Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಏಕಸ್ವಾಮ್ಯದಿಂದ ಮಾಧ್ಯಮ...

ಏಕಸ್ವಾಮ್ಯದಿಂದ ಮಾಧ್ಯಮ ಸ್ವಾತಂತ್ರ್ಯಕ್ಕೆ ಅಪಾಯ: ಡಾ. ಸಿಂಧು ಮಂಜೇಶ್

ಪಿಪಿ ಗೋಮತಿ ಸ್ಮಾರಕ ವಾರ್ಷಿಕ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 Nov 2023 8:30 PM IST
share
ಏಕಸ್ವಾಮ್ಯದಿಂದ ಮಾಧ್ಯಮ ಸ್ವಾತಂತ್ರ್ಯಕ್ಕೆ ಅಪಾಯ: ಡಾ. ಸಿಂಧು ಮಂಜೇಶ್

ಮಂಗಳೂರು, ನ. 28: ದೇಶದಲ್ಲಿ ಮುಖ್ಯ ವಾಹಿನಿಯಲ್ಲಿರುವ ಸುದ್ದಿ ಹಾಗೂ ದೃಶ್ಯ ಮಾಧ್ಯಮವಿಂದು ಕಾರ್ಪೊರೇಟ್ ಉದ್ಯಮಿಗಳ ನಿಯಂತ್ರಣಕ್ಕೊಳಪಟ್ಟು ಏಕಸ್ವಾಮ್ಯಕ್ಕೆ ಗುರಿಯಾಗಿರುವ ಕಾರಣ ಮಾಧ್ಯಮ ಸ್ವಾತಂತ್ರ್ಯ ಅಪಾಯದಲ್ಲಿದೆ ಎಂದು ಫುಲ್‌ಬ್ರೈಟ್ ಹ್ಯಾಂಪರಿ ಫೋಲೋ ಪ್ರಶಸ್ತಿ ವಿಜೇತ ಪತ್ರಕರ್ತೆ, ಮ್ಯಾನೆ ವಿಶ್ವವಿದ್ಯಾನಿಲಯದ ಮಾಜಿ ಉಪನ್ಯಾಸಕಿ ಡಾ. ಸಿಂಧು ಮಂಜೇಶ್ ಆತಂಕ ವ್ಯಕ್ತಪಡಿಸಿದ್ದಾರೆ.

ಪಿಪಿ ಗೋಮತಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಭಾಗಿತ್ವದಲ್ಲಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಮಂಗಳವಾರ ಪಿಪಿ ಗೋಮತಿ ಸ್ಮಾರಕ ವಾರ್ಷಿಕ ಉಪನ್ಯಾಸ 2023ರಲ್ಲಿ ‘ಭಾರತದಲ್ಲಿ ಸುದ್ದಿ ಮಾಧ್ಯಮ: ಭವಿಷ್ಯದ ಮೇಲೆ ವಿಶೇಷ ಗಮನದೊಂದಿಗೆ ಆರೋಗ್ಯಕರ ವರದಿ’ ಎಂಬ ವಿಷಯದ ಬಗ್ಗೆ ಅವರು ಬೆಳಕು ಚೆಲ್ಲಿದರು.

ದೇಶದಲ್ಲಿ ಕೇಬಲ್ ರೆಗ್ಯುಲೇಶನ್ ಕಾಯ್ದೆಯಡಿ ಟಿವಿ ಮಾಧ್ಯಮ ಕೇಬಲ್ ನೆಟ್‌ವರ್ಕ್‌ಗಳ ಡಿಜಿಟೈಸೇಶನ್ ಕಾರ್ಯ ರಿಲಾಯೆನ್ಸ್ ಮೂಲಕ ಕಾರ್ಪೊರೇಟ್ ನಿಯಂತ್ರಣಕ್ಕೊಳಪಟ್ಟಿತು. ಇದಾಗಿ ಕೆಲ ಸಮಯದಲ್ಲೇ ಅದಾನಿ ಸಂಸ್ಥೆಯು ದೇಶದ ಪ್ರಮುಖ ಟಿವಿ ಮಾಧ್ಯಮವಾದ ಎನ್‌ಡಿಟಿವಿಯನ್ನು ಖರೀದಿಸಿತು. ಈ ಮೂಲಕ ಸ್ವಾತಂತ್ರ್ಯ, ನಿರ್ಭೀತವಾಗಿ ಕಾರ್ಯನಿರ್ವಹಿಸಬೇಕಾದ ಮಾಧ್ಯಮವು ಕಾರ್ಪೊರೇಟ್ ಸಂಸ್ಥೆಯ ಅಡಿಯಾಳಾಗಿ ಕಾರ್ಯ ನಿರ್ವಹಿಸುವ ಪರಿಸ್ಥಿತಿ ಇಂದು ನಾವು ಕಾಣುತ್ತಿದ್ದೇವೆ ಎಂದು ಅವರು ವಿಶ್ಲೇಷಿಸಿದರು.

