕೆ ಆರ್ಥಿಕ ನಷ್ಟವಾಗಲಿದೆ ಎಂಬ ಟೀಕೆಗಳು ಸಾಮಾನ್ಯವಾಗಿದೆ. ಆದರೆ ಈಗಾಗಲೇ ಬೆಲೆ ಏರಿಕೆ, ತೆರಿಗೆ ಹೆಚ್ಚಳದಿಂದ ತತ್ತರವಾಗಿರುವ ಜನರಿಗೆ ಸಿಗುವ ಈ ಗ್ಯಾರಂಟಿ ಯೋಜನೆಯ ಹಣವು ಕೈಯಿಂದ ಕೈಗಳಿಗೆ ಬದಲಾವಣೆಯಾಗುತ್ತಾ ಸಾಗಿದಾಗ ಆರ್ಥಿಕ ಸದೃಢತೆಗೆ ಕಾರಣವಾಗಲಿದೆʼʼ ಎಂದರು.

ʼʼಇದು ಚುನಾವಣೆ ಅಥವಾ ಮತಗಳಿಸುವ ಉದ್ದೇಶದಿಂದ ಜಾರಿಯಾಗಿರುವ ಗ್ಯಾರಂಟಿಗಳಲ್ಲ. ಸಹೋದರಿಯರು ಸಶಕ್ತರಾಗಬೇಕು. ತಲೆ ಎತ್ತಿ ಬದುಕಬೇಕು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ನ ದೂರದೃಷ್ಟಿಯ ಯೋಜನೆʼʼ ಎಂದವರು ಹೇಳಿದರು.

ಮೈಸೂರಿನಲ್ಲಿ ರಾಜ್ಯ ಮಟ್ಟದಲ್ಲಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಸಿ. ಮಹದೇವಪ್ಪ, ಸಚಿವರಾದ ಭೈರತಿ ಸುರೇಶ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಇತರ ಸಚಿವರು, ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಚಾಲನೆ ನೀಡಿದ್ದು, ಕಾರ್ಯಕ್ರಮದ ನೇರ ಪ್ರಸಾರವನ್ನು ಬೃಹತ್ ಪರದೆಯ ಮೂಲಕ ಜಿಲ್ಲಾ ಮಟ್ಟದಲ್ಲಿಯೂ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ಜಿಲ್ಲೆಯ ವಿವಿಧ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ʼಜಿಲ್ಲೆಯಲ್ಲಿ 296 ಪ್ರದೇಶಗಳಲ್ಲಿ ವೀಕ್ಷಣೆಗೆ ಅವಕಾಶʼ

ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ದ.ಕ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು, ಗ್ರಾ.ಪಂ.ಗಳು ಸೇರಿದಂತೆ 296 ಕಡೆಗಳಲ್ಲಿ ವೀಕ್ಷಣೆಯ ಸೌಲಭ್ಯವನ್ನು ಮಾಡಲಾಗಿದೆ ಎಂದು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹೇಳಿದರು.

ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X