Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಮಾಜಿಕ ಪಿಡುಗುಗಳ ವಿರುದ್ಧ ಕ್ರೈಸ್ತರ...

ಸಾಮಾಜಿಕ ಪಿಡುಗುಗಳ ವಿರುದ್ಧ ಕ್ರೈಸ್ತರ ಸಕ್ರಿಯ ಹೋರಾಟ ಅಗತ್ಯ: ಬಿಷಪ್ ಡಾ. ಪೀಟರ್ ಪಾಲ್ ಸಲ್ದಾನ ಕರೆ

ವಾರ್ತಾಭಾರತಿವಾರ್ತಾಭಾರತಿ20 Aug 2026 3:22 PM IST
share
ಸಾಮಾಜಿಕ ಪಿಡುಗುಗಳ ವಿರುದ್ಧ ಕ್ರೈಸ್ತರ ಸಕ್ರಿಯ ಹೋರಾಟ ಅಗತ್ಯ: ಬಿಷಪ್ ಡಾ. ಪೀಟರ್ ಪಾಲ್ ಸಲ್ದಾನ ಕರೆ

ಮಂಗಳೂರು, ಆ.20: ಭಾರತದಲ್ಲಿ ವ್ಯಾಪಕವಾಗಿರುವ ಜಾತಿ ವ್ಯವಸ್ಥೆ ಮತ್ತು ಲಿಂಗ ತಾರತಮ್ಯದಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಕ್ರೈಸ್ತರ ಸಕ್ರಿಯವಾಗಿ ಹೋರಾಡಬೇಕು ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ವಂ. ಡಾ. ಪೀಟರ್ ಪಾಲ್ ಸಲ್ದಾನ ಕರೆ ನೀಡಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಕ್ರೈಸ್ತ ಅಧ್ಯಯನ ಪೀಠ ಹಾಗೂ ಜೆಪ್ಪುವಿನ ಸಂತ ಜೋಸೆಫರ ಸೆಮಿನರಿಯ ಸಹಯೋಗದಲ್ಲಿ ಗುರುವಾರ ಜೆಪ್ಪುವಿನ ಸಂತ ಜೋಸೆಫರ ಸೆಮಿನರಿಯ ಶತಮಾನೋತ್ಸವ ಸ್ಮಾರಕ ಸಭಾಂಗಣ ದಲ್ಲಿ ಭಾರತದಲ್ಲಿ ಕ್ರೈಸ್ತ ಚಿಂತನೆ: ಸಂದರ್ಭ, ಸಂಸ್ಕೃತಿ ಮತ್ತು ಸಾಮಾಜಿಕ ಪರಿವರ್ತನೆ ಎಂಬ ವಿಷಯದ ಬಗ್ಗೆ ಆಯೋಜಿಸಲಾದ ರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಿಂದೆ ಕೋವಿಡ್ ಕಾಲದಲ್ಲಿ ಪೋಪ್ ಫ್ರಾನ್ಸಿಸ್ ಜಾಗತಿಕ ಸಹೋದರತ್ವದ ಕುರಿತಾಗಿ ವ್ಯಕ್ತಪಡಿಸಿದ್ದ ಅವರ ಆಶಯವನ್ನು ಉಲ್ಲೇಖಿಸಿದ ಬಿಷಪ್ ಪೀಟರ್ ಸಲ್ದಾನ ಅವರು ಸಮಾಜದಲ್ಲಿ ‘ಬಂಧುತ್ವ’ (ಸಾರ್ವತ್ರಿಕ ಸಹೋದರತೆ) ನೆಲೆಸಲು ಸದ್ಭಾವನೆ ಹೊಂದಿರುವ ಪ್ರತಿಯೊಬ್ಬರೂ ಉದಾಸೀನತೆಯನ್ನು ತೊರೆದು ,ಕರುಣೆ ಮತ್ತು ಪರಸ್ಪರ ಬಾಂಧವ್ಯದತ್ತ ಸಾಗಬೇಕು ಎಂದು ಪ್ರತಿಪಾದಿಸಿದರು.

ಹೊಸದಿಲ್ಲಿಯ ಜವಾಹರಲಾಲ್ ನೆಹರೂ ವಿವಿ ಮಾಜಿ ಪ್ರಾಧ್ಯಾಪಕ ಪ್ರೊ. ವಲೇರಿಯನ್ ರೋಡ್ರಿಗಸ್ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ‘ ಭಾರತೀಯ ಸಂವಿಧಾನದಲ್ಲಿ ಬೈಬಲ್‌ನ ಮೌಲ್ಯಗಳಾದ ಸಮಾನತೆ, ಭ್ರಾತೃತ್ವ ಮತ್ತು ನ್ಯಾಯವು ಪ್ರತಿಧ್ವನಿಸಿವೆ ಎಂದು ಹೇಳಿದರು.

ಭಾರತದ ಸಾಮಾಜಿಕ ಸುಧಾರಣೆ, ಪ್ರಜಾಪ್ರಭುತ್ವ ಮತ್ತು ಜಾತಿ ವಿರೋಧಿ ಚಳುವಳಿಗಳ ಮೇಲೆ ಗಾಂಧೀಜಿ, ಅಂಬೇಡ್ಕರ್ ಮತ್ತು ಉತ್ತಂಗಿ ಚೆನ್ನಪ್ಪ ಅವರಂತಹ ಸ್ವದೇಶಿ ಚಿಂತಕರ ಪ್ರಭಾವವನ್ನು ವಿವರಿಸಿದರು.

