ಅಡ್ಯಾರ್ | ಡಿವೈಡರ್ ಗೆ ದ್ವಿಚಕ್ರ ವಾಹನ ಢಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಮಂಗಳೂರು, ಜು.19: ಡಿವೈಡರ್ ಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ.
ಮೃತರನ್ನು ನಗರದ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21 ) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ 11.40ರ ಸುಮಾರಿಗೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಘಟನೆ ಸಂಭವಿಸಿದೆ. ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು ಕಾಲೇಜಿಗೆ ಹೋಗುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ
Next Story