Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಹಿಂದೂ ದೇವರ ಬಗ್ಗೆ ಅವಹೇಳನ ...

ಮಂಗಳೂರು | ಹಿಂದೂ ದೇವರ ಬಗ್ಗೆ ಅವಹೇಳನ ಆರೋಪ; ಶಿಕ್ಷಕಿಯನ್ನು ಅಮಾನತುಗೊಳಿಸಿದ ಶಾಲಾ ಆಡಳಿತ ಮಂಡಳಿ

ವಾರ್ತಾಭಾರತಿವಾರ್ತಾಭಾರತಿ12 Feb 2024 7:48 PM IST
share
ಮಂಗಳೂರು | ಹಿಂದೂ ದೇವರ ಬಗ್ಗೆ ಅವಹೇಳನ  ಆರೋಪ; ಶಿಕ್ಷಕಿಯನ್ನು ಅಮಾನತುಗೊಳಿಸಿದ ಶಾಲಾ ಆಡಳಿತ ಮಂಡಳಿ

ಮಂಗಳೂರು: ತರಗತಿಯಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದಲ್ಲಿ ನಗರದ ವೆಲೆನ್ಸಿಯಾದ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರನ್ನು ಶಾಲಾ ಆಡಳಿತ ಮಂಡಳಿ ಸೇವೆಯಿಂದ ಅಮಾನತುಗೊಳಿಸಿದೆ.

ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಶಾಲಾ ಆಡಳಿತ ಮಂಡಳಿಯು ಅಮಾನತುಗೊಳಿಸುವ ನಿರ್ಧಾರ ಕೈಗೊಂಡಿದೆ. ಘಟನೆಯ ಬಗ್ಗೆ ಶಿಕ್ಷಣ ಇಲಾಖೆಯು ಆಂತರಿಕ ತನಿಖೆ ನಡೆಸಲಿದೆ ಎಂದು ತಿಳಿದು ಬಂದಿದೆ.

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೋಮವಾರ ಸಂಜೆ ಶಾಲೆಗೆ ಭೇಟಿ ನೀಡಿ ವಿಚಾರಣೆ ನಡೆಸಿದರು. ಶಿಕ್ಷಣ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಫೆ.8ರಂದು ಶಿಕ್ಷಕಿ ಪ್ರಭಾ ಶಾಲೆಯಲ್ಲಿ ʼWork is worship’ ಎಂಬ ವಿಷಯದ ಪಾಠ ಮಾಡುತ್ತಿದ್ದ ವೇಳೆ ಆಯೋಧ್ಯೆಯ ಶ್ರೀರಾಮ ಮಂದಿರ ಮತ್ತು ಶ್ರೀರಾಮನ ಬಗ್ಗೆ ನಿಂದಿಸಿರುವುದಾಗಿ ಆರೋಪಿಸಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಶಿಕ್ಷಕಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಸೋಮವಾರ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಸ್ಥಳಕ್ಕೆ ಆಗಮಿಸಿದ್ದರು. ಅವರ ನೇತೃತ್ವದಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳ ಪೋಷಕರು ಹಾಗೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆಗೆ ಯತ್ನ ನಡೆಸಿದ್ದರು. ಆದರೆ ಈ ವೇಳೆ ಪೊಲೀಸರು ಶಾಲೆಯ ಗೇಟ್ ಬಳಿ ಶಾಸಕ ಹಾಗೂ ಪೋಷಕರನ್ನು ತಡೆದಿದ್ದರು.

ಮುಖ್ಯ ಶಿಕ್ಷಕಿಯ ಸ್ಪಷ್ಟನೆ

ಜೆಪ್ಪು ಸಂತ ಜೆರೋಸಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿರುವ ಇತ್ತೀಚಿನ ಘಟನೆಯ ಹಿನ್ನೆಲೆ ಯಲ್ಲಿ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ತಮ್ಮ ಸಂಸ್ಥೆಯಿಂದ ವಜಾಗೊಳಿಸಲಾಗಿದೆ ಹಾಗೂ ಅವರ ಸ್ಥಾನಕ್ಕೆ ಬೇರೆ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಶಾಲಾ ಮುಖ್ಯ ಶಿಕ್ಷಕಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದುವರೆಗೂ ಒಳ್ಳೆಯ ಮನೋಭಾವ ಹಾಗೂ ಶ್ರೇಷ್ಠ ಗುಣಮಟ್ಟದ ಶಿಕ್ಷಣದಿಂದ ನಮ್ಮ ನಡುವೆ ಉತ್ತಮ ಸಂಬಂಧವನ್ನು ನಿರ್ಮಿಸಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘‘ಜಿಲ್ಲಾಮಟ್ಟದ ಅಧಿಕಾರಿಗಳಿಂದ ನಡೆಯುತ್ತಿರುವ ತನಿಖೆಯು ಪಾರದರ್ಶಕತೆಯಿಂದ ಕೂಡಿರಲು ನಮ್ಮ ಸಹಕಾರವನ್ನು ಒದಗಿಸಲು ಶಿಕ್ಷಕಿಯನ್ನು ವಜಾಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾವು ಈ ತನಿಖೆಯ ಅಂತಿಮ ಆದೇಶಕ್ಕೆ ಬದ್ಧರಾಗಿದ್ದೇವೆ. ಮಕ್ಕಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಪೋಷಕರಿಂದ ಇದೇ ರೀತಿ ಸಹಕಾರವನ್ನು ನಿರೀಕ್ಷಿಸುತ್ತೇವೆ’’ ಎಂದು ಹೇಳಿದ್ದಾರೆ.

‘‘ಸಂತ ಜೆರೋಸಾ ಶಾಲೆ 60 ವರ್ಷಗಳ ಇತಿಹಾಸವನ್ನು ಹೊಂದಿದ್ದು ಮತ್ತು ಈವರೆಗೂ ಈ ತರಹದ ಯಾವುದೇ ಘಟನೆಗಳು ನಡೆದಿಲ್ಲ. ನಾವು ಸಾಂವಿಧಾನಿಕ ಸಿದ್ಧಾಂತಗಳಿಗೆ ಬೆಲೆ ಕೊಟ್ಟು ಮತ್ತು ಅವುಗಳಿಗೆ ಬದ್ಧರಾಗಿ ಇರುತ್ತೇವೆ. ನಾವು ಎಲ್ಲ ಧರ್ಮಗಳು, ನಂಬಿಕೆಗಳು ಮತ್ತು ಆಚರಣೆಗಳನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ಈ ದುರದೃಷ್ಟಕರ ಘಟನೆಯು ನಮ್ಮ ಮಧ್ಯೆ ತಾತ್ಕಾಲಿಕ ಅಪನಂಬಿಕೆಯನ್ನು ಸೃಷ್ಟಿಸಿದ್ದು ನಮ್ಮ ಈ ನಡೆಯು ನಿಮ್ಮ ಸಹಕಾರದಿಂದ ಈ ನಂಬಿಕೆಯನ್ನು ಪುನಃ ನಿರ್ಮಿಸುವುದಕ್ಕೆ ಸಹಕಾರಿಯಾಗಲಿದೆ ಮತ್ತು ನಾವೆಲ್ಲ ನಮ್ಮ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ, ಒಟ್ಟಾಗಿ ಶ್ರಮಿಸೋಣ" ಎಂದು ವಿದ್ಯಾರ್ಥಿಗಳ ಪೋಷಕರಿಗೆ ಮಾಡಿರುವ ಮನವಿಯಲ್ಲಿ ಮುಖ್ಯ ಶಿಕ್ಷಕಿ ತಿಳಿಸಿದ್ದಾರೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X