Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹರ್ಷೇಂದ್ರ ಕುಮಾರ್‌ ಅವರಿಗೆ...

ಹರ್ಷೇಂದ್ರ ಕುಮಾರ್‌ ಅವರಿಗೆ ಮಂಜೂರಾಗಿದ್ದ 7.59 ಎಕರೆ ದರ್ಖಾಸ್ತು ರದ್ದು

ಸರಕಾರಕ್ಕೆ ಸ್ವಾಧೀನಪಡಿಸಲು ಪುತ್ತೂರು ಎ.ಸಿ. ಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ7 Feb 2025 1:45 PM IST
share
ಹರ್ಷೇಂದ್ರ ಕುಮಾರ್‌ ಅವರಿಗೆ ಮಂಜೂರಾಗಿದ್ದ 7.59 ಎಕರೆ ದರ್ಖಾಸ್ತು ರದ್ದು

ಬೆಳ್ತಂಗಡಿ; ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಧರ್ಮಸ್ಥಳ ಗ್ರಾಮದ ಸ.ನಂ.61/1ಎ ರಲ್ಲಿ ಸರ್ಕಾರದಿಂದ ಮಂಜೂರಾಗಿದ್ದ 7.59 ಎಕ್ರೆ ಜಮೀನು ಮಂಜೂರಾತಿ ಆದೇಶವನ್ನು ರದ್ದುಪಡಿಸಿ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಆದೇಶ ನೀಡಿದೆ‌. ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನು ರದ್ದುಪಡಿಸಿ 2025 ಜ.21 ರಂದು ಆದೇಶ ನೀಡಿದ್ದು, ಸದ್ರಿ ಜಮೀನನನ್ನು ಋಣಮುಕ್ತವಾಗಿ ಸರಕಾರದ ಸ್ವಾಧೀನಕ್ಕೆ ಪಡೆದು, ಸರಕಾರಿ ಖಾತೆಗೆ ಪಹಣಿ ದಾಖಲು ಮಾಡಲು ಆದೇಶಿಸಲಾಗಿದೆ.

ಹರ್ಷೇಂದ್ರ ಕುಮಾರ್ ಅವರು ಕಾನೂನು ಬಾಹಿರವಾಗಿ ಜಮೀನು ಪಡೆದಿದ್ದಾರೆ ಎಂದು ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಇವರು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ಆಯುಕ್ತರು ಇದರ ವಿಚಾರಣೆ ಬಗ್ಗೆ ಹರ್ಷೇಂದ್ರ ಕುಮಾರ್ ಅವರಿಗೆ ನೋಟೀಸು ಕೊಟ್ಟಿದ್ದರು. ಆದರೆ ಇದರ ವಿರುದ್ಧ ಹರ್ಷೇಂದ್ರ ಅವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ (WP: 42434/2016) ಸಲ್ಲಿಸಿ, ತಾನು ಭೂರಹಿತ ಎಂದೂ, ಪ್ರಕರಣ ಆದ 4 ದಶಕಗಳ ನಂತರ ನೀಡಿದ ನೋಟೀಸು ಅವಧಿ ಬಾಧಿತವಾಗಿದೆ ಎಂದೂ ವಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ರಿಟ್ ಅರ್ಜಿ ಮುಕ್ತಾಯಗೊಳಿಸಿ (ಡಿಸ್‌ಪೋಸ್ ಮಾಡಿ) ದೂರನ್ನು ಇತ್ಯರ್ಥಪಡಿಸಲು ಪುತ್ತೂರು ಸಹಾಯಕ ಆಯುಕ್ತರಿಗೆ ಸೂಕ್ತ ನಿರ್ದೇಶನಗಳೊಂದಿಗೆ 2022 ಜುಲೈ 4 ರಂದು ಮರು ರವಾನಿಸಿತ್ತು.

ಪ್ರಕರಣವನ್ನು (ಎಡಿಸ್.ಎಲ್‌ಎಲ್‌ಡಿಸಿಆರ್: 614,706/2014-15) ಮರು ವಿಚಾರಣೆಗೆ ಕೈಗೆತ್ತಿಕೊಂಡ ಸಹಾಯಕ ಆಯುಕ್ತರ ನ್ಯಾಯಾಲಯವು ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನು ರದ್ದುಪಡಿಸಿ 2025 ಜ. 21 ರಂದು ಆದೇಶ ನೀಡಿದೆ. ಸದ್ರಿ ಜಮೀನನನ್ನು ಋಣಮುಕ್ತವಾಗಿ ಸರಕಾರದ ಸ್ವಾಧೀನಕ್ಕೆ ಪಡೆದು, ಸರಕಾರಿ ಖಾತೆಗೆ ಪಹಣಿ ದಾಖಲು ಮಾಡಲು ಆದೇಶಿಸಲಾಗಿದೆ.

ಹರ್ಷೇಂದ್ರ ಕುಮಾರ್ ಅವರು ಸುಳ್ಳು ದಾಖಲೆಗಳನ್ನು ನೀಡಿ ಹಲವು ವಿಚಾರಗಳನ್ನು ಮರೆಮಾಚಿ ಕಾನೂನು ಬಾಹಿರವಾಗಿ ಸರಕಾರದಿಂದ ಜಮೀನನ್ನು ಪಡೆದುಕೊಂಡಿರುವುದಾಗಿ ಕಂಡುಕೊಂಡ ಹಿನ್ನಲೆಯಲ್ಲಿ ಸಹಾಯಕ ಕಮಿಷನರ್ ಅವರ ನ್ಯಾಯಾಲಯ ಈ ಆದೇಶವನ್ನು ನೀಡಿದೆ ಎನ್ನಲಾಗಿದೆ.

ಮೇಲ್ಮನವಿದಾರರ ಪರವಾಗಿ ವಕೀಲರಾದ ಕೆ. ಭಾಸ್ಕರ ಹೊಳ್ಳ ಮತ್ತು ನಾಗರಿಕ ಸೇವಾ ಟ್ರಸ್ಟ್ ನ ರಂಜನ್ ರಾವ್ ಯರ್ಡೂರ್ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X