ಇಂತಹ ವ್ಯವಸ್ಥೆ ನಮ್ಮಲ್ಲಿ ಮಾತ್ರವಲ್ಲ, ಇಟೆಲಿಯಲ್ಲಿ ಮಾಧ್ಯಮ ಸಂಪೂರ್ಣ ಅಲ್ಲಿನ ಪ್ರಧಾನಿ ಹಿಡಿತದಲ್ಲಿದೆ ಎನ್ನುವ ವಾದ ವನ್ನು ಮುನ್ನಲೆಗೆ ತರಬಹುದು. ಪೆಟ್ರೋಲಿಯಂ, ಬಂದರು ನಿರ್ವಹಣೆಯ ಉದ್ಯಮಿಯೊಬ್ಬರಿಗೆ ಮಾಧ್ಯಮ ನಿಯಂತ್ರಣದ ಅಗತ್ಯತೆಯ ಕಾರಣವೇನು ಎಂಬುದನ್ನು ಸುದ್ದಿಯನ್ನು ಗ್ರಹಿಸುವ, ಓದುವ, ನೋಡುವ ಬುದ್ಧಿವಂತ ಜನಸಾಮಾನ್ಯರು ಅರ್ಥ ಮಾಡಿಕೊಂಡರೆ ಎಲ್ಲವೂ ಸ್ಪಷ್ಟವಾಗುತ್ತದೆ. ಇಂತಹ ವ್ಯವಸ್ಥೆಯ ಮೂಲಕ ಯಾರ ಹಿತಾಸಕ್ತಿಯನ್ನು ಎತ್ತಿ ಹಿಡಿಯಲಾಗುತ್ತಿದೆ, ಯಾರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂಬುದನ್ನು ಅರಿಯುವುದು ಕಷ್ಟಸಾಧ್ಯವೇನಲ್ಲ. ಈ ಕಾರ್ಯದ ಹಿಂದಿನ ಅಜೆಂಡಾ ಏನು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಕೂಡಾ ಸಾಧ್ಯ ಎಂದು ಡಾ. ಸಿಂಧು ಮಂಜೇಶ್ ಮಾರ್ಮಿಕವಾಗಿ ನುಡಿದರು.

ಮಾಧ್ಯಮದ ಏಕಸ್ವಾಮ್ಯತೆಯು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂಲಭೂತ ಹಕ್ಕುಗಳನ್ನೇ ಕಸಿಯುವ ಪ್ರಯತ್ನಕ್ಕೆ ಕಾರಣವಾಗುತ್ತದೆ. ಭದ್ರತೆಯ ನೆಪವೊಡ್ಡಿ ಕಾಶ್ಮೀರ ಮತ್ತು ಮಣಿಪುರ ಘಟನೆಗಳ ಸಂದರ್ಭ ಅಲ್ಲಿನ ಅಂತರ್ಜಾಲ ವ್ಯವಸ್ಥೆಯನ್ನೇ ಸ್ಥಗಿತಗೊಳಿಸಿದ ಘಟನೆಗಳನ್ನು ಉಲ್ಲೇಖಿಸಿದ ಡಾ. ಸಿಂಧು ಮಂಜೇಶ್, ಇಂತಹ ಒತ್ತಡ, ನಿಯಂತ್ರಣ ಪ್ರತಿನಿತ್ಯ ಅತ್ಯಂತ ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದ್ದರೂ ಸಾಮಾನ್ಯ ಜನರು ಅದನ್ನು ನಿರ್ಲಕ್ಷ್ಯ ವಹಿಸುತ್ತಿರುವುದು ಕೂಡಾ ಅಪಾಯಕಾರಿ ಬೆಳವಣಿಗೆ ಎಂದು ಅವರು ಅಭಿಪ್ರಾಯಿಸಿದರು.

ಪಿಪಿ ಗೋಮತಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಗೋಪಾಲ ಶೆಟ್ಟಿ ಗೋಮತಿಯವರ ಬಗ್ಗೆ ಮಾಹಿತಿ ನೀಡಿದರು. ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಕಾರ್ಯಕ್ರಮ ನಿರ್ವಹಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ. ಅನುಸೂಯ ರೈ, ರಾಷ್ಟ್ರೀಯ ವಿಚಾರವಾದಿ ವೇದಿಕೆಯ ಅಧ್ಯಕ್ಷ ಡಾ. ನರೇಂದ್ರ ನಾಯಕ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X