Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಂಕಪಟ್ಟಿ ಸಮಸ್ಯೆ,‌ ಪರೀಕ್ಷಾ ಶುಲ್ಕ...

ಅಂಕಪಟ್ಟಿ ಸಮಸ್ಯೆ,‌ ಪರೀಕ್ಷಾ ಶುಲ್ಕ ಹೆಚ್ಚಳ ವಿರುದ್ಧ ಎಬಿವಿಪಿಯಿಂದ ಮಂಗಳೂರು ವಿವಿ ಆಡಳಿತ ಸೌಧಕ್ಕೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ15 Nov 2024 2:26 PM IST
share
ಅಂಕಪಟ್ಟಿ ಸಮಸ್ಯೆ,‌ ಪರೀಕ್ಷಾ ಶುಲ್ಕ ಹೆಚ್ಚಳ ವಿರುದ್ಧ ಎಬಿವಿಪಿಯಿಂದ ಮಂಗಳೂರು ವಿವಿ ಆಡಳಿತ ಸೌಧಕ್ಕೆ ಮುತ್ತಿಗೆ

ಮಂಗಳೂರು: ಅಂಕಪಟ್ಟಿಯ ಸಮಸ್ಯೆ , ಅವೈಜ್ಞಾನಿಕವಾಗಿ ಕಾಲೇಜಿಗೆ ಶುಲ್ಕಗಳ ಹೆಚ್ಚಳ, ಅವೈಜ್ಞಾನಿಕವಾಗಿ ಪರೀಕ್ಷಾ ಶುಲ್ಕ ಹೆಚ್ಚಳ ಹಾಗೂ ವಿವಿಯ ಹಲವಾರು ಸಮಸ್ಯೆಗಳ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗದ ವತಿಯಿಂದ ವಿದ್ಯಾರ್ಥಿಗಳು ಶುಕ್ರವಾರದಂದು ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರದಂದು ಬೆಳಿಗ್ಗೆಯೇ ವಿವಿಯ ಕ್ಯಾಂಪಸ್ ನಲ್ಲಿ ಸೇರಿದ್ದ ಎಬಿವಿಪಿ ನೇತೃತ್ವದಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಬಳಿಕ ವಿಶ್ವವಿದ್ಯಾಲಯದ ಆಡಳಿತ ಸೌಧದ ಕಡೆಗೆ ಸಾಗಿ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾ ಕಾರರನ್ನು ತಡೆಯಲು ಬ್ಯಾರಿಕೇಡ್ ಹಾಕಿದ್ದು, ಇದನ್ನು ಕೆಳಹಾಕಿ ಮುನ್ನುಗಿದ್ದರು. ಬಳಿಕ ಪೊಲೀಸರು ಆಡಳಿತ ಸೌಧದ ಗಾಜಿನ ಬಾಗಿಲನ್ನು ಹಾಕಿದ್ದು ವಿದ್ಯಾರ್ಥಿಗಳು ತಳ್ಳಾಟ ನಡೆಸಿದಾಗ ಗಾಜು ಪುಡಿಪುಡಿಯಾಗಿ ಓರ್ವ ಪೋಲೀಸ್ ಹಾಗೂ ವಿದ್ಯಾರ್ಥಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಬಳಿಕ ಮಂಗಳೂರು ವಿವಿ ಕುಲಪತಿ ಸ್ಥಳಕ್ಕೆ ಆಗಮಿಸಿ ವಿಶ್ವವಿದ್ಯಾಲಯದ ಆರ್ಥಿಕ ಸಂಕಷ್ಟದ ಬಗ್ಗೆ ವಿವರಿಸಿದ್ದಾರೆ. ಆರ್ಥಿಕ ಸಂಕಷ್ಟದ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹೊರಿಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಇಡೀ ದಿನ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಬಳಿಕ ಸಿಂಡಿಕೇಟ್ ಸದಸ್ಯರೊಂದಿಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಕುಲಪತಿಯವರು ನಾಳೆಯೇ ಈ ಬಗ್ಗೆ ಪರೀಶೀಲನೆ ನಡೆಸಲು ಕುಲಸಚಿವರನ್ನು ಕಳುಹಿಸಿಕೊಡುತ್ತಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಹಾಗೂ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


Tags

ABVPMangalore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X