Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಆಧಾರ್ ಸಂಖ್ಯೆ- ಹೆಬ್ಬೆರಳ...

ಮಂಗಳೂರು | ಆಧಾರ್ ಸಂಖ್ಯೆ- ಹೆಬ್ಬೆರಳ ಗುರುತು ಸಂಗ್ರಹಿಸಿ ಹಣ ವರ್ಗಾವಣೆ: ಮೂವರು ಆರೋಪಿಗಳ ಬಂಧನ

ಸೈಬರ್ ವಂಚಕರಿಂದ ಕಾವೇರಿ 2.0 ವೆಬ್‌ಸೈಟ್‌ ಗೆ ಕನ್ನ!

ವಾರ್ತಾಭಾರತಿವಾರ್ತಾಭಾರತಿ29 Oct 2023 3:22 PM IST
share
ಮಂಗಳೂರು | ಆಧಾರ್ ಸಂಖ್ಯೆ- ಹೆಬ್ಬೆರಳ ಗುರುತು ಸಂಗ್ರಹಿಸಿ ಹಣ ವರ್ಗಾವಣೆ: ಮೂವರು ಆರೋಪಿಗಳ ಬಂಧನ

ಮಂಗಳೂರು, ಅ. 29: ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆ (AEPS)ಯಡಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ದೀಪಕ್ ಕುಮಾರ್ ಹೆಂಬ್ರಮ್ (33), ವಿವೇಕ್‌ಕುಮಾರ್ ಬಿಸ್ವಾಸ್ (24), ಮದನ್ ಕಮಾರ್ (23) ಎಂದು ಗುರುತಿಸಲಾಗಿದೆ.

ಆರೋಪಿಗಳಿಗೆ ಸಂಬಂಧಿಸಿದ 10 ಬ್ಯಾಂಕ್ ಖಾತೆಗಳಿಂದ 3,60,242 ರೂ.ಗಳ ವಹಿವಾಟು ಸ್ಥಗಿತಗೊಳಿಸಲಾಗಿದ್ದು, ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ತಾಂತ್ರಿಕ ಪರಿಶೀಲನೆಗೊಳಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಅವರು ರವಿವಾರ ನಗರ ಸಶಸ್ತ್ರ ಮೀಸಲು ಪಡೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಸಂಬಂಧಿಸಿ ಅವರು ಈ ಮಾಹಿತಿ ನೀಡಿದರು.

ಆರೋಪಿಗಳು ಆಸ್ತಿ ನೋಂದಣಿಗೆ ಸಂಬಂಧಿಸಿದ ಕಾವೇರಿ- 2.0 ವೆಬ್‌ಸೈಟ್‌ನಿಂದ ದಾಖಲಾತಿಗಳನ್ನು ಅಕ್ರಮವಾಗಿ ಪಡೆದು ಅದರಲ್ಲಿರುವ ಆಧಾರ್ ಸಂಖ್ಯೆ ಮತ್ತು ಹೆಬ್ಬೆರಳ ಗುರುತನ್ನು ಸಂಗ್ರಹಿಸಿ ಸ್ಕ್ಯಾನರ್ ಮೂಲಕ ಬೆರಳಚ್ಚು ಮುದ್ರೆಯನ್ನು ಸ್ಕ್ಯಾನ್ ಮಾಡಿ ಸಂತ್ರಸ್ತರ ಬ್ಯಾಂಕ್ ಖಾತೆಗಳಿಂದ ಹಣವನ್ನು ತಮ್ಮ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ.

ಕಳೆದ ಆರು ತಿಂಗಳಿನಿಂದ ಮಂಗಳೂರು ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ಹಾಗೂ ಇತರ ನೋಂದಣಿ ಮಾಡಿಸಿದ ಬಳಿಕ ಕೆಲ ನೋಂದಣಿದಾರರ ಹಣವು ಕಳೆದ ಎರಡು ತಿಂಗಳಿನಿಂದೀಚೆಗೆ ಅವರ ವಿವಿಧ ಬ್ಯಾಂಕ್‌ಗಳಿಂದ ಎಇಪಿಎಸ್ ಮೂಲಕ ವರ್ಗಾವಣೆ ಆಗಿರುವ ಬಗ್ಗೆ ಮಂಗಳೂರು ಸೆನ್ ಕ್ರೈ ಪೊಲೀಸ್ ಠಾಣೆಗೆ ಹಲವು ದೂರುಗಳು ಬಂದಿದ್ದು, 10 ದೂರುಗಳು ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಹೇಳಿದರು.

ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ 1000ಕ್ಕೂ ಹೆಚ್ಚು ನೋಂದಣೆ ಪತ್ರಗಳ ಪಿಡಿಎಫ್ ಮತ್ತು ಆಂಧ್ರ ಪ್ರದೇಶ ಹಾಗೂ ಇತರ ಕೆಲವು ರಾಜ್ಯಗಳ 300ಕ್ಕೂ ಅಧಿಕ ಪಿಡಿಎಫ್ ಪ್ರತಿಗಳನ್ನು ಆರೋಪಿಗಳು ಸಂಗ್ರಹಿಸಿಟ್ಟುವುದು ತನಿಖೆಯ ವೇಳೆ ಕಂಡು ಬಂದಿದೆ. ಹೆಚ್ಚುವರಿ ತನಿಖೆಗಾಗಿ ಅರೋಪಿಗಳನ್ನು ಬಿಹಾರಕ್ಕೆ ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿ ದಾಖಲಿಸಿ ಸಂಗ್ರಹಿಸಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X