ಮಂಗಳೂರು ವಿವಿ ಕೊಂಕಣಿ ಅಧ್ಯಯನ ಪೀಠದ ಮುಖ್ಯಸ್ಥೆ ಡಾ. ಪ್ರೀತಿ ಡಿಸೋಜ ಅವರು ಈ ಸಂದರ್ಭದಲ್ಲಿ ಮಾತನಾಡಿದರು.

ಡಾ.ಪ್ರವೀಣ್ ಮಾರ್ಟಿಸ್ ರಿಗೆ ಸನ್ಮಾನ : ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿವಿ ಕುಲಪತಿ ಡಾ. ಪ್ರವೀಣ್ ಮಾರ್ಟಿಸ್ ವಿಚಾರ ಸಂಕಿರಣದಲ್ಲಿ ಆಶಯ ಭಾಷಣ ಮಾಡಿದರು. ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ)ನ ಕರ್ನಲ್ ಕಮಾಂಡೆಂಟ್ ಆಗಿ ನೇಮಕಗೊಂಡಿರುವ ಡಾ. ಪ್ರವೀಣ್ ಮಾರ್ಟಿಸ್ ಅವರನ್ನು ಸನ್ಮಾನಿಸಲಾಯಿತು.

ಸಂತ ಅಗ್ನೆಸ್ ಪಿಯು ಕಾಲೇಜಿನ ಸಿಸ್ಟರ್ ಜಾನೆಟ್ ಅಭಿನಂದನಾ ಭಾಷಣ ಮಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯೆ ಜುಡಿತ್ ಮೆಂಡೋನ್ಸ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಕ್ರೈಸ್ತ ಅಧ್ಯಯನ ಪೀಠದ ಮುಖ್ಯಸ್ಥರಾದ ಡಾ. ಸುನಿಲ್ ಜಾರ್ಜ್ ಡಿ ಸೋಜ ಸ್ವಾಗತಿಸಿದರು. ಜೆಪ್ಪುವಿನ ಸಂತ ಜೋಸೆಫರ ಸೆಮಿನರಿಯ ಡಾ. ರಾಜೇಶ್ ಮೆಲ್ವಿನ್ ರೊಸಾರಿಯೊ ವಂದಿಸಿದರು. ಬ್ರದರ್ ಜಸ್ಟಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ವಿಚಾರ ಸಂಕಿರಣದ ಉದ್ಘಾಟನೆಗೂ ಮುನ್ನ ಲೂರ್ಡ್ಸ್ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆ, ಬೆಂದೂರಿನ ಸಂತ ಅಗ್ನೆಸ್ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ಸ್ವಾಗತ ನೃತ್ಯವನ್ನು ಪ್ರದರ್ಶಿಸಿದರು.

ಶೈಕ್ಷಣಿಕ ಗೋಷ್ಠಿ: ಮಧ್ಯಾಹ್ನದ ಬಳಿಕ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ನಾಲ್ಕು ತಾಂತ್ರಿಕ ಗೋಷ್ಠಿಗಳು ನಡೆದವು. ಇದರಲ್ಲಿ ಹತ್ತು ಸಂಶೋಧನಾ ಪ್ರಬಂಧಗಳು ಮಂಡನೆಯಾದವು.

ಮಂಗಳೂರು ವಿವಿ, ಸಂತ ಅಲೋಶಿಯಸ್ ವಿವಿ, ರೋಶನಿ ನಿಲಯ ಕರ್ನಾಟಕ ಥಿಯೋಲಾಜಿಕಲ್ ಕಾಲೇಜು ಮತ್ತು ಸಂತ ಜೋಸೆಫರ ಇನ್‌ಸ್ಟಿಟ್ಯೂಟ್ ಆಫ್ ಥಿಯಾಲಜಿ ಸೇರಿದಂತೆ ಪ್ರಮುಖ ಸಂಸ್ಥೆಗಳ ವಿದ್ವಾಂಸರು ಹಾಗೂ ಅಧ್ಯಾಪಕರು, ನಿರ್ದೇಶಕರು ಭಾಗವಹಿಸಿದ್ದರು.

ಕೊಂಕಣಿ ಮಾನ್ಯತಾ ದಿನಾಚರಣೆಯೊಂದಿಗೆ ಆಯೋಜಿಸಲಾದ ಈ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸುಧಾರಣೆಗೆ ಕ್ರೈಸ್ತ ಧರ್ಮದ ಕೊಡುಗೆಗಳ ಕುರಿತು ಚರ್ಚಿಸಲಾಯಿತು.

ಫಾ. ಫ್ಲೇವಿಯನ್ ರಾಜಕಿರಣ್ ಲೋಬೋ ಅವರ ನಿರ್ದೇಶನದಲ್ಲಿ ಜೆಪ್ಪುವಿನ ಸಂತ ಜೋಸೆಫರ ಸೆಮಿನರಿಯ ವಿದ್ಯಾರ್ಥಿಗಳಿಂದ ‘ಸುರಾಂಜಲಿ’ ಎಂಬ ಸಂಗೀತ ರಸಮಂಜರಿ ಸಾಂಸ್ಕೃತಿಕ ಕಾರ್ಯಕ್ರಮ , ವಾಲ್ಟರ್ ಕ್ರಾಸ್ಟಾ ಅವರ ನಿರ್ದೇಶನದಲ್ಲಿ ಗುಮಟಾ ದಾಯ್ಜ್ ತಂಡದಿಂದ ಜಾನಪದ ಸಂಗೀತದ ಪ್ರದರ್ಶನ ನಡೆಯಿತು.


Tags

Active struggleChristianssocial evilsBishop Dr. Peter Paul Saldana
share
ವಾರ್ತಾಭಾರತಿ
ವಾರ್ತಾಭಾರತಿ
Next Story
X