Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ.6ರಂದು ದ.ಕ. ಜಿಲ್ಲಾ ಕಾರ್ಯನಿರತ...

ಆ.6ರಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 'ಸುವರ್ಣ ಸಂಭ್ರಮ'

ವಾರ್ತಾಭಾರತಿವಾರ್ತಾಭಾರತಿ5 Aug 2025 2:58 PM IST
share
ಆ.6ರಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ

ಮಂಗಳೂರು, ಆ.5: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಆ.6ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

ಬೆಳಗ್ಗೆ 9ಕ್ಕೆ ಉದ್ಘಾಟನಾ ಕಾರ್ಯಕ್ರಮ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ಜರುಗಲಿದೆ. ಈ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂಸದರು, ಶಾಸಕರು ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸುವರ್ಣ ಮಹೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಪ್ರತಿಷ್ಠಿತ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿಯನ್ನು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರಿಗೆ ಪ್ರದಾನ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಸುವರ್ಣ ಸಂಭ್ರಮ ಸ್ಮರಣ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಬಿಡುಗಡೆಗೊಳಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸುವರ್ಣ ಸಂಭ್ರಮ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ. ಸುವರ್ಣ ಸಂಭ್ರಮ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ನೆರವೇರಿಸಲಿದ್ದಾರೆ ಎಂದವರು ವಿವರಿಸಿದರು.

ಮಧ್ಯಾಹ್ನ 12 ಗಂಟೆಗೆ ಪ್ರಸಕ್ತ ಮಾಧ್ಯಮ ಗೋಷ್ಠಿಯು ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಯಲಿದೆ.ವಿಜಯ ಕರ್ನಾಟಕ ಮಂಗಳೂರು ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ ಮತ್ತು ದಾಯ್ಜಿ ವರ್ಲ್ಡ್ ಪ್ರೈ. ಲಿಮಿಟೆಡ್ ನ ವ್ಯವಸ್ಥಾಪಕ ಸಂಪಾದಕ ವಾಲ್ಟರ್ ನಂದಳಿಕೆ ವಿಷಯ ಮಂಡನೆ ಮಾಡಲಿದ್ದಾರೆ.

ಅಪರಾಹ್ನ 3ರಿಂದ ಸಮಾರೋಪ ಸಮಾರಂಭ ಹಾಗೂ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸನ್ಮಾನಿಸುವರು. ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಮಾರೋಪ ಭಾಷಣ ಮಾಡಲಿದ್ದಾರೆ. ಸಮಾರಂಭದಲ್ಲಿ ಮಾಜಿ ಸಚಿವರು ಶಾಸಕರು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಸುವರ್ಣ ಸಂಭ್ರಮ ಸಮಿತಿಯ ಪ್ರಧಾನ ಸಂಚಾಲಕ ಪಿ.ಬಿ.ಹರೀಶ್ ರೈ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ರಾಜ್ಯ ಕಾರ್ಯಕಾರಿ (ನಾಮ ನಿರ್ದೇಶಿತ) ